ಐಪಿಎಲ್ ನಲ್ಲಿ ಹೊಸ ದಾಖಲೆ ನಿರ್ಮಿಸಿದ ರಿಷಭ್/ ಡೆಲ್ಲಿ ಪರ ನೂರು ಪಂದ್ಯವಾಡಿದ ಮೊದಲ ಕ್ರಿಕೆಟಿಗ

ಸಮಗ್ರ ನ್ಯೂಸ್:ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 100 ಪಂದ್ಯ ಆಡಿದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದಾರೆ.

Ad Widget ... ..

ಡೆಲ್ಲಿ ಫ್ರಾಂಚೈಸಿ ಪರ ಗರಿಷ್ಠ ಪಂದ್ಯ ಆಡಿದ ಹೆಗ್ಗಳಿಕೆಗೆ ಅಮಿತ್ ಮಿಶ್ರಾ ಪಾತ್ರರಾಗಿದ್ದಾರೆ. ಐಪಿಎಲ್ ಟೂರ್ನಿ ಹಾಗೂ ಚಾಂಪಿಯನ್ಸ್ ಲೀಗ್ ಸೇರಿದಂತೆ ಅಮಿತ್‌ ಮಿಶ್ರಾ 103 ಪಂದ್ಯಗಳನ್ನಾಡಿದ್ದಾರೆ. ಆದರೆ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ತಂಡವನ್ನು 100 ಬಾರಿ ಪ್ರತಿನಿಧಿಸಿದ ಹೆಗ್ಗಳಿಗೆ ರಿಷಬ್ ಪಂತ್ ಪಾಲಾಗಿದೆ. ಐಪಿಎಲ್ ಟೂರ್ನಿಯಲ್ಲಿ ಮಾತ್ರ ಅಮಿತ್ ಮಿಶ್ರಾ, ಡೆಲ್ಲಿ ಕ್ಯಾಪಿಟಲ್ಸ್ ಪರ 99 ಪಂದ್ಯಗಳನ್ನಾಡಿದ್ದಾರೆ.

Ad Widget

Leave a Comment

Your email address will not be published. Required fields are marked *