Ad Widget .

ಬಿಜೆಪಿ 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ;ರಾಹುಲ್‌

ಸಮಗ್ರ ನ್ಯೂಸ್‌ : ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಇಲ್ಲದೇ ʻ400 ಪಾರ್‌ʼ ಘೋಷಣೆ ಮಾಡಲು ಸಾಧ್ಯವಿಲ್ಲ. 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ. ಮೋದಿ ಒಬ್ಬರೇ ಈ ಕೆಲಸ ಮಾಡುತ್ತಿಲ್ಲ. ಅವರ ಜೊತೆಗೆ ಕೆಲವು ಉದ್ಯಮಿಗಳೂ ಸೇರಿಕೊಂಡಿದ್ದಾರೆ ಎಂದು ಸಂಸದ ರಾಹುಲ್‌ ಗಾಂಧಿ ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ED ಬಂಧನ ಖಂಡಿಸಿ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ I.N.D.I.A. ಒಕ್ಕೂಟದ ʻಪ್ರಜಾಪ್ರಭುತ್ವ ಉಳಿಸಿʼ ಪ್ರತಿಭಟನಾ ರ‍್ಯಾಲಿಯನ್ನು ದ್ದೇಶಿಸಿ ಅವರು, ಬಿಜೆಪಿ ಗೆದ್ದು ಸಂವಿಧಾನವನ್ನು ಬದಲಾಯಿಸಿದರೆ ದೇಶವೇ ಹೊತ್ತಿ ಉರಿಯುತ್ತದೆ. ಸಂವಿಧಾನ ಹೋದರೆ ಬಡವರ ಹಕ್ಕುಗಳು ಮತ್ತು ಮೀಸಲಾತಿಯೂ ಹೋಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Ad Widget . Ad Widget . Ad Widget .

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಯತ್ನಗಳಲ್ಲಿ ಯಶಸ್ವಿಯಾದರೆ, ದೇಶದ ಸಂವಿಧಾನವನ್ನು ಬದಲಾಯಿಸುತ್ತದೆ. ಬಡವರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಬಡವರ ಹಣವನ್ನು ಕಸಿದುಕೊಳ್ಳುತ್ತಾರೆ, ಸಂವಿಧಾನ ಬದಲಾದ ದಿನವೇ ದೇಶ ಒಡೆದು ಹೋಗುತ್ತದೆ. ಅವರು ಸಂವಿಧಾನ ಬದಲಾಯಿಸುತ್ತೇವೆ ಎಂದು ಸುಮ್ಮನೆ ಹೇಳಲಿಲ್ಲ. ಭಾರತ ಮತ್ತು ಸಂವಿಧಾನ ಉಳಿಸುವ ಚುನಾವಣೆ, ಬಡವರ, ರೈತರ ಹಕ್ಕು ರಕ್ಷಿಸುವ ಚುನಾವಣೆ. ಇಂತಹ ಚುನಾವಣೆಯನ್ನು ಮ್ಯಾಚ್ ಫಿಕ್ಸಿಂಗ್ ಮಾಡಲಾಗುತ್ತಿದೆ. ವಿಪಕ್ಷಗಳು ಚುನಾವಣೆ ಎದುರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಲಾಗುತ್ತಿದೆ. ನ್ಯಾಯಂಗದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

Leave a Comment

Your email address will not be published. Required fields are marked *