Ad Widget .

ತಡರಾತ್ರಿ ಬೆಂಗಳೂರಿನ ರೆಸ್ಟೋರೆಂಟ್ ಗೆ ಬಂತು ಬಾಂಬ್ ಬೆದರಿಕೆ ಕರೆ

ಸಮಗ್ರ ನ್ಯೂಸ್: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಬೆನ್ನಲ್ಲೇ ಬೆಂಗಳೂರಿನಲ್ಲಿ ನಿನ್ನೆ ತಡ ರಾತ್ರಿ ಬಾಂಬ್ ಬೆದರಿಕೆ ಕರೆಯೊಂದು ಬಂದಿದೆ. ವ್ಯಕ್ತಿಯೊಬ್ಬ ರೆಸ್ಟೋರೆಂಟ್​ಗೆ ಕರೆ ಮಾಡಿ ಶೀಘ್ರದಲ್ಲೇ ರೆಸ್ಟೋರೆಂಟ್​ನಲ್ಲಿ ಬಾಂಬ್ ಸ್ಫೋಟವಾಗುತ್ತೆ ಎಂದು ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಸತ್ಯಾಂಶ ತಿಳಿದುಬಂದಿದೆ.

Ad Widget . Ad Widget .

ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಬೆಚ್ಚಿಬಿದ್ದ ರೆಸ್ಟೋರೆಂಟ್‌ನವರು ಪೊಲೀಸರನ್ನು ಕರೆಸಿದ್ದರು. ರಾತ್ರಿ ಪೂರ್ತಿ ರೆಸ್ಟೋರೆಂಟ್ ಪರಿಶೀಲನೆ ನಡೆಸಿದರು ಆದರೆ ಪೊಲೀಸರಿಗೆ ಬಾಂಬ್‌ ಕಂಡುಬರಲಿಲ್ಲ.

Ad Widget . Ad Widget .

ಕೊನೆಗೆ ಅನುಮಾನದಿಂದ ತನಿಖೆ ನಡೆಸಿ ಇಂದಿರಾನಗರ ಬ್ರಾಂಚ್​ನಲ್ಲಿ ಕೆಲಸ ಮಾಡುತ್ತಿದ್ದ ವೇಲು ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಇತನೇ ಈ ಕೃತ್ಯ ಮಾಡಿದ್ದು ಎಂದು ಸಾಬೀತಾಯಿತ್ತು. ಈತ ರೆಸ್ಟೋರೆಂಟ್‌ನ ನೌಕರ, ಕೆಲಸ ಮಾಡುವ ವೇಲು ತನಗೆ ಸಂಬಳ ಕೊಟ್ಟಿಲ್ಲ ಎಂಬ ಸಿಟ್ಟಿನಿಂದ ಪಾನಮತ್ತನಾಗಿ ಬಾಂಬ್ ಬೆದರಿಕೆ ಮಾಡಿದ್ದ. ವೇಲುವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹುಸಿ ಬಾಂಬ್ ಬೆದರಿಕೆ ಎಂಬುದು ಪತ್ತೆಯಾಗಿದೆ. ಈ ವಿಚಾರವಾಗಿ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *