ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾಪಡೆಯ ವಾಯುನೆಲೆ ಮೇಲೆ ಉಗ್ರರ ದಾಳಿ

ಸಮಗ್ರ ನ್ಯೂಸ್: ಉಗ್ರರು ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ದೇಶದ ಎರಡನೇ ಅತಿದೊಡ್ಡ ನೌಕಾಪಡೆಯ ವಾಯುನೆಲೆ ಮೇಲೆ ದಾಳಿ ನಡೆಸಿದ್ದಾರೆ. ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, ಗ್ರೆನೇಡ್ಗಳೊಂದಿಗೆ ಭಯೋತ್ಪಾದಕರು ಟರ್ಬತ್‍ನಲ್ಲಿರುವ ಪಾಕಿಸ್ತಾನದ ನೌಕಾ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ.

Ad Widget ... ..

ಪಾಕಿಸ್ತಾನದ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ. ಈ ದಾಳಿಯಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳಿಗೆ ಯಾವುದೇ ರೀತಿ ಹಾನಿಯಾಗಿಲ್ಲ. ಒಟ್ಟಾರೆ ಆರು ಉಗ್ರರು ದಾಳಿ ನಡೆಸಿದ್ದು, ನಾಲ್ವರನ್ನು ಹತ್ಯೆ ಮಾಡಲಾಗಿದೆ. ಇನ್ನುಳಿದ ಇಬ್ಬರು ತಪ್ಪಿಸಿಕೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *