ಚೆನ್ನೈ:ವೀರಪ್ಪನ್ ಪುತ್ರಿ ತಮಿಳುನಾಡಿನ ಕೃಷ್ಣಗಿರಿಯಿಂದ ಸ್ಪರ್ಧೆ

ಸಮಗ್ರ ನ್ಯೂಸ್: ಕಾಡುಗಳ್ಳ ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಲೋಕ‌ ಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಅವರು ‘ನಾಮ್‌ ತಮಿಳರ್‌ ಕಚ್ಚಿ’ (ಎನ್‌ಟಿಕೆ) ಪಕ್ಷದ ಅಭ್ಯರ್ಥಿಯಾಗಿ ತಮಿಳುನಾಡಿನ ಕೃಷ್ಣಗಿರಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

Ad Widget ... ..

ವಕೀಲೆಯಾಗಿರುವ ವಿದ್ಯಾರಾಣಿ ಕೃಷ್ಣಗಿರಿಯಲ್ಲಿ ಶಾಲೆ ನಡೆಸುತ್ತಿದ್ದಾರೆ. 2020ರ ಜುಲೈನಲ್ಲಿ ಬಿಜೆಪಿ ಸೇರಿ ಪಕ್ಷದ ರಾಜ್ಯ ಯುವ ಘಟಕದ ಉಪಾಧ್ಯಕ್ಷೆಯಾಗಿ ನೇಮಕಗೊಂಡಿದ್ದರು. ಇತ್ತೀಚೆಗೆ ಆ ಪಕ್ಷವನ್ನು ತೊರೆದು ಎನ್‌ಟಿಕೆಗೆ ಸೇರಿದ್ದಾರೆ.

Ad Widget

ತಮಿಳುನಾಡು ಹಾಗೂ ಪುದುಚೇರಿಯ ಒಟ್ಟು 40 ಕ್ಷೇತ್ರಗಳಲ್ಲಿ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಪ್ರಕಟಿಸಿರುವ ಸೀಮನ್‌, ‘ವಿದ್ಯಾ ರಾಣಿ ಕೃಷ್ಣಗಿರಿಯಿಂದ ಸ್ಪರ್ಧಿಸಲಿದ್ದಾರೆ’ ಎಂದು ಘೋಷಿಸಿದ್ದಾರೆ.

Leave a Comment

Your email address will not be published. Required fields are marked *