Ad Widget .

ಮಾತನಾಡುವ ಶಕ್ತಿ ಇಲ್ಲ, ಅಡುಗೆ ಮಾಡುದಕ್ಕೆ ಸರಿ: ಶಾಮನೂರು

ಸಮಗ್ರ ನ್ಯೂಸ್ :ಮಾತನಾಡಲು ಬಾರದ ಇವರು ಅಡುಗೆ ಮಾಡುದಕ್ಕೆ ಸರಿ. ಅವರಿಗೆ ಮಾತನಾಡುವ ಶಕ್ತಿ ಇಲ್ಲ ಎಂದು ಸಂಸದ ಸಿದ್ದೇಶ್ವರ್ ಪತ್ನಿ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

Ad Widget . Ad Widget .

ದಾವಣಗೆರೆ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಮಾತನಾಡಿದರು. ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಟೀಕಿಸುವ ಭರದಲ್ಲಿ ಶಾಮನೂರು ಈ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಬಿಜೆಪಿ ಅಭ್ಯರ್ಥಿ ದಾವಣಗೆರೆಯಿಂದ ಗೆದ್ದು ಮೋದಿಗೆ ಕಮಲದ ಹೂ ಅರ್ಪಿಸುತ್ತೇನೆ ಅಂತಾರೆ. ಮೊದಲು ದಾವಣಗೆರೆ ಜಿಲ್ಲೆಯ ಸಮಸ್ಯೆ ತಿಳಿಯಲಿ ಎಂದು ಶಾಮನೂರು ವ್ಯಂಗ್ಯವಾಡಿದ್ದಾರೆ.

Ad Widget . Ad Widget .

ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ‘ಕೈ’ ಮೇಲಿದೆ ಎಂಬುದನ್ನು ನಾವು ತೋರಿಸಬೇಕು ಎಂದರು. ವಿರೋಧ ಪಕ್ಷದವರು ಮೋದಿ.. ಮೋದಿ ಅನ್ನುತ್ತಾರೆ. ಆದರೆ ಮೋದಿ ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ನಮ್ಮ ರಾಜ್ಯಕ್ಕೆ ಬರಬೇಕಾದ ಹಣ ನೀಡದೇ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Leave a Comment

Your email address will not be published. Required fields are marked *