March 2024

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ದುರಂತ| ಮೂರು ಕೋಟಿಗೂ ಮಿಕ್ಕಿ ನಷ್ಟ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಶಿಹಾರ್ ಎಂಟರ್ ಪ್ರೈಸಸ್ ಎಂಬ ಈ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ 4:45ರ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಫ್ಯಾಕ್ಟರಿಯನ್ನು ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಎಂಆರ್ ಪಿಎಲ್, ಎನ್ ಎಂಪಿಟಿನಿಂದ ಸುಮಾರು 8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟವು. ನಿರಂತರ ಮೂರೂವರೆ […]

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ದುರಂತ| ಮೂರು ಕೋಟಿಗೂ ಮಿಕ್ಕಿ ನಷ್ಟ Read More »

ಮೈಸೂರಿಗೆ ನರೇಂದ್ರ ಮೋದಿ| ಕೊಡಗಿಗೆ ಯೋಗಿ ಆದಿತ್ಯನಾಥ್

ಸಮಗ್ರ ನ್ಯೂಸ್: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕಾಗಿ ಮೈಸೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಂದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊಡಗಿಗೆ ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮಾ.28ರಂದು ಮಡಿಕೇರಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಅವರುಗಳ ಆಗಮನವನ್ನು ಬಹಿರಂಗಪಡಿಸಿದ್ದಾರೆ.

ಮೈಸೂರಿಗೆ ನರೇಂದ್ರ ಮೋದಿ| ಕೊಡಗಿಗೆ ಯೋಗಿ ಆದಿತ್ಯನಾಥ್ Read More »

ರೆಪ್ಕೊ ಹೋಂ ಫೈನಾನ್ಸ್​​​ನಲ್ಲಿ ಉದ್ಯೋಗ ಖಾಲಿ ಇದೆ, ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ರೆಪ್ಕೊ ಹೋಮ್ ಫೈನಾನ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಸಿಸ್ಟೆಂಟ್ ಮ್ಯಾನೇಜರ್/ಎಕ್ಸಿಕ್ಯೂಟಿವ್​/ ಸೀನಿಯರ್ ಎಕ್ಸಿಕ್ಯೂಟಿವ್/ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 2, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಕೆಲಸ ಹುಡುಕುತ್ತಿರುವ ಆಸಕ್ತರು ಈಗಲೇ ಅಪ್ಲೈ ಮಾಡಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ರೆಪ್ಕೊ ಹೋಮ್ ಫೈನಾನ್ಸ್

ರೆಪ್ಕೊ ಹೋಂ ಫೈನಾನ್ಸ್​​​ನಲ್ಲಿ ಉದ್ಯೋಗ ಖಾಲಿ ಇದೆ, ಈಗಲೇ ಅರ್ಜಿ ಹಾಕಿ Read More »

ಪುತ್ತೂರು: ಕಾರಿನಲ್ಲಿ ಅಕ್ರಮ ಗೋಸಾಗಾಟ| ಕಾರ್ಯಕರ್ತರ ಕಂಡು ಕಾರು ಬಿಟ್ಟು ಪರಾರಿ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟದ ಜಾಲವನ್ನು ಬಜರಂಗದಳ ಬಯಲಿಗೆಳೆದಿದ್ದು, ಸಂಘಟನೆಯ ಕಾರ್ಯಕರ್ತರನ್ನು ನೋಡಿ ಆರೋಪಿಗಳು ಕಾರು , ದನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ಈ ಕೃತ್ಯ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ.ಕಾರಿನಲ್ಲಿ ಎರಡು ದನ

ಪುತ್ತೂರು: ಕಾರಿನಲ್ಲಿ ಅಕ್ರಮ ಗೋಸಾಗಾಟ| ಕಾರ್ಯಕರ್ತರ ಕಂಡು ಕಾರು ಬಿಟ್ಟು ಪರಾರಿ Read More »

ಪುತ್ತೂರು: ಬಸ್ ನಿಲ್ದಾಣದಲ್ಲೇ ಚೂರಿ ಇರಿತ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು ಚೂರಿ ಇರಿದ ಘಟನೆ ನಡೆದಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಮಲ್ಲಪುರ ಗೋಕಾಕ್‌ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ ಚೂರಿ ಇರಿತಕ್ಕೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಪರಿಚಯಸ್ಥರಾದ ಅವಿನಾಶ್‌, ನಾರಾಯಣ, ದುಗೇìಶ್‌ ಮತ್ತು ಹರೀಶ್‌ರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದಾಗ ಆರೋಪಿ ಅವಿನಾಶ್‌ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ

ಪುತ್ತೂರು: ಬಸ್ ನಿಲ್ದಾಣದಲ್ಲೇ ಚೂರಿ ಇರಿತ Read More »

ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈತಪ್ಪಿದ್ದ ಬೆನ್ನಲ್ಲೆ ಮಹತ್ವದ ಜವಾಬ್ದಾರಿ ಕೊಟ್ಟ ಹೈಕಮಾಂಡ್

ಸಮಗ್ರ ನ್ಯೂಸ್: ನಳಿನ್ ಕುಮಾರ್ ಕಟೀಲ್ ಅವರಿಗೆ ಹೈಕಮಾಂಡ್ ಒಂದು ಮಹತ್ವದ ಜವಾಬ್ದಾರಿ ನೀಡಿದೆ. ಹೌದು, ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್​​ ಕೈತಪ್ಪಿದ್ದರಿಂದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ. ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್

ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈತಪ್ಪಿದ್ದ ಬೆನ್ನಲ್ಲೆ ಮಹತ್ವದ ಜವಾಬ್ದಾರಿ ಕೊಟ್ಟ ಹೈಕಮಾಂಡ್ Read More »

ರಾಯಚೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ|ಡೀಸೆಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಬಿ.ವಿ ನಾಯಕ್ ಬೆಂಬಲಿಗರು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಟಿಕೆಟ್ ವಿಚಾರವಾಗಿ ಇದೀಗ ಟಿಕೆಟ್‌ ವಂಚಿತ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ರಾಜಾ ಅಮರೇಶ್ವರ ನಾಯಕಗೆ ಟಿಕೆಟ್‌ ಕೊಟ್ಟಿರುವುದು ಬಿ.ವಿ‌. ನಾಯಕ ಅವರನ್ನು ಕೆರಳಿಸಿದೆ. ಇದೀಗ ಅವರ ಬಣ ಪ್ರತಿಭಟನೆಯನ್ನು ಮಾಡಿವೆ. ಅಭ್ಯರ್ಥಿ ಬದಲಾವಣೆಗೆ ಎರಡು ದಿನಗಳ ಗಡುವನ್ನು ನೀಡಿದೆ. ಇನ್ನು ಪ್ರತಿಭಟನೆ ವೇಳೆ ಬಿ.ವಿ. ನಾಯಕ ಅವರ ಅಭಿಮಾನಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದು ಹೈಡ್ರಾಮಾ ನಡೆಸಿದ್ದಾನೆ. ಕಾರ್ಯಕರ್ತರು ಕ್ಯಾನ್ ಕಸಿದುಕೊಂಡು

ರಾಯಚೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ|ಡೀಸೆಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಬಿ.ವಿ ನಾಯಕ್ ಬೆಂಬಲಿಗರು Read More »

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಬಿದ್ದು ಸಾವು

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕುಮ್ರಗೋಡಿನಲ್ಲಿ ನಡೆದಿದೆ. ಮೃತ ವ್ಯಕ್ತಿ ರಾಜು (77) ಎಂದು ತಿಳಿದು ಬಂದಿದೆ. ಘಟನೆಯಿಂದ ಗಂಭೀರವಾಗಿ ರಾಜು ಅವರ ತಲೆ, ಬೆನ್ನು, ಎದೆ, ಕಾಲಿಗೆ ಗಾಯಗಳಾಗಿತ್ತು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಬಿದ್ದು ಸಾವು Read More »

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್‌ ಪಲ್ಟಿ

ಸಮಗ್ರ ನ್ಯೂಸ್: ಟಿಪ್ಪರ್‌ ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿದ ಬಿದ್ದ ಘಟನೆ ಕಿನ್ನಿಗೋಳಿ ಸಮೀಪದ ಶಿಬರೂರು ಸೇತುವೆ ಬಳಿ ನಡೆದಿದೆ. ಚಾಲಕನು ಮದ್ಯದ ಅಮಲಿನಲ್ಲಿ ಅತೀ ವೇಗದಿಂದ ವಾಹನ ಚಲಾಯಿಸಿದ್ದು, ಮೂಲ್ಕಿ ಕಡೆಯಿಂದ ಶಿಬರೂರು ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಬಟ್ಟಕೋಡಿ ಸಮೀಪದ ಶರಣ ಬಳಿ, ಹಾಗೂ ನಡುಗೋಡು ಸಮೀಪವೂ ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆಯುವುದು ಸ್ವಲ್ಪದರಲ್ಲೇ ತಪ್ಪಿತ್ತು. ಆದರೆ ಮುಂದೆ ಅತೀ ವೇಗದಿಂದ ಚಲಿಸಿದ ಟಿಪ್ಪರ್ ಶಿಬರೂರು ಸೇತುವೆಯ ಬಳಿ ತಗ್ಗು ಪ್ರದೇಶದ ಗದ್ದೆಗುರುಳಿ

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್‌ ಪಲ್ಟಿ Read More »

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ

ಸಮಗ್ರ ನ್ಯೂಸ್: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಎಂಬ ಸಂಶಯ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲವಾದರೂ, ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಶವ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ Read More »