ಸಮಗ್ರ ನ್ಯೂಸ್ : ತಾಪಮಾನ ಹೆಚ್ಚಳದಿಂದ ವಿದ್ಯುತ್ ಸರಬರಾಜಿನಲ್ಲಿ ಏರುಪೇರಾಗಿ ನಗರದ 220 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಅಗ್ನಿ ಅವಘಡದಲ್ಲಿ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗಿದೆ. ಮೂರು ಟಿ.ಸಿಗಳು ಸುಟ್ಟಿದ್ದರಿಂದ ಇಡೀ ರಾಯಚೂರು ನಗರಕ್ಕೆ ವಿದ್ಯುತ್ ಸರಬರಾಜು ಬಂದ್ ಆಗಿತ್ತು. ವಿದ್ಯುತ್ ಕೇಂದ್ರದಲ್ಲಿನ ಕೇಬಲ್‌ಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ನಿರಂತರ ಪ್ರಯತ್ನದಿಂದ ಬೆಂಕಿ ನಂದಿಸಿದ್ದಾರೆ.
ವಿದ್ಯುತ್ ಕೇಂದ್ರದಲ್ಲಿ ದುರಸ್ತಿ ಕಾರ್ಯ ನಡೆದಿದ್ದು ವಿದ್ಯುತ್ ಸರಬರಾಜು ಆರಂಭಿಸಿದ್ದಾರೆ. ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾಳಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 42.6 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದ್ದು, ಪ್ರತಿದಿನ 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ.