Ad Widget .

ಬಿಜೆಪಿ ಟಿಕೆಟ್ ಪಡೆದ ನಟ ಅರುಣ್ ಗೋವಿಲ್

ಸಮಗ್ರ ನ್ಯೂಸ್ : ರಾಮಾಯಣ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್ ಗೋವಿಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಈ ಬಾರಿ ಲೋಕಸಭೆ ಅಖಾಡದಲ್ಲಿ ಅರುಣ್ ಗೋವಿಲ್ ಕಾಣಿಸಿಕೊಳ್ಳಲಿದ್ದಾರೆ.

Ad Widget . Ad Widget .

ಟಿಕೆಟ್ ನೀಡಿದ್ದಕ್ಕಾಗಿ ಆಯ್ಕೆ ಸಮಿತಿ ಮತ್ತು ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಮೀರತ್ ಕ್ಷೇತ್ರದಿಂದ ನನ್ನನ್ನು ಸಂಸದ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಭಾರತೀಯ ಜನತಾ ಪಕ್ಷ ಮತ್ತು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಸಂಪೂರ್ಣ ಪ್ರಯತ್ನ ಮಾಡುತ್ತೇನೆ. ಜೈ ಶ್ರೀರಾಮ್’ ಎಂದು ಅರುಣ್ ಗೋವಿಲ್ ಅವರು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Ad Widget . Ad Widget .

ಇದರ ಜೊತೆಗೆ ನಟಿ ಕಂಗನಾ ರಣಾವತ್ ಅವರಿಗೂ ಬಿಜೆಪಿಯಿಂದ ಟಿಕೆಟ್ ಸಿಕ್ಕಿದ್ದು, ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ತವರು ರಾಜ್ಯ ಹಿಮಾಚಲ ಪ್ರದೇಶದ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಂಗನಾ ರಣಾವತ್ ತವರು ರಾಜಕೀಯಕ್ಕೆ ಬರುತ್ತಾರೆ ಎನ್ನುವ ಸುದ್ದಿ ಹಲವು ತಿಂಗಳುಗಳಿಂದ ಸದ್ದು ಮಾಡುತ್ತಿದ್ದು, ಅವರು ಕೂಡ ಕೃಷ್ಣ ಕಣ್ಬಿಟ್ಟರೆ ರಾಜಕೀಯಕ್ಕೆ ಬರೋದು ದೊಡ್ಡ ವಿಷಯವೇ ಅಲ್ಲ ಎಂದೂ ಹೇಳಿದ್ದರು. ಜೊತೆಗೆ ರಾಜಕೀಯ ಮುಖಂಡರನ್ನು ಭೇಟಿ ಮಾಡುವ ಮೂಲಕ ಟಿಕೆಟ್ ಬೇಡಿಕೆಯನ್ನೂ ಇಟ್ಟಿದ್ದರು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Leave a Comment

Your email address will not be published. Required fields are marked *