ಸಮಗ್ರ ನ್ಯೂಸ್: ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆಯುತ್ತಿತ್ತು. ಈ ನಡುವೆ ಎರಡು ಗುಂಪುಗಳ ನಡುವಿನ ಕಾರ್ಯಕರ್ತರ ನಡುವೆ ಜಗಳ ನಡೆದಿದೆ.
ಗೋವಿಂದ ಕಾರಜೋಳ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಇವರನ್ನು ಜೆಡಿಎಸ್ ಕಾರ್ಯಕರ್ತನೊಬ್ಬ ಡಮ್ಮಿ ಕ್ಯಾಂಡಿಡೇಟ್ ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಕೈ ಕೈ ಮಿಲಾಯಿಸಿಕೊಂಡು ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕಾರಜೋಳ ಎದುರುಗಡೆಯೆ ಹೊಡೆದಾಟ ನಡೆದಿದೆ.




























