ಸಮಗ್ರ ನ್ಯೂಸ್ : ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ ಗ್ರಾಮದ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಸಭೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 26ರಂದು ರಾತ್ರಿ 11.30ರ ಸುಮಾರಿಗೆ ಜಯಪ್ರಕಾಶ್ ಹೆಗ್ಡೆ ಶಿರ್ವ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ಹೋಗಿರುವುದಾಗಿ ಕಾಪು ಪೈಯಿಂಗ್ ಸ್ಕಾಡ್ ಟೀಮ್ ಗೆ ಮಾಹಿತಿ ಬಂದಿತ್ತು.
ಅದರಂತೆ ತಂಡ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೈವಸ್ಥಾನದ ಆಡಳಿತ ಮಂಡಳಿಯವರು ತಡರಾತ್ರಿಯವರೆಗೆ ಕಾರ್ಯಕ್ರಮ ನಡೆಸಿರುವುದು ಮತ್ತು ಈ ಧಾರ್ಮಿಕ ಸ್ಥಳದಲ್ಲಿ ಆಡಳಿತ ಮಂಡಳಿಯವರು ಜಯಪ್ರಕಾಶ್ ಹೆಗ್ಡೆ ಜೊತೆಗೂಡಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ಪ್ರಭಾವ ಬೀರಿರುವುದು ಕಂಡು ಬಂದಿದೆ ಎಂದು ದೂರಲಾಗಿದೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.