ಸಮಗ್ರ ನ್ಯೂಸ್: ಕೋಲಾರ ಕಾಂಗ್ರೆಸ್ ಟಿಕೆಟ್ ಇನ್ನಷ್ಟು ಕಗ್ಗಂಟಾಗಿಯೆ ಉಳಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಧಾನ ಸಭೆ ನಡೆಸಿದರೂ, ನಾಯಕರ ನಡುವಿನ ಭಿನ್ನಮತ ಶಮನವಾಗಿಲ್ಲ.
ಸಚಿವ ಕೆ.ಹೆಚ್.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಬೆದರಿಕೆ ಹಾಕಿದ್ದಾರೆ. ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರ ಬಳಿ ಸಮಯ ಕೇಳಿದ್ದೇವೆ, ಸ್ಪೀಕರ್ ಬಳಿ ಸುಧಾಕರ್ ಸಮಯ ಕೇಳಿದ್ದಾರೆ ಎಂದು ಎಂಎಲ್ ಸಿ ಅನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಸಚಿವ ಎಂ.ಸಿ ಸುಧಾಕರ್, ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ಕೆ.ವೈ ನಂಜೇಗೌಡ, ನಜೀರ್ ಅಹ್ಮದ್, ಪರಿಷತ್ ಸದಸ್ಯ ಅನಿಲ್ ಕುಮಾರ್ ರಾಜೀನಾಮೆ ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಸ್ಪೀಕರ್ ಯು.ಟಿ ಖಾದರ್ ಭೇಟಿಗೆ ಶಾಸಕರು, ಸಚಿವರು ಮುಂದಾಗಿದ್ದಾರೆ. ಮಂಗಳೂರಿಗೆ ವಿಮಾನ ಟಿಕೆಟ್ ಅನ್ನು ಈಗಾಗಲೇ ಬುಕ್ ಮಾಡಿದ್ದಾರೆ. ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡಿದ್ದರೆ ರಾಜೀನಾಮೆ ನೀಡುವುದಾಗಿ ಆಕ್ರೋಶ ಹೊರಹಾಕಿದ್ದಾರೆ.
ಇತ್ತ ಸದಾಶಿವನಗರದಲ್ಲಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಕೆ.ಎಚ್ ಮುನಿಯಪ್ಪ ಭೇಟಿ ಮಾಡಿದ್ದಾರೆ. ಅಳಿಯನಿಗೆ ಟಿಕೆಟ್ ಕೊಡಲು ಮನವಿ ಮಾಡಿದ್ದಾರೆ. ಶಾಸಕರು ರಾಜೀನಾಮೆ ಕೊಡುವ ವಿಚಾರವಾಗಿ ಅವರನ್ನೆ ನೀವು ಕೇಳಿ ಎಂದು ಹೇಳಿದ್ದಾರೆ.