Ad Widget .

ಪತ್ನಿಗೆ ಅನೈತಿಕ ಸಂಬಂಧ|ಮನನೊಂದು ಪತಿ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ವ್ಯಕ್ತಿ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

Ad Widget . Ad Widget .

ಮೃತ ದಾಸರ್ (27) ಎರಡು ದಿನಗಳ ಹಿಂದೆಯೇ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್‍ನ್ನು ಜನ ಪರಿಶೀಲಿಸಿದಾಗ ದಾಸರ್‍ನ ಮೃತದೇಹ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ.

Ad Widget . Ad Widget .

ಕುಡಿಯುವ ನೀರಿನಲ್ಲಿ ಶವ ಪತ್ತೆಯಾದ ಹಿನ್ನೆಲೆ, ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಟ್ಯಾಂಕ್ ನೀರು ಕುಡಿದು ಯಾರಿಗಾದರೂ ಆರೋಗ್ಯದ ಸಮಸ್ಯೆಯಾದರೆ ಅಗತ್ಯ ಚಿಕಿತ್ಸೆ ಪಡೆಯುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Comment

Your email address will not be published. Required fields are marked *