ಕೋಲ್ಕತ್ತಾ: ಲೋಕಸಭಾ ಚುನಾವಣೆ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ; ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ ಎಂದು ಎನ್‌ಡಿಎ ಒಕ್ಕೂಟಕ್ಕೆ ಮಮತಾ ಬ್ಯಾನರ್ಜಿ ಸವಾಲು ಎಸೆದಿದ್ದಾರೆ.

Ad Widget ... ..

ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಇಂದು ಮಮತಾ ಬ್ಯಾನರ್ಜಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ಮಾಡಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹಾಕಿರುವ ಎನ್‌ಡಿಎ ಒಕ್ಕೂಟಕ್ಕೆ ನಾನು ಸವಾಲು ಎಸೆಯುತ್ತೇನೆ.

Ad Widget

ಬಿಜೆಪಿಯವರು 400 ಪಾರ್ ಎಂದು ಹೇಳುತ್ತಿದ್ದಾರೆ. ನಾನು ಮೊದಲು 200 ಸೀಟುಗಳ ಮಾನದಂಡವನ್ನು ದಾಟಿ ಎಂದು ಸವಾಲು ಹಾಕುತ್ತೇನೆ. 2021 ರ ವಿಧಾನಸಭಾ ಚುನಾವಣೆಯಲ್ಲಿ ಅವರು 200 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದರು. ಆದರೆ 77 ಸ್ಥಾನದಲ್ಲಿ ಮಾತ್ರ ಜಯಗಳಿಸಿದರು ಎಂದರು.

Leave a Comment

Your email address will not be published. Required fields are marked *