Ad Widget .

ಕಾಟೇರ ಸಕ್ಸಸ್ ಪಾರ್ಟಿ ವಿಚಾರ| ದರ್ಶನ್ ಸೇರಿ 8 ಮಂದಿಗೂ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಕಾಟೇರ ಸಿನಿಮಾದ ಯಶಸ್ಸಿನ ಹಿನ್ನೆಲೆ ಜೆಟ್ ಲ್ಯಾಗ್ ಪಬ್ ನಲ್ಲಿ ಅವಧಿಮೀರಿ ಪಾರ್ಟಿ ನಡೆದ ವಿಚಾರವಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಎಲ್ಲಾ 8 ಮಂದಿಗೂ ಬಿಗ್ ರಿಲೀಫ್ ಸಿಕ್ಕಿದೆ.

Ad Widget . Ad Widget .

ರಾಜಾಜಿನಗರದ ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಈಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ತಡ ರಾತ್ರಿ ಪಾರ್ಟಿ ಮಾಡಿಲ್ಲ. ಆರೋಪಿಗಳು ಊಟದ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ನಟ ದರ್ಶನ್ ಸೇರಿ ಎಲ್ಲರಿಗೂ ಬಿಗ್ ರಿಲೀಫ್ ಸಿಕ್ಕಿದೆ.

Ad Widget . Ad Widget .

Leave a Comment

Your email address will not be published. Required fields are marked *