ಸಮಗ್ರ ನ್ಯೂಸ್: ಮೋಹಕ ತಾರೆ ರಮ್ಯಾ 8 ವರ್ಷಗಳ ನಂತರ ಮತ್ತೆ ಬಣ್ಣದ ಲೋಕಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಿತ್ತು. ʼಉತ್ತರಕಾಂಡʼ ಸಿನಿಮಾದಲ್ಲಿ ಡಾಲಿ ಧನಂಜಯ್ಗೆ ಜೋಡಿಯಾಗಿ ಮೋಹಕ ತಾರೆ ಕಾಣಿಸಿಕೊಂಡು ಸ್ಯಾಂಡಲ್ವುಡ್ನಲ್ಲಿ ಹಂಗಮಾ ಸೃಷ್ಟಿ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು.
ಡೇಟ್ಸ್ ಹೊಂದಾಣಿಕೆ ಆಗದ ಕಾರಣ, ನಾನು ಉತ್ತರಕಾಂಡ ಸಿನಿಮಾದಲ್ಲಿ ನಟಿಸುತ್ತಿಲ್ಲ. ನನ್ನ ಸಿನಿಮಾ ಮತ್ತು ರಾಜಕೀಯ ಕೆಲಸಗಳನ್ನು ಸದ್ಯ ಕಾಯ್ದಿರಿಸಿದ್ದೇನೆ. ಆದರೆ ಚಿತ್ರತಂಡಕ್ಕೆ ಶುಭವಾಗಲಿ ಎಂದು ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಉತ್ತರಕಾಂಡ ಚಿತ್ರದಲ್ಲಿ ಡಾಲಿ ಧನಂಜಯ್ಗೆ ನಾಯಕಿಯಾಗಿ ರಮ್ಯಾ ಕಾಣಿಸಿಕೊಳ್ಳುವುದಾಗಿ ಕಳೆದ ವರ್ಷ ಘೋಷಣೆಯಾಗಿತ್ತು. ಅದ್ಧೂರಿಯಾಗಿ ಮುಹೂರ್ತ ಕೂಡ ನೆರವೇರಿತ್ತು. ಚಿತ್ರದಲ್ಲಿ ಶಿವಣ್ಣ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಈಗ ರಮ್ಯಾ ಚಿತ್ರದಿಂದ ಹೊರನಡೆದಿದ್ದು ಅಭಿಮಾನಿಗಳಿಗೆ ಹಾಗೂ ಚಿತ್ರತಂಡಕ್ಕೆ ಬೇಸರ ಮೂಡಿಸಿದೆ.
ಉತ್ತರಕಾಂಡ ಚಿತ್ರದ ಚಿತ್ರೀಕರಣ ಈಗಾಗಲೇ ಶುರುವಾಗಿದೆ. ಚಿತ್ರಕ್ಕೆ ‘ರತ್ನನ್ ಪ್ರಪಂಚ’ ಖ್ಯಾತಿಯ ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದು, ಕೆಆರ್ಜಿ ಸಂಸ್ಥೆ ಬಂಡವಾಳ ಹೂಡಿದೆ. ಸದ್ಯ ರಮ್ಯಾರಿಂದ ತೆರವಾಗಿರುವ ಜಾಗಕ್ಕೆ ಯಾರು ಬರ್ತಾರೆ ಎಂದು ಕಾದು ನೋಡಬೇಕಿದೆ.