Ad Widget .

ಡಿಕೆಶಿ ಸಿಎಂ ಆಗಲಿ ಎಂದು ಅರ್ಚಕರಿಂದ ಸಂಕಲ್ಪ; ಅರ್ಚಕರು ಹೇಳಿದರಲ್ಲಿ ತಪ್ಪೇನು ಎಂದ ಶಿವಕುಮಾರ್

ಸಮಗ್ರ ನ್ಯೂಸ್: ಡಿಸಿಎಂ ಡಿ.ಕೆ. ಶಿವಕುಮಾರ್‌ ನಿನ್ನೆ ಟೆಂಪಲ್‌ ರನ್‌ ಮಾಡಿದ್ದು, ಧರ್ಮಸ್ಥಳ, ಶೃಂಗೇರಿ ಸೇರಿದಂತೆ ಹಲವು ಕಡೆ ಭೇಟಿ ನೀಡಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ಭೇಟಿ ನೀಡಿ ಮಹಾಬಲೇಶ್ವರ ಸನ್ನಿದಿಯಲ್ಲಿ ಆತ್ಮಲಿಂಗ ಪೂಜೆ ಸಲ್ಲಿಸಿದ್ದಾರೆ. ಇದೇ ಸಂಧರ್ಭದಲ್ಲಿ ಡಿ.ಕೆ‌‌. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಅರ್ಚಕರು ಸಂಕಲ್ಪ ಮಾಡಿದ್ದಾರೆ.

Ad Widget . Ad Widget .

ಗೋಕರ್ಣದಲ್ಲಿ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಮಹಾಬಲೇಶ್ವರ ದೇವಸ್ಥಾನದ ಅರ್ಚಕರು ಈ ಸಂಕಲ್ಪವನ್ನು ಮಾಡಿದ್ದು, ಡಿಕೆಶಿಯಿಂದ ವಿಧಿ ವಿಧಾನದಂತೆ ಶಿವನ ಪೂಜೆ ಮಾಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಡಿ‌.ಕೆ‌. ಶಿವಕುಮಾರ್ ವಿಶೇಷ ಪೂಜೆಯನ್ನು ನೆರವೇರಿಸಿದ್ದಾರೆ.

Ad Widget . Ad Widget .

ಇದೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿ‌.ಕೆ. ಶಿವಕುಮಾರ್, ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ, ಅವರಿಗೂ ಆಸೆಯಿರುತ್ತದೆ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ. ಕೆಲವರು ನನ್ನನ್ನು ಸಿಎಂ ಆಗಲಿ ಎಂದು ಹೇಳುತ್ತಾರೆ. ಅವರ ಬಾಯಲ್ಲಿ ಬರುವುದನ್ನು ತಪ್ಪಿಸಲು ಸಾಧ್ಯವೇ? ಯಾರು ಏನೇ ಆಸೆಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ, ಬೆಳೆ ಆಗಲಿ ಎಂಬುದಾಗಿ ಪ್ರಾರ್ಥಿಸಿಕೊಂಡಿದ್ದೇನೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *