ಸಮಗ್ರ ನ್ಯೂಸ್: ನಳಿನ್ ಕುಮಾರ್ ಕಟೀಲ್ ಅವರಿಗೆ ಹೈಕಮಾಂಡ್ ಒಂದು ಮಹತ್ವದ ಜವಾಬ್ದಾರಿ ನೀಡಿದೆ. ಹೌದು, ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ಕೈತಪ್ಪಿದ್ದರಿಂದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ಗೆ ಹೈಕಮಾಂಡ್ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.
ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್, ಮಹಾರಾಷ್ಟ್ರದ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನಿರ್ಮಲ್ ಕುಮಾರ್ ಸುರಾನಾ ಅವರನ್ನು ನೇಮಕ ಮಾಡಲಾಗಿದೆ.

















