ಗುಂಡ್ಲುಪೇಟೆ:ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಪೊಲೀಸರ ವಶ

ಸಮಗ್ರ ನ್ಯೂಸ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನು ಗುಂಡ್ಲುಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮದ್ದೂರು ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ದಾಖಲೆ ರಹಿತ ನಗದನ್ನ ವಶಪಡಿಸಿಕೊಳ್ಳಲಾಗಿದೆ.

Ad Widget ... ..

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕೇರಳ ಮತ್ತು ತಮಿಳುನಾಡು ಗಡಿಯಲ್ಲಿ ಪೊಲೀಸರು ಚುರುಕಿನ ತಪಾಸಣೆ ಕೈಗೊಂಡಿರುವ ಹಿನ್ನೆಲೆ ಇಂದು ಬೆಳೆಗ್ಗೆ ಮದ್ದೂರು ಚೆಕ್ಪೋಸ್ಟ್ ನಲ್ಲಿ ದಾಖಲೆ ರಹಿತವಾಗಿ ಸಾಗಿಸಲಾಗ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನ ಗುಂಡ್ಲುಪೇಟೆ ಪೊಲೀಸರು ಜಪ್ತಿ ಮಾಡಿದ್ದಾರೆ. ಪಿಐ ಪರಶಿವಮೂರ್ತಿ ನೇತೃತ್ವದಲ್ಲಿ ಬಿಗಿ ತಪಾಸಣೆ ಕೈಗೊಳ್ಳಲಾಗುತ್ತಿದ್ದು ಅಕ್ರಮಗಳಿಗೆ ಬ್ರೇಕ್ ಹಾಕಲಾಗುತ್ತಿದೆ.

Ad Widget

Leave a Comment

Your email address will not be published. Required fields are marked *