Ad Widget .

ರಾಯಚೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ|ಡೀಸೆಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಬಿ.ವಿ ನಾಯಕ್ ಬೆಂಬಲಿಗರು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಟಿಕೆಟ್ ವಿಚಾರವಾಗಿ ಇದೀಗ ಟಿಕೆಟ್‌ ವಂಚಿತ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ರಾಜಾ ಅಮರೇಶ್ವರ ನಾಯಕಗೆ ಟಿಕೆಟ್‌ ಕೊಟ್ಟಿರುವುದು ಬಿ.ವಿ‌. ನಾಯಕ ಅವರನ್ನು ಕೆರಳಿಸಿದೆ. ಇದೀಗ ಅವರ ಬಣ ಪ್ರತಿಭಟನೆಯನ್ನು ಮಾಡಿವೆ. ಅಭ್ಯರ್ಥಿ ಬದಲಾವಣೆಗೆ ಎರಡು ದಿನಗಳ ಗಡುವನ್ನು ನೀಡಿದೆ. ಇನ್ನು ಪ್ರತಿಭಟನೆ ವೇಳೆ ಬಿ.ವಿ. ನಾಯಕ ಅವರ ಅಭಿಮಾನಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದು ಹೈಡ್ರಾಮಾ ನಡೆಸಿದ್ದಾನೆ. ಕಾರ್ಯಕರ್ತರು ಕ್ಯಾನ್ ಕಸಿದುಕೊಂಡು ತಡೆದಿದ್ದಾರೆ.

Ad Widget . Ad Widget .

ರಾಯಚೂರಿನಲ್ಲಿ ಕರೆದ ಅಭಿಮಾನಿ, ಬೆಂಬಲಿಗರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕಗೆ ಗೋಬ್ಯಾಕ್ ಘೋಷಣೆಯನ್ನು ಕೂಗಲಾಗಿದೆ. ಬಳಿಕ ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ. ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಬಿ.ವಿ. ನಾಯಕ ಅವರಿಗೆ ಬಿಜೆಪಿ ಟಿಕೆಟ್ ಕೊಡಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

Ad Widget . Ad Widget .

ಎರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಿ. ಇಲ್ಲದಿದ್ದರೆ ಮುಂದಿನ ಕೆಲವೇ ದಿನಗಳಲ್ಲಿ ಕಾರ್ಯಕರ್ತರ ಆಶಯದಂತೆ ಅಂತಿಮ ತೀರ್ಮಾನ ನಾನೇ ತೆಗೆದುಕೊಳ್ಳುತ್ತೇನೆ. ನಾನು ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್ ವಿರೋಧಿ ಅಲ್ಲ. ಇನ್ನೂ ಅವರು ಹತ್ತು ಬಾರಿ ಸಂಸದರಾಗಲಿ. ಆದ್ರೆ ಜನರ ಅಭಿಪ್ರಾಯ, ಕಾರ್ಯಕರ್ತರ ಅಭಿಪ್ರಾಯದ ಅನ್ವಯ ಟಿಕೆಟ್ ನೀಡಬೇಕಿತ್ತು. ಐದು ವರ್ಷದ ಅವರು ಏನು ಕೆಲಸ ಮಾಡಿದ್ದಾರೆ. ಏನೆಲ್ಲಾ ಅಭಿವೃದ್ಧಿ ಆಗಿದೆ ಅನ್ನೋದನ್ನ ಕಾರ್ಯಕರ್ತರಿಂದ ತಿಳಿದುಕೊಳ್ಳಬೇಕು‌ ಎಂದು ಬಿ.ವಿ ನಾಯಕ್ ಬಿಜೆಪಿ ನಾಯಕರಿಗೆ ಡೆಡ್​ಲೈನ್ ಜೊತೆಗೆ ಎಚ್ಚರಿಕೆ ನೀಡಿದರು.

Leave a Comment

Your email address will not be published. Required fields are marked *