Ad Widget .

ಚಿಕ್ಕಮಗಳೂರು:೪ ಕೋಟಿ ಮೌಲ್ಯದ ಚಿನ್ನಾಭರಣ ವಶ

ಸಮಗ್ರ ನ್ಯೂಸ್: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ೬ ಕೆಜಿ ೫೮೬ ಗ್ರಾಂ ಚಿನ್ನ, ೧ ಕೆಜಿ ೭೧.೪೯೨ ಗ್ರಾಂ ವಜ್ರಾಭರಣ, ೧ ಕೆಜಿ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಂದ ಒಂದು ಕಾರು ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಹೀಗಾಗಿ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಕೋಟ್ಯಂತರ ಮೌಲ್ಯದ ಚಿನ್ನಾ ಭರಣಗಳು ಪತ್ತೆಯಾಗಿವೆ. ಸಾಗಿಸಲಾಗುತ್ತಿದ್ದ ಚಿನ್ನ, ಬೆಳ್ಳಿ, ಡೈಮಂಡ್‌ಗಳ ದಾಖಲೆಗಳನ್ನು ಕೇಳಿದಾಗ ಸಂಬಂಧಪಟ್ಟವರು ದಾಖಲೆ ನೀಡಿಲ್ಲ. ಹೀಗಾಗಿ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿ ಚಿನ್ನಾಭರಣದ ಮೂಲದ ಕುರಿತು ತನಿಖೆ ನಡೆಸುತ್ತಿದ್ದಾರೆ.

Ad Widget . Ad Widget .

ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಕೋಟ್ಯಂತರ ಮೌಲ್ಯದ ಚಿನ್ನ, ಡೈಮಂಡ್ಸ್ ಹಾಗೂ ಬೆಳ್ಳಿ ವಸ್ತುಗಳನ್ನು ಟ್ರಕ್ ಮೂಲಕ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಚುನಾವಣಾಧಿಕಾರಿಗಳು, ಪೊಲೀಸರು ಟ್ರಕ್ ತಡೆದು ಪರಿ ಶೀಲನೆ ನಡೆಸಿದಾಗ ಚಿನ್ನಾಭರಣಗಳನ್ನು ಸಾಗಿ ಸುತ್ತಿರುವ ವಿಚಾರ ತಿಳಿದು ಬಂದಿದೆ. ಪ್ರಾಥಮಿಕ ತನಿಖೆ ವೇಳೆ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿರುವುದು ತಿಳಿದುಬಂದ ಹಿನ್ನೆಲೆ ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

Leave a Comment

Your email address will not be published. Required fields are marked *