ಕ್ರೀಡಾಂಗಣದಲ್ಲಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ ಕೇಸ್

ಸಮಗ್ರ ನ್ಯೂಸ್ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ನಡುವಣ ಐಪಿಎಲ್ ಪಂದ್ಯದ ವೇಳೆ ಆರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಕ್ರೀಸ್​ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್​ ಬಳಿ ಬಂದು ಕೊಹ್ಲಿಯ ಕಾಲು ಹಿಡಿದ ಘಟನೆ ನಡೆದಿದ್ದು, ತಕ್ಷಣ ಆತನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Ad Widget ... ..

ರಾಯಚೂರಿನಿಂದ ಬಂದಿದ್ದ ಅಪ್ರಾಪ್ತ ಎಂಬ ಮಾಹಿತಿ ತಿಳಿದು ಬಂದಿದೆ. ಈತ 3000 ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್ ಖರೀದಿ ಮಾಡಿದ್ದನು. ಈತ ವಿರಾಟ್ ಕೊಹ್ಲಿಯ ಹುಚ್ಚು ಅಭಿಮಾನಿಯಾಗಿದ್ದು, ರಾಯಚೂರಿನ ಅಪ್ರಾಪ್ತನ ಮೇಲೆ ಕಬ್ಬನ್ ಪಾರ್ಕ್​ ಠಾಣೆ ಪೊಲೀಸರು ಕರ್ತವ್ಯಕ್ಕೆ ಅಡ್ಡಿ, ಮೈದಾನಕ್ಕೆ ಅತಿಕ್ರಮಣ ಪ್ರವೇಶದಡಿ ಕೇಸ್ ದಾಖಲಿಸಿಕೊಂಡು ಆತನ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *