March 2024

ನಿಮ್ಮ ಫೋನ್ ಕೆಲಸ ಹಾಳಾಗಿದ್ಯಾ? ಹಾಗಾದ್ರೆ ನೀವೇ ರಿಪೇರಿ ಮಾಡಬಹುದು

ಸಮಗ್ರ ನ್ಯೂಸ್: ಮಾನವನ ಜೀವನದಲ್ಲಿ ಆಹಾರದಷ್ಟೇ ಅಗತ್ಯಗಳೂ ಮುಖ್ಯ. ಇಂದಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಎಂದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರವರೆಗೂ ಸ್ಮಾರ್ಟ್ ಫೋನ್ ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಎಷ್ಟೇ ಕೆಲಸ ಮಾಡಿದರೂ ಸ್ಮಾರ್ಟ್ ಫೋನ್ ಇದ್ದರೆ ಸಾಕು ಎನ್ನುವ ರೀತಿಯಲ್ಲಿ ಇದನ್ನು ತಯಾರಿಸಲಾಗಿದೆ. ಅಕಸ್ಮಾತ್ ಫೋನ್ ರಿಪೇರಿಗೆ ಬಂದರೆ ಕೆಲವರು ಫೋನ್ ರಿಪೇರಿ ಆಗುವವರೆಗೂ ಊಟವನ್ನೂ ಮಾಡುವುದಿಲ್ಲ. ಮೊಬೈಲ್ ಸೇವೆಗಳು ಸ್ವಲ್ಪ ತಡವಾದರೆ ಅಥವಾ ರಿಪೇರಿ ಮಾಡುವವರು ಸ್ವಲ್ಪ ಸುಸ್ತಾಗಿದ್ದರೆ, ಸ್ಮಾರ್ಟ್ ಫೋನ್ ಬಳಕೆದಾರರ […]

ನಿಮ್ಮ ಫೋನ್ ಕೆಲಸ ಹಾಳಾಗಿದ್ಯಾ? ಹಾಗಾದ್ರೆ ನೀವೇ ರಿಪೇರಿ ಮಾಡಬಹುದು Read More »

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ಆಪರೇಷನ್ ಹಸ್ತಕ್ಕೆ ಬಿ.ವೈ ವಿಜಯೇಂದ್ರ ಚೆಕ್ ಮೇಟ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಆಪ್ತ ಹೆಚ್​​ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್​ನಲ್ಲೇ ಕುಳಿತುಕೊಂಡು ಸಿಎಂ ಸಿದ್ದರಾಮಯ್ಯ ಗಾಳ ಹಾಕಿದ್ದರು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಿಎಂಗೆ ಟಕ್ಕರ್ ನೀಡಿದ್ದಾರೆ. ಸಿಎಂ ತವರು ಜಿಲ್ಲೆ ಮೈಸೂರಿಗೆ ತಲುಪಿರುವ ವಿಜಯೇಂದ್ರ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಿದ್ದಾರೆ. ಸಿದ್ದರಾಮಯ್ಯ ಮನವೊಲಿಸಿದ್ದರಿಂದ ಪಕ್ಷ ಬಿಟ್ಟು ಕಾಂಗ್ರೆಸ್​​ ಸೇರಲು ಮುಂದಾಗಿದ್ದ ಮುಖಂಡನನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ಆಪರೇಷನ್ ಹಸ್ತಕ್ಕೆ ಬಿ.ವೈ ವಿಜಯೇಂದ್ರ ಚೆಕ್ ಮೇಟ್ Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್| ರಾಜ್ಯದ 60 ಕಡೆ ಏಕಕಾಲಕ್ಕೆ ದಾಳಿ

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ 13 ಅಧಿಕಾರಿಗಳಿಗೆ ಸಂಬಂಧಪಟ್ಟ 60 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಬೆಂಗಳೂರು, ಉಡುಪಿ, ಕಾರವಾರ, ಮೈಸೂರು, ಕೊಡಗು, ಬೀದರ್, ಧಾರವಾಡ, ಕೋಲಾರ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಓ ಯತೀಶ್ ಚಂದ್ರ ಮನೆ ಮೇಲೆ, ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಚೀಫ್ ಇಂಜಿನಿಯರ್

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್| ರಾಜ್ಯದ 60 ಕಡೆ ಏಕಕಾಲಕ್ಕೆ ದಾಳಿ Read More »

ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಖಾಡ ಸಿದ್ಧ/ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಪ್ರಚಾರಕ್ಕೆ ವೇದಿಕೆ ಸಿದ್ಧಗೊಂಡಿದ್ದು, ಈ ಹಿನ್ನಲೆಯಲ್ಲಿ ಬಿಹಾರ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಮತ್ತು ರಾಜ್ಯ ಸಚಿವ ನಿತಿನ್ ಗಡ್ಕರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಮೂರು ರಾಜ್ಯಗಳ ಪಟ್ಟಿಯಲ್ಲಿ ಇದ್ದಾರೆ.

ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಖಾಡ ಸಿದ್ಧ/ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ Read More »

ಲೋಕಸಭಾ ಚುನಾವಣೆ/ ಭಿನ್ನಮತ ಶಮನದ ಮುಂದಾಳತ್ವ ವಹಿಸಿದ ಯಡಿಯೂರಪ್ಪ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಹಿನ್ನಲೆಯಲ್ಲಿ ಬಿಜೆಪಿಯಲ್ಲಿ ಉಂಟಾಗಿದ್ದ ಅಸಮಾಧಾನವನ್ನು ಪರಿಹರಿಸಲು ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಾಳತ್ವ ವಹಿಸಿದ್ದಾರೆ. ಈ ಮೂಲಕ 82ರ ಹರೆಯದ ಯಡಿಯೂರಪ್ಪ ಅವರು ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಎದುರಾಗಿದ್ದ ಅಡೆತಡೆ, ಸವಾಲುಗಳನ್ನು ತಾವೇ ಮುಂದೆ ನಿಂತು ಒಂದೊಂದಾಗಿ ನಿವಾರಣೆ ಮಾಡುತ್ತಿದ್ದಾರೆ. ಕಳೆದೊಂದು ವಾರದಿಂದ ಯಡಿಯೂರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸತತವಾಗಿ ವಿವಿಧ ಕ್ಷೇತ್ರಗಳ ಮುಖಂಡರನ್ನು ಭೇಟಿ ಮಾಡುವ

ಲೋಕಸಭಾ ಚುನಾವಣೆ/ ಭಿನ್ನಮತ ಶಮನದ ಮುಂದಾಳತ್ವ ವಹಿಸಿದ ಯಡಿಯೂರಪ್ಪ Read More »

ಜೈಲಿನಿಂದಲೇ ಕೇಜ್ರಿವಾಲ್ ಆಡಳಿತ/ ಮತ್ತೊಂದು ಆದೇಶ ಹೊರಡಿಸಿದ ದೆಹಲಿ ಮುಖ್ಯಮಂತ್ರಿ

ಸಮಗ್ರ ನ್ಯೂಸ್: ಈಗಾಗಲೇ ದೆಹಲಿಯ ನೀರಿನ ಸಮಸ್ಯೆ ಕುರಿತು ಜೈಲಿನಿಂದಲೇ ಆದೇಶ ಹೊರಡಿಸಿ ತನಿಖೆಯಲ್ಲಿ ಇರುವ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಇದೀಗ ಜೈಲಿನಿಂದಲೇ ಮತ್ತೊಂದು (2ನೇ) ಆದೇಶ ಹೊರಡಿಸಿದ್ದಾರೆ. ನವದೆಹಲಿಯ ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್‍ಗಳಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಸರಿಪಡಿಸುವಂತೆ ಅವರು ಆದೇಶ ಹೊರಡಿಸಿದ್ದು, ಈ ಆದೇಶ ಲಿಖಿತ ರೂಪದಲ್ಲಿ ಹೊರಡಿಸಲಾಗಿದೆಯೋ ಅಥವಾ ಮೌಖಿಕ ಸೂಚನೆ ಹೊರಡಿಸಿದ್ದಾರೋ ಎಂಬುದನ್ನು ಆಮ್ ಆದ್ಮಿ ಪಕ್ಷ ಖಚಿತಪಡಿಸಿಲ್ಲ. ಜೈಲಿನೊಳಗೆ ಯಾವುದೇ ಸಾಮಗ್ರಿ ಕೊಂಡೊಯ್ಯಲು ಅನುಮತಿ ಇಲ್ಲದೇ ಇದ್ದರೂ ನೀರಿನ

ಜೈಲಿನಿಂದಲೇ ಕೇಜ್ರಿವಾಲ್ ಆಡಳಿತ/ ಮತ್ತೊಂದು ಆದೇಶ ಹೊರಡಿಸಿದ ದೆಹಲಿ ಮುಖ್ಯಮಂತ್ರಿ Read More »

ಎಲ್‍ಐಸಿ ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರ್ಯಾಂಡ್

ಸಮಗ್ರ ನ್ಯೂಸ್: . ಬ್ರ್ಯಾಂಡ್ ಫೈನಾನ್ಸ್ ಇನ್ಷೂರೆನ್ಸ್ 100 ಬಿಡುಗಡೆ ಮಾಡಿರುವ 2024ನೇ ಸಾಲಿನ ವರದಿಯಲ್ಲಿ, ಭಾರತೀಯ ಜೀವ ವಿಮಾ ನಿಗಮ (ಎಲ್‍ಐಸಿ) ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರ್ಯಾಂಡ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಲ್‍ಐಸಿಯ ಬ್ರ್ಯಾಂಡ್ ಮೌಲ್ಯ 9.8 ಶತಕೋಟಿ ಡಾಲರ್‍ನಲ್ಲೇ ಸ್ಥಿರವಾಗಿ ಮುಂದುವರೆದಿದೆ. ಬ್ರ್ಯಾಂಡ್ ಸ್ಟ್ರೆಂಥ್ ಇಂಡೆಕ್ಸ್‍ನಲ್ಲಿ ಎಲ್‍ಐಸಿ ಶೇ.88.3ರಷ್ಟು ಅಂಕ ಹೊಂದಿದೆ ಮತ್ತು ಬ್ರ್ಯಾಂಡ್ ಸ್ಟ್ರೆಂಥ್ ರೇಟಿಂಗ್‍ನಲ್ಲಿ ಎಎಎ ಸ್ತರ ಹೊಂದಿದೆ ಎಂದು ವರದಿ ಹೇಳಿದೆ. ಎಲ್‍ಐಸಿ ನಂತರದ ಸ್ಥಾನವನ್ನು ಕ್ಯಾಥೆ ಲೈಫ್

ಎಲ್‍ಐಸಿ ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರ್ಯಾಂಡ್ Read More »

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಮಿಸ್/ ಆಹ್ವಾನ ನೀಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಹಾಲಿ ಸಂಸದ ವರುಣ್ ಗಾಂಧಿಗೆ ಪೀಲಿಭೀತ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ, ಕಾಂಗ್ರೆಸ್ ಅವರಿಗೆ ಅಲ್ಲಿಂದಲೇ ಟಿಕೆಟ್ ನೀಡುವುದಾಗಿ ಆಫರ್ ನೀಡಿದೆ. ಬಿಜೆಪಿಯು ವರುಣ್ ಗಾಂಧಿ ಬದಲಿಗೆ ಈಗಷ್ಟೇ ಬಿಜೆಪಿ ಸೇರಿದ್ದ ಜಿತಿನ್ ಪ್ರಸಾದ ಅವರಿಗೆ ಪೀಲಿಭೀತ್ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ವರುಣ್ ಗಾಂಧಿ ಅವರು ಸಚ್ಚಾರಿತ್ರ್ಯ ಹೊಂದಿದ್ದು, ತಮ್ಮ ಜೀವನವನ್ನು ಪಾರದರ್ಶಕತೆಯಿಂದ ನಡೆಸಿದ್ದಾರೆ. ಅವರು ಮೇಧಾವಿ ಆಗಿದ್ದರೂ ಸಹ ಗಾಂಧಿ ಕುಟುಂಬದ ಕುಡಿ ಎಂಬ ಕಾರಣದಿಂದ ಬಿಜೆಪಿ ಅವರಿಗೆ ಟಿಕೆಟ್

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಮಿಸ್/ ಆಹ್ವಾನ ನೀಡಿದ ಕಾಂಗ್ರೆಸ್ Read More »

ಪೋನ್ ಕದ್ದಾಲಿಕೆ ಪ್ರಕರಣ/ ರೇವಂತ್ ರೆಡ್ಡಿ ಪೋನ್ ಕದ್ದಾಲಿಸಲು ಇಸ್ರೇಲಿನಿಂದ ತಂದ ಉಪಕರಣ ಬಳಕೆ

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆಸಲಾದ ಪೋನ್ ಕದ್ದಾಲಿಕೆ ಪ್ರಕರಣ ಮತ್ತಷ್ಟು ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಇದೀಗ ತನಿಖಾಧಿಕಾರಿಗಳು, ಹಾಲಿ ಸಿಎಂ ರೇವಂತ್ ರೆಡ್ಡಿ ಅವರಪೋನ್ ಕದ್ದಾಲಿಕೆ ಮಾಡಲು, ಅವರ ಮನೆ ಸಮೀಪದಲ್ಲೇ ಕಚೇರಿಯೊಂದನ್ನು ತೆರೆಯಲಾಗಿತ್ತು ಮತ್ತು ಇಸ್ರೇಲಿನಿಂದ ತಂದ ಉಪಕರಣ ಇರಿಸಿ ಫೆÇೀನ್ ಕದ್ದಾಲಿಸಲಾಗುತ್ತಿತ್ತು. ಈ ಉಪಕರಣ 300 ಮೀಟರ್ ವ್ಯಾಪ್ತಿಯ ಯಾವುದೇ ಕರೆ ಆಲಿಸುವ ಶಕ್ತಿ ಹೊಂದಿತ್ತು ಎಂದು ತಿಳಿಸಿದ್ದಾರೆ. ಇಂಥ ಗೂಢಚರ್ಯ ಉಪಕರಣದ ತರಿಸಲು ಕೇಂದ್ರದ ಅನುಮತಿ ಕಡ್ಡಾಯವಾಗಿದ್ದು, ಆದರೆ ಸಾಫ್ಟ್‍ವೇರ್

ಪೋನ್ ಕದ್ದಾಲಿಕೆ ಪ್ರಕರಣ/ ರೇವಂತ್ ರೆಡ್ಡಿ ಪೋನ್ ಕದ್ದಾಲಿಸಲು ಇಸ್ರೇಲಿನಿಂದ ತಂದ ಉಪಕರಣ ಬಳಕೆ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ 5 ಕಡೆ ಎನ್​​ಐಎ ದಾಳಿ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ಳಂಬೆಳಗೆ NIA ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳ (NIA) ಬುಧವಾರ ಬೆಂಗಳೂರು ನಗರದ ಐದು ಕಡೆ ದಾಳಿ ನಡೆಸಿದೆ. ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನ್ನು ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿರುವ ವಿಚಾರ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 5ಕ್ಕೂ ಹೆಚ್ಚು ಕಡೆ ಎನ್​ಐಎ ಅಧಿಕಾರಿಗಳು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ 5 ಕಡೆ ಎನ್​​ಐಎ ದಾಳಿ Read More »