Ad Widget .

ಏ. 19-ಜೂ.1 ರವರೆಗೆ ಚುನಾವಣೋತ್ತರ ಸಮೀಕ್ಷೆಗಳನ್ನು ಕೈಗೊಳ್ಳುವಂತಿಲ್ಲ| ಚುನಾವಣಾ ಆಯೋಗ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆಯ ಸಿದ್ಧತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಿಜೆಪಿ, ಕಾಂಗ್ರೆಸ್‌ ಸೇರಿ ಈಗಾಗಲೇ ನೂರಾರು ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದ್ದು, ಪ್ರಚಾರ ಆರಂಭಿಸಿದ್ದಾರೆ. ಇದರ ನಡುವೆ ಏಪ್ರಿಲ್‌ 19ರಿಂದ ಜೂನ್‌ 1ರವರೆಗೆ ಚುನಾವಣೋತ್ತರ ಸಮೀಕ್ಷೆಗಳನ್ನು ಕೈಗೊಳ್ಳುವಂತಿಲ್ಲ ಎಂದ ಚುನಾವಣಾ ಆಯೋಗವು ಆದೇಶಿಸಿದೆ.

Ad Widget . Ad Widget .

ಮೊದಲ ಹಂತದ ಮತದಾನ ನಡೆಯುವ ಏಪ್ರಿಲ್‌ 19ರ ಬೆಳಗ್ಗೆ 7 ಗಂಟೆಯಿಂದ ಚುನಾವಣೆ ಮುಗಿಯುವ ಜೂನ್‌ 1ರ ಸಂಜೆ 6.30ರವರೆಗೆ ಚುನಾವಣೋತ್ತರ ಸಮೀಕ್ಷೆಗಳನ್ನು ಕೈಗೊಳ್ಳುವಂತಿಲ್ಲ. ಚುನಾವಣೆಯಲ್ಲಿ ಪಕ್ಷಗಳಿಗೆ ಬೆಂಬಲ, ಅಭಿಪ್ರಾಯ ಸಂಗ್ರಹ ಸೇರಿ ಯಾವುದೇ ರೀತಿಯ ಸಮೀಕ್ಷೆಗಳನ್ನು ನಡೆಸಬಾರದು ಹಾಗೂ ಅವುಗಳನ್ನು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರ ಮಾಡಬಾರದು ಎಂಬುದಾಗಿ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ. ಏಪ್ರಿಲ್‌ 19ರಿಂದ ಚುನಾವಣೆ ಆರಂಭವಾಗಲಿದ್ದು, ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದೆ.

Ad Widget . Ad Widget .

ಇಷ್ಟೂ ಅವಧಿಯಲ್ಲಿ ಚುನಾವಣೋತ್ತರ ಸಮೀಕ್ಷೆ ನಡೆಸಬಾರದು ಹಾಗೂ ಅವುಗಳ ವರದಿಯನ್ನು ಪ್ರಕಟಿಸಬಾರದು ಎಂಬುದಾಗಿ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *