Ad Widget .

ನನ್ನನು ಎನ್ಕೌಂಟರ್ ಮಾಡುವುದಾಗಿ ಮತ್ತೊಂದು ಜೀವ ಬೆದರಿಕೆ; ಪ್ರಿಯಾಂಕ್ ಖರ್ಗೆ

ಸಮಗ್ರ ನ್ಯೂಸ್: ಬಿಜೆಪಿಯವರು ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

Ad Widget . Ad Widget .

ನನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ ಅಲ್ಲದೆ, ಈ ಬೆದರಿಕೆ ಪತ್ರ ಫಿನ್​ಲ್ಯಾಂಡ್​ನಿಂದ ಬಂದಿದೆ ಎಂದು ಹೇಳಿ ಸುದ್ದಿಗೋಷ್ಠಿಯಲ್ಲಿ ಜೀವ ಬೆದರಿಕೆ ಪತ್ರ ಓದಿದರು.

Ad Widget . Ad Widget .

ಈ ಪತ್ರದಲ್ಲಿ ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತ ವೇಷ ಭೂಷಣ ಹಾಕಿದರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗೂ, ನಿನ್ನ ಸೊಕ್ಕು ಹೊಲೆಯ-ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಅಶ್ಲೀಲ ಪದ ಬಳಸಿದ್ದಾರೆ. “ಖಾಕಿಯಾದರೂ, ಖಾದಿಯಾದರೂ, ಯಾರಿಂದಲಾದರೂ ನಿನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ” ಎಂದರು.

ಬಿಜೆಪಿಯವರಿಗೆ ನಮ್ಮನ್ನ ರಾಜಕೀಯವಾಗಿ ಎದುರಿಸಲು ಆಗುತ್ತಿಲ್ಲ. ಹೀಗಾಗೇ ವೈಯಕ್ತಿಕವಾಗಿ ಟಾರ್ಗೇಟ್ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನೂ ಹೆದರುವುದಿಲ್ಲ. “ನಾನು ಬಳೆ ತೊಟ್ಟುಕೊಂಡಿಲ್ಲ, ಆಖಾಡದಲ್ಲಿ ರೆಡಿಯಿದ್ದೇನೆ” ಎಂದರು. ಬೆದರಿಕೆ ಸಂಬಂಧ ಮಾರ್ಚ್ 13 ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದೇನೆ. ವಿಕಾಸಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ ನಾವು ಹೆದರುವುದಿಲ್ಲ ಎಂದರು.

Leave a Comment

Your email address will not be published. Required fields are marked *