Ad Widget

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ದುರಂತ| ಮೂರು ಕೋಟಿಗೂ ಮಿಕ್ಕಿ ನಷ್ಟ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಶಿಹಾರ್ ಎಂಟರ್ ಪ್ರೈಸಸ್ ಎಂಬ ಈ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ 4:45ರ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಫ್ಯಾಕ್ಟರಿಯನ್ನು ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಎಂಆರ್ ಪಿಎಲ್, ಎನ್ ಎಂಪಿಟಿನಿಂದ ಸುಮಾರು 8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟವು.

Ad Widget . Ad Widget . Ad Widget .

ನಿರಂತರ ಮೂರೂವರೆ ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಆದರೆ ಅಷ್ಟರಲ್ಲಿ ಫ್ಯಾಕ್ಟರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ, ಅಂದಾಜು 3 ಕೋಟಿ ರೂ.ನ ನಾಶ ನಷ್ಟ ಸಂಭವಿಸಿದೆ ಎನ್ನಲಾಗಿದೆ

Leave a Comment

Your email address will not be published. Required fields are marked *