Ad Widget .

ಕೂಜಿಮಲೆ‌ ಪ್ರದೇಶದಲ್ಲಿ ಮತ್ತೆ ನಕ್ಸಲ್ ಸಂಚಾರ!?| ರಬ್ಬರ್ ತೋಟದಲ್ಲಿ ಕಂಡುಬಂದ ಅಪರಿಚಿತ ಮಹಿಳೆ ಯಾರು? ಚುರುಕುಗೊಂಡ ಶೋಧ ಕಾರ್ಯಾಚರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಕೊಡಗು ಗಡಿ ಭಾಗದ ಕೂಜಿಮಲೆ ಎಸ್ಟೇಟ್‌ ಪ್ರದೇಶದಲ್ಲಿ ಬುಧವಾರ ಅಪರಿಚಿತ ಮಹಿಳೆ ಓಡಾಡಿದ್ದು, ಆಕೆ ನಕ್ಸಲ್‌ ಎಂಬ ಶಂಕೆಯ ಹಿನ್ನೆಲೆಯಲ್ಲಿ ಶೋಧ ನಡೆಸಲಾಗಿದೆ.

Ad Widget . Ad Widget .

ಬುಧವಾರ (ಮಾ27) ಮಧ್ಯಾಹ್ನ 12ರ ಬಳಿಕ ಅಪರಿಚಿತ ಮಹಿಳೆ ಎಸ್ಟೇಟ್‌ನ ರಬ್ಬರ್‌ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದು, ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್) ಆಗಮಿಸಿ ಶೋಧ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಹೇಳಲಾಗಿದೆ. ಶಂಕಿತ ಮಹಿಳೆ ರಬ್ಬರ್‌ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.

Ad Widget . Ad Widget .

ನಕ್ಸಲ್‌ ನಿಗ್ರಹ ಪಡೆ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದೆ ಎನ್ನಲಾಗಿದ್ದು, ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್‌ಎಫ್‌ ತಂಡ ಎಸ್ಟೇಟ್‌ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ನಡೆಸಿದೆ.

ಮಾ. 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್‌ನ ಅಂಗಡಿಗೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಮಾ. 23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದುಕೊಂಡು ತೆರಳಿದ್ದರು. ಮಾ. 27ರಂದು ಮತ್ತೆ ಕೂಜಿಮಲೆ ಎಸ್ಟೇಟ್‌ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ. 18ರಿಂದ ಈ ಭಾಗ ಸಹಿತ ವಿವಿಧೆಡೆ ನಕ್ಸಲ್‌ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದೆ.

Leave a Comment

Your email address will not be published. Required fields are marked *