Ad Widget .

ನನ್ನನ್ನು ಚಿತ್ರೋದ್ಯಮ ಮರೆತಿದೆ; ಆಶಿಷ್ ವಿದ್ಯಾರ್ಥಿ

ಸಮಗ್ರ ನ್ಯೂಸ್: ಆಶಿಷ್ ವಿದ್ಯಾರ್ಥಿ ಕನ್ನಡವೂ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿದ್ದು, ನನಗೆ ಅವಕಾಶ ನೀಡುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಹಲವಾರು ಭಾಷೆಗಳಲ್ಲಿ ನಟಿಸಿದ್ದರೂ, ವಿವಿಧ ಪಾತ್ರಗಳನ್ನು ಮಾಡಿದ್ದರೂ, ನನ್ನನ್ನು ಚಿತ್ರೋದ್ಯಮ ಮರೆತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

Ad Widget . Ad Widget .

ನನ್ನನ್ನು ಎಲ್ಲರೂ ವಿಲನ್ ರೀತಿಯಲ್ಲಿ ನೋಡುತ್ತಿದ್ದಾರೆ. ನಾನು ಸಾಕಷ್ಟು ಪಾತ್ರಗಳಲ್ಲಿ ನಟಿಸಿದ್ದೇನೆ. ಬೇರೆ ಬೇರೆ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಅವೆಲ್ಲವನ್ನೂ ಜನರು ಮತ್ತು ಉದ್ಯಮ ಮೆಚ್ಚಿಕೊಂಡಿದೆ. ಆದರೂ, ನನಗೆ ಕೆಲಸ ಕೊಡುತ್ತಿಲ್ಲ. ದಯವಿಟ್ಟು ಅವಕಾಶ ನೀಡಿ ಎಂದು ಅವರು ಕೇಳಿಕೊಂಡಿದ್ದಾರೆ. ಆಶಿಷ್ ವಿದ್ಯಾರ್ಥಿ ಇತ್ತೀಚೆಗಷ್ಟೇ 2ನೇ ಮದುವೆ ಆಗಿದ್ದು, ಮದುವೆ ನಂತರ ಬಂದ ಟೀಕೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ತಮಗೆ ಅವಕಾಶ ಸಿಗುತ್ತಿಲ್ಲವೆಂದು ಹೇಳಿಕೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *