March 2024

ದ.ಕ ಜಿಲ್ಲೆಯಲ್ಲಿ ‌ನಕ್ಸಲ್ ಚಟುವಟಿಕೆ, ಕೋವಿ ಡೆಪಾಸಿಟ್ ವಿಚಾರ| ಕುಕ್ಕೆಗೆ ಭೇಟಿ ನೀಡಿದ ಡಿಸಿಎಂ ಹೇಳಿದ್ದೇನು?

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಕ್ಸಲ್ ಚಟುವಟಿಕೆ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಕ್ಸಲ್ ಚಟುವಟಿಕೆ ಬಗ್ಗೆ ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳ ಬಳಿ ಚರ್ಚೆ ನಡೆಸುತ್ತೇನೆ ಎಂದರು. ಇನ್ನು ಚುನಾವಣಾ ಸಂದರ್ಭದಲ್ಲಿ ಕೃಷಿಕರ ಕೋವಿ ಠೇವಣಿ ಇಡುವ ವಿಚಾರ ವ್ಯಕ್ತವಾಗುತ್ತಿರುವ ವಿರೋಧಕ್ಕೆ ಪ್ರತಿಕ್ರಿಯಿಸಿದ ಅವರು ಇದು ಹಿಂದಿನಿಂದಲೇ ಬಂದ ಸಂಪ್ರದಾಯ, ಚುನಾವಣಾ ಇಲಾಖೆಯ ಆದೇಶದ ಮೇರೆಗೆ ಈ ಕ್ರಮ ಜರುಗಿಸಲಾಗುತ್ತಿದೆ. ಕಾಡುಪ್ರಾಣಿಗಳ ಸಮಸ್ಯೆಯಿರುವ ಕೃಷಿಕರಿಗೆ […]

ದ.ಕ ಜಿಲ್ಲೆಯಲ್ಲಿ ‌ನಕ್ಸಲ್ ಚಟುವಟಿಕೆ, ಕೋವಿ ಡೆಪಾಸಿಟ್ ವಿಚಾರ| ಕುಕ್ಕೆಗೆ ಭೇಟಿ ನೀಡಿದ ಡಿಸಿಎಂ ಹೇಳಿದ್ದೇನು? Read More »

ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಅವರು ಇಂದು(ಮಾ.26) ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ, ಹೊಸೋಳಿಗಮ್ಮನ ದರ್ಶನ ಪಡೆದು ಬಿಳಿನೆಲೆಯ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮುಖಾಂತರ ನಿರ್ಗಮಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ಕಡಬ ಬ್ಲಾಕ್ ಕಾಂಗ್ರೆಸ್ ಹಾಗೂ ದೇವಲದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗೇರು ನಿಗಮದ ಅಧ್ಯಕ್ಷೆ ಹಾಗೂ ಸುಳ್ಯ ವಿಧಾನಸಭೆ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಮಮತ ಗಟ್ಟಿ, ಕಡಬ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ Read More »

ನನ್ನನ್ನು ಚಿತ್ರೋದ್ಯಮ ಮರೆತಿದೆ; ಆಶಿಷ್ ವಿದ್ಯಾರ್ಥಿ

ಸಮಗ್ರ ನ್ಯೂಸ್: ಆಶಿಷ್ ವಿದ್ಯಾರ್ಥಿ ಕನ್ನಡವೂ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿದ್ದು, ನನಗೆ ಅವಕಾಶ ನೀಡುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಹಲವಾರು ಭಾಷೆಗಳಲ್ಲಿ ನಟಿಸಿದ್ದರೂ, ವಿವಿಧ ಪಾತ್ರಗಳನ್ನು ಮಾಡಿದ್ದರೂ, ನನ್ನನ್ನು ಚಿತ್ರೋದ್ಯಮ ಮರೆತಿದೆ ಎಂದು ಅವರು ಹೇಳಿಕೊಂಡಿದ್ದಾರೆ. ನನ್ನನ್ನು ಎಲ್ಲರೂ ವಿಲನ್ ರೀತಿಯಲ್ಲಿ ನೋಡುತ್ತಿದ್ದಾರೆ. ನಾನು ಸಾಕಷ್ಟು ಪಾತ್ರಗಳಲ್ಲಿ ನಟಿಸಿದ್ದೇನೆ. ಬೇರೆ ಬೇರೆ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಅವೆಲ್ಲವನ್ನೂ ಜನರು ಮತ್ತು ಉದ್ಯಮ ಮೆಚ್ಚಿಕೊಂಡಿದೆ. ಆದರೂ, ನನಗೆ ಕೆಲಸ ಕೊಡುತ್ತಿಲ್ಲ. ದಯವಿಟ್ಟು ಅವಕಾಶ ನೀಡಿ ಎಂದು ಅವರು

ನನ್ನನ್ನು ಚಿತ್ರೋದ್ಯಮ ಮರೆತಿದೆ; ಆಶಿಷ್ ವಿದ್ಯಾರ್ಥಿ Read More »

ಬಿಜೆಪಿಯ 400ರ ಟಾರ್ಗೆಟ್/ 100 ಹಾಲಿ ಸಂಸದರಿಗೆ ಟಿಕೆಟ್ ಮಿಸ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 400 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿ, ಈ ಬೃಹತ್ ಗುರಿ ದಾಟಲು ಸಾಕಷ್ಟು ರಣತಂತ್ರ ರೂಪಿಸಿದ್ದು, ಇದರ ನಡುವೆಯೇ 100 ಹಾಲಿ ಸಂಸರಿಗೆ ಟಿಕೆಟ್ ನಿರಾಕರಣೆ ಕೂಡ ಒಂದೆಂಬುದು ಗಮನಾರ್ಹ ಸಂಗತಿಯಾಗಿದೆ. ಅಂದರೆ ಹಾಲಿ ಸಂಸದರ ಪೈಕಿ ಶೇ.24ರಷ್ಟು ಜನರಿಗೆ ಟಿಕೆಟ್ ನಿರಾಕರಣೆ ಮಾಡಿದಂತಾಗಿದೆ. ಈಗಾಗಲೇ ಸುಮಾರು 402 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಇದರಲ್ಲಿ 100 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿದೆ. ಮೈತ್ರಿಕೂಟಗಳಿಗೆ ಇನ್ನೊಂದಿಷ್ಟು ಸೀಟು

ಬಿಜೆಪಿಯ 400ರ ಟಾರ್ಗೆಟ್/ 100 ಹಾಲಿ ಸಂಸದರಿಗೆ ಟಿಕೆಟ್ ಮಿಸ್ Read More »

20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ ಮುಂದಾದ BWSSB

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಇದರ ಮದ್ಯೆ ಅನುಮತಿ ಇಲ್ಲದೆ 20 ಕೊಳವೆ ಬಾವಿಗಳನ್ನು ಕೊರೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಎಂಜಿನಿಯರ್‌ಗಳಿಗೆ ಸೂಚನೆ ನೀಡಿದೆ. ಬೋರ್‌ವೆಲ್ ಕೊರೆಯುವವರು ಮಂಡಳಿಯಿಂದ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಅನುಮತಿ ಪಡೆಯದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು BWSSB ಇತ್ತೀಚೆಗೆ ಆದೇಶದಲ್ಲಿ ತಿಳಿಸಿದೆ. ಆದರೆ ಈ ಆದೇಶವನ್ನು ಕೆಲವರು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.

20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ ಮುಂದಾದ BWSSB Read More »

ಬಾಲಕನ ಅಪಹರಿಸಿ ಹತ್ಯೆ| 25 ಲಕ್ಷ ರೂ.ಗೆ ಬೇಡಿಕೆ

ಸಮಗ್ರ ನ್ಯೂಸ್:‌ ಹಣಕ್ಕಾಗಿ ಬಾಲಕನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ನಡೆದಿದೆ. ಒಂಬತ್ತು ವರ್ಷದ ಬಾಲಕನನ್ನು ಮಸೀದಿಯಲ್ಲಿ ಸಂಜೆಯ ಪ್ರಾರ್ಥನೆಯ ವೇಳೆ ದುಷ್ಕರ್ಮಿಗಳು ಅಪಹರಿಸಿದ್ದಾರೆ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ. ನಂತರ ಇಬಾದ್‌ನ ಪೋಷಕರಿಗೆ ಅನಾಮಧೇಯ ಕರೆ ಮಾಡಿ ಆತನನ್ನು ಕಿಡ್ನಾಪ್ ಮಾಡಿರುವುದಾಗಿ ತಿಳಿಸಿದ್ದಾರೆ. ಮನೆಯವರ ಬಳಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಟೈಲರ್ ಆಗಿರುವ ಆತನ ತಂದೆ ಮುದಾಸಿರ್ ಬುಬರ್ ಕುಲಗಾಂವ್ ಗ್ರಾಮಾಂತರ ಪೊಲೀಸರಿಗೆ ಮಾಹಿತಿ

ಬಾಲಕನ ಅಪಹರಿಸಿ ಹತ್ಯೆ| 25 ಲಕ್ಷ ರೂ.ಗೆ ಬೇಡಿಕೆ Read More »

ಮದ್ಯ ನೀತಿ ಹಗರಣ| ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು

ಸಮಗ್ರ ನ್ಯೂಸ್: ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ ಅವರನ್ನು ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಏಪ್ರಿಲ್ 9 ರ ವರೆಗೆ ಜೈಲಿಗೆ ಕಳುಹಿಸಿದೆ. ಮದ್ಯ ನೀತಿ ಹಗರಣದಲ್ಲಿ ಕವಿತಾ ಅವರು ಮಾ.15 ರಂದು ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಕಳೆದ ವಾರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿತ್ತು. ಈ ವೇಳೆ ಅವರ ಮೊಬೈಲ್‌ನಲ್ಲಿದ್ದ ಡೇಟಾವನ್ನು ಪರಿಶೀಲಿಸಲಾಗಿತ್ತು. ಕವಿತಾ ಅವರಿಗೆ ದೆಹಲಿ ನ್ಯಾಯಾಲಯವು ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಲಾಕಪ್‌ನಲ್ಲಿ ಇರಿಸುವ ಬದಲು

ಮದ್ಯ ನೀತಿ ಹಗರಣ| ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು Read More »

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆ ಶಿವಕುಮಾರ್

ಸಮಗ್ರ ನ್ಯೂಸ್: ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಂದರ್ಭದಲ್ಲಿ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ಯಾವಾಗಲೂ ಧರ್ಮಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಮಾತು ಬಿಡದ ಮಂಜುನಾಥ, ಕಾಸು ಬೆಳೆದ ತಿಮ್ಮಪ್ಪ ಅಂತಾ ಮಾತಿದೆ. ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆ ಶಿವಕುಮಾರ್ Read More »

ಪಾಕಿಸ್ತಾನದ ʼಪಿಎನ್‌ಎಸ್ ಸಿದ್ದಿಕ್ʼ ನೌಕಾ ವಿಮಾನ ನಿಲ್ದಾಣದ ಮೇಲೆ ದಾಳಿ

ಸಮಗ್ರ ನ್ಯೂಸ್: ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾ ವಿಮಾನ ನಿಲ್ದಾಣವಾದ ಟರ್ಬತ್‌ನಲ್ಲಿರುವ ಪಿಎನ್‌ಎಸ್ ಸಿದ್ದಿಕ್ ಮೇಲೆ ದಾಳಿ ನಡೆದಿದೆ.‌ ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ ಮಜೀದ್ ಬ್ರಿಗೇಡ್, ಟರ್ಬತ್‌ನಲ್ಲಿರುವ ನೌಕಾ ವಾಯುನೆಲೆಯ ಮೇಲಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಬಲೂಚಿಸ್ತಾನ್ ಪೋಸ್ಟ್ ವರದಿ ಮಾಡಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಬಲೂಚಿಸ್ತಾನದಲ್ಲಿ ಚೀನಾದ ಹೂಡಿಕೆಗೆ ಮಜೀದ್‌ ಬ್ರಿಗೇಡ್‌ ಟೀಕೆ ವ್ಯಕ್ತಪಡಿಸಿದ್ದು, ಈ ಪ್ರದೇಶದ ಸಂಪನ್ಮೂಲಗಳನ್ನು ಚೀನಾ ಮತ್ತು ಪಾಕಿಸ್ತಾನ ಎರಡೂ ದೇಶಗಳು ಬಳಸಿಕೊಳ್ಳುತ್ತಿವೆ ಎಂದು ಆರೋಪ

ಪಾಕಿಸ್ತಾನದ ʼಪಿಎನ್‌ಎಸ್ ಸಿದ್ದಿಕ್ʼ ನೌಕಾ ವಿಮಾನ ನಿಲ್ದಾಣದ ಮೇಲೆ ದಾಳಿ Read More »

ನೀಟ್​ ಆಕಾಂಕ್ಷಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್‌ ; ನೀಟ್​ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ನೀಟ್‌ಗೆ ತಯಾರಿ ನಡೆಸುತ್ತಿದ್ದ 20 ವರ್ಷದ ಉರುಜ್ ಖಾನ್ ಎಂಬಾತ ನಗರದ ಬಾಡಿಗೆ ಕೊಠಡಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. 2024ರಲ್ಲಿ ಇಂತಹ ಘಟನೆ ಅನೇಕ ಸಂಭವಿಸಿದ್ದು, ಇದೀಗ 7ನೇ ಘಟನೆ ಇದಾಗಿದೆ. ಕಳೆದ ವರ್ಷದಲ್ಲಿ ವಿದ್ಯಾರ್ಥಿಗಳ ಸಾವಿನ ಸಂಖ್ಯೆ 29 ರಷ್ಟಿತ್ತು. ಉತ್ತರ ಪ್ರದೇಶದ ಕನೌಜ್ ನಿವಾಸಿಯಾಗಿರುವ ಮೃತ ಉರುಜ್ ಖಾನ್, ವಿಜ್ಞಾನನಗರ ಪ್ರದೇಶದ ಬಾಡಿಗೆ ಫ್ಲಾಟ್‌ನಲ್ಲಿ

ನೀಟ್​ ಆಕಾಂಕ್ಷಿ ನೇಣು ಬಿಗಿದು ಆತ್ಮಹತ್ಯೆ Read More »