Ad Widget .

ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ|ಅಫಿಡವಿಟ್‌ನಲ್ಲಿ ಒಟ್ಟು ಆಸ್ತಿ ಮೌಲ್ಯ ಎಷ್ಟಿದೆ ಗೊತ್ತಾ..?

ಸಮಗ್ರ ನ್ಯೂಸ್: ನಿನ್ನೆ ಹಾಸನದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ. 2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರಲ್ಲಿ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು.

Ad Widget . Ad Widget .

ಈಗ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್‌ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಿವಿಧ ಬ್ಯಾಂಕ್​ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.

Ad Widget . Ad Widget .

ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್​ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ. ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ. ಈ ಬಗ್ಗೆ ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.

Leave a Comment

Your email address will not be published. Required fields are marked *