Ad Widget .

ಪೋನ್ ಕದ್ದಾಲಿಕೆ ಪ್ರಕರಣ/ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಪ್ರಮುಖ ಆರೋಪಿ

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಲೋಕಸಭೆ ಚುನಾವಣೆ ಅಬ್ಬರದ ನಡುವೆ ನಡೆದಿತ್ತು ಎನ್ನಲಾದ ಪೋನ್ ಕದ್ದಾಲಿಕೆ ಪ್ರಕರಣದಲ್ಲಿ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಅವರನ್ನು ಆರೋಪಿ ನಂ.1 ಎಂದು ಹೆಸರಿಸಲಾಗಿದೆ. ಸದ್ಯ ಪ್ರಭಾಕರ್ ರಾವ್ ಅಮೆರಿಕದಲ್ಲಿದ್ದಾರೆ ಎಂದು ಅಂದಾಜಿಸಲಾಗಿದ್ದು, ಅವರ ವಿರುದ್ಧ ಹೈದರಾಬಾದ್ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕೆ ಚಂದ್ರಶೇಖರ ರಾವ್ ನೇತೃತ್ವದ ಹಿಂದಿನ ಬಿಆರ್‍ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರ ಪೋನ್‍ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡುವ ಮೂಲಕ ದತ್ತಾಂಶಗಳನ್ನು ಸಂಗ್ರಹಿಸಿದ ಆರೋಪದ ಮೇರೆಗೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಕಮಿಷನರ್ ಕಾರ್ಯಪಡೆಯ (ಹೈದರಾಬಾದ್ ಪೊಲೀಸ್ ವಿಭಾಗ) ಆಗಿನ ಪೊಲೀಸ್ ಉಪ ಆಯುಕ್ತ ಪಿ ರಾಧಾಕೃಷ್ಣ ಮತ್ತು ತೆಲುಗು ಟಿವಿ ಚಾನೆಲ್‍ನ ಹಿರಿಯ ಕಾರ್ಯನಿರ್ವಾಹಕರ ವಿರುದ್ಧವೂ ಲುಕ್‍ಔಟ್ ನೋಟಿಸ್ ಜಾರಿ ಮಾಡಲಾಗಿದೆ.

Ad Widget . Ad Widget . Ad Widget .

ಇನ್ನು ಪ್ರಕರಣದಲ್ಲಿ ಈಗಾಗಲೇ ಮೂವರು ಐಪಿಎಸ್ ದರ್ಜೆ ಅಧಿಕಾರಿಗಳನ್ನು ಬಂಧಿಸಲಾಗಿದೆ. ಹೆಚ್ಚುವರಿ ಎಸ್ಪಿಗಳಾದ ಭುಜಂಗ ರಾವ್, ತಿರುಪತಣ್ಣ, ಮತ್ತು ಡಿವೈಎಸ್‍ಪಿ ಪ್ರಣೀತ್ ರಾವ್ ಅವರನ್ನು ಬಂಧಿಸಲಾಗಿದೆ. ಅವರನ್ನು ಭಾನುವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Leave a Comment

Your email address will not be published. Required fields are marked *