Ad Widget .

ಪಾಕಿಸ್ತಾನದ ʼಪಿಎನ್‌ಎಸ್ ಸಿದ್ದಿಕ್ʼ ನೌಕಾ ವಿಮಾನ ನಿಲ್ದಾಣದ ಮೇಲೆ ದಾಳಿ

ಸಮಗ್ರ ನ್ಯೂಸ್: ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾ ವಿಮಾನ ನಿಲ್ದಾಣವಾದ ಟರ್ಬತ್‌ನಲ್ಲಿರುವ ಪಿಎನ್‌ಎಸ್ ಸಿದ್ದಿಕ್ ಮೇಲೆ ದಾಳಿ ನಡೆದಿದೆ.‌

Ad Widget . Ad Widget .

ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ ಮಜೀದ್ ಬ್ರಿಗೇಡ್, ಟರ್ಬತ್‌ನಲ್ಲಿರುವ ನೌಕಾ ವಾಯುನೆಲೆಯ ಮೇಲಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಬಲೂಚಿಸ್ತಾನ್ ಪೋಸ್ಟ್ ವರದಿ ಮಾಡಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad Widget . Ad Widget .

ಬಲೂಚಿಸ್ತಾನದಲ್ಲಿ ಚೀನಾದ ಹೂಡಿಕೆಗೆ ಮಜೀದ್‌ ಬ್ರಿಗೇಡ್‌ ಟೀಕೆ ವ್ಯಕ್ತಪಡಿಸಿದ್ದು, ಈ ಪ್ರದೇಶದ ಸಂಪನ್ಮೂಲಗಳನ್ನು ಚೀನಾ ಮತ್ತು ಪಾಕಿಸ್ತಾನ ಎರಡೂ ದೇಶಗಳು ಬಳಸಿಕೊಳ್ಳುತ್ತಿವೆ ಎಂದು ಆರೋಪ ಮಾಡಿದೆ. ತನ್ನ ಯೋಧರು ವಾಯುನೆಲೆಯೊಳಗೆ ನುಸುಳಿದ್ದಾರೆ ಎಂದು ಬಿಎಲ್‌ಎ ಹೇಳಿಕೊಂಡಿದೆ. ಹೆಚ್ಚುವರಿಯಾಗಿ, ಚೀನಾದ ಡ್ರೋನ್‌ಗಳನ್ನು ನಿಯೋಜಿಸಲಾಗಿದೆ. ಘಟನೆಯ ಬಳಿಕ ಹೆಲಿಕಾಪ್ಟರ್‌ಗಳು ಆಕಾಶದಲ್ಲಿ ಗಸ್ತು ತಿರುಗಿವೆ. ಟರ್ಬಟ್ ಮಿಲಿಟರಿ ಚಟುವಟಿಕೆಯಲ್ಲಿ ಗಮನಾರ್ಹ ಹೆಚ್ಚಳ ಮಾಡಲಾಗಿದೆ. ಮೂರು ಗಂಟೆಗಳ ಕಾಲ ಗುಂಡಿನ ಚಕಮಕಿ ಮತ್ತು ಸ್ಫೋಟಗಳು ನಡೆದಿವೆ ಎಂದು ವರದಿಯಾಗಿದೆ.

ದಾಳಿಯಲ್ಲಿ 10 ಕ್ಕೂ ಹೆಚ್ಚು ಪಾಕಿಸ್ತಾನಿ ಸಿಬ್ಬಂದಿಯನ್ನು ಕೊಂದಿರುವುದಾಗಿ ಬಿಎಲ್‌ಎ ಹೇಳಿಕೊಂಡಿದೆ. ತಮ್ಮವರು ಪಿಎನ್‌ಎಸ್‌ ಸಿದ್ದಿಕ್ ಮೇಲೆ ದಾಳಿ ಮಾಡಿದ್ದಾರೆಂದು ಹೇಳಲಾದ ಆಡಿಯೊ ಕ್ಲಿಪ್ ಅನ್ನು ಸಹ ಬಿಡುಗಡೆ ಮಾಡಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *