Ad Widget .

ಮೋದಿ ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ/ ಅವಹೇಳನಕಾರಿ ಹೇಳಿಕೆ ನೀಡಿದ ಶಿವರಾಜ ತಂಡರಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಸಮಗ್ರ ನ್ಯೂಸ್: ಮೋದಿ ಮೋದಿ ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬುದಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ ತಂಡರಗಿ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ವಕ್ತಾರ ವೆಂಕಟೇಶ್ ದೊಡೇರಿ, ರಾಜ್ಯ ಸಂಚಾಲಕ ವಸಂತ್ ಕುಮಾರ್ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

Ad Widget . Ad Widget .

ವಿದ್ಯಾರ್ಥಿಗಳು, ಯುವಕರು ಮೋದಿ ಎಂದರೆ ಕಪಾಳಕ್ಕೆ ಹೊಡೆಯಿರಿ ಎಂದು ನಮ್ಮ ಪಕ್ಷದ ಮತದಾರರ ವಿರುದ್ಧ ಪ್ರಚೋದನಾತ್ಮಕ ಮಾತುಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಯುವ ಮತದಾರರ ಮೇಲೆ ಎತ್ತಿ ಕಟ್ಟಿ ಮತ್ತು ದ್ವೇಷ ಭಾವನೆ ಮೂಡುವಂತೆ ಮಾಡಿ ಮತದಾರರಿಗೆ ಹಲ್ಲೆ ಮಾಡುವಂತೆ ಪ್ರಚೋದಿಸಿರುತ್ತಾರೆ ಎಂದು ತಿಳಿಸಿದ್ದಾರೆ.

Ad Widget . Ad Widget .

ಇಂತಹ ಹೇಳಿಕೆಗಳಿಂದ ಯುವ ಮತದಾರರು ಆಂತಕಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ ಮತ್ತು ಮತದಾನದಿಂದ ದೂರ ಉಳಿಯುವ ಸಂಭವವು ಹೆಚ್ಚಿರುತ್ತದೆ. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ. ಆದ ಕಾರಣ ನೀವು ಸದರಿ ಸಚಿವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಕೈಗೊಂಡು ಅವರನ್ನು ಚುನಾವಣಾ ಪ್ರಕ್ರಿಯೆಯಿಂದ ಹಾಗೂ ಕಾಂಗ್ರೆಸ್ ಪಕ್ಷದ ಪರ ಚುನಾವಣ ಪ್ರಚಾರದಿಂದ ನಿರ್ಬಂಧಿಸಬೇಕೆಂದು ಆಗ್ರಹಿಸಿದ್ದಾರೆ

Leave a Comment

Your email address will not be published. Required fields are marked *