ಸಮಗ್ರ ನ್ಯೂಸ್: ಬಿಜೆಪಿ ಮಾಜಿ MLC ತೇಜಸ್ವಿನಿ ಗೌಡ ಮೊನ್ನೆಯಷ್ಟೆ ಬಿಜೆಪಿ MLC ಸ್ಥಾನಕ್ಕೆ ರಾಜೀನಾಮೆ ನೀಡಿ ದರು, ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಲ್ಲೆ ಬಿಜೆಪಿಗೆ ಇದೊಂದು ರೀತಿಯ ಆಘಾತವುಂಟಾಗಿದೆ.
ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಜೈರಾಮ್ ರಮೇಶ್, ಪವನ್ ಖೇರಾ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ನಂತರ ಮಾತನಾಡಿದ ಅವರು, ಬಿಜೆಪಿಯಲ್ಲಿ ವ್ಯಭಿಚಾರಿಗಳು, ಭ್ರಷ್ಟಾಚಾರಿಗಳ ಪರವಾಗಿ ವಕ್ತಾರಿಕೆ ಮಾಡಿದ್ದೇನೆ. ದೆಹಲಿಯಲ್ಲಿ ಕಾಂಗ್ರೆಸ್ ಸೇರಬೇಕೆಂಬುದು ಹೈಕಮಾಂಡ್ ತೀರ್ಮಾನ ಅದಕ್ಕಾಗಿ ಇಲ್ಲಿ ಬಂದು ಸೇರಿದ್ದೇನೆ ಎಂದರು.
ಬಿಜೆಪಿ ಕೊಟ್ಟ ಕೆಲಸವನ್ನು ನಿಷ್ಠೆಯಿಂದ ಮಾಡಿದ್ದೇನೆ. ಬಿಜೆಪಿಗೆ ರಾಜಕೀಯ ಬರಗಾಲ ಇತ್ತು ಆಗ ನಾನು ಬಿಜೆಪಿ ಸೇರಿದ್ದೆ. ಈಗ ಬಿಜೆಪಿ ಸಮೃದ್ಧವಾಗಿದೆ, ಬಿಜೆಪಿ ಬಿಟ್ಟು ಬಂದಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಲು ಬರಗಾಲ ಇದೆ, ಕಷ್ಟದ ಪರಿಸ್ಥಿತಿ ಇದೆ. ಡಿ.ಕೆ ಶಿವಕುಮಾರ್ ಅವರು ಒಕ್ಕಲಿಗ ಸಮುದಾಯ ನಾಯಕ. ಬಿಜೆಪಿಯಲ್ಲಿರುವ ಒಕ್ಕಲಿಗ ಸಮುದಾಯದ ನಾಯಕರನ್ನು ತುಳಿಯಲಾಗಿದೆ. ಪ್ರತಾಪ್ ಸಿಂಹ, ಸಿ.ಟಿರವಿ, ಸದಾನಂದಗೌಡರಿಗೆ ಟಿಕೆಟ್ ಕೊಟ್ಟಿಲ್ಲ. ಮೈಸೂರು ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹನಿಗೆ ನೀಡದಿದ್ದರೆ ನನಗೆ ಟಿಕೆಟ್ ನೀಡಿ ಎಂದು ಕೇಳಿದೆ ಅದು ಕೊಟ್ಟಿಲ್ಲ. ಕಾಂಗ್ರೆಸ್ ನಲ್ಲಿ ನನಗೆ ಏನೇ ಜವಾಬ್ದಾರಿ ಕೊಟ್ಟರೂ ಮಾಡುತ್ತೇನೆ. ಡಿ.ಕೆ ಸುರೇಶ್ ಅವರ ಪರವಾಗಿಯೂ ಕೆಲಸ ಮಾಡುತ್ತೇನೆ ಎಂದರು.