March 2024

ಬೇಗೂರಿನಲ್ಲಿ ಸಹೋದರನಿಂದಲೇ ತಮ್ಮನಿಗೆ ಗುಂಡು| ಸ್ಥಳದಲ್ಲಿ ಮೃತಪಟ್ಟ ಮಲ್ಲಂಡ ಪ್ರಕಾಶ್

ಸಮಗ್ರ ನ್ಯೂಸ್: ಸಹೋದರನಿಂದಲೇ ತಮ್ಮನಿಗೆ ಗುಂಡು ಹೊಡೆದು ಕೊಲೆ ಮಾಡಿದ ಪ್ರಕರಣ ಪೊನ್ನಂಪೇಟೆ ತಾಲೂಕು ಬೇಗೂರಿನಲ್ಲಿ ಮಾ.30 ರಂದು ನಡೆದಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಅರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್(57) ಎಂಬವರಿಗೆ ಅವರ ಸಹೋದರ ಸುಬ್ರಮಣಿ ಇದೀಗ ಬೇಗೂರು ತೋಟದಲ್ಲಿ ಗುಂಡು ಹೊಡೆದ ಪರಿಣಾಮ ಪ್ರಕಾಶ್ ಮೃತಪಟ್ಟಿದ್ದಾರೆ. ಪ್ರಕಾಶ್ ಪುತ್ರನಿಗೂ ಗುಂಡು ತಗಲಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ […]

ಬೇಗೂರಿನಲ್ಲಿ ಸಹೋದರನಿಂದಲೇ ತಮ್ಮನಿಗೆ ಗುಂಡು| ಸ್ಥಳದಲ್ಲಿ ಮೃತಪಟ್ಟ ಮಲ್ಲಂಡ ಪ್ರಕಾಶ್ Read More »

ಇಂದು ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ

ಸಮಗ್ರ ನ್ಯೂಸ್: ಜಿಲ್ಲಾಡಳಿತ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118ನೇ ಜನ್ಮ ದಿನಾಚರಣೆಯು ಮಾ. 31ರಂದು ಬೆಳಗ್ಗೆ 10.30 ಗಂಟೆಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.

ಇಂದು ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ Read More »

ಕಡಬ: ಆಲಂಕಾರು‌ ಬಳಿ ಸಿಲಿಂಡರ್ ವಾಹನ – ಟೆಂಪೋ ನಡುವೆ ಅಪಘಾತ| ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ಮಾ.30 ರ ರಾತ್ರಿ ನಡೆದಿದೆ. ಆಲಂಕಾರಿನಿಂದ ಪುತ್ತೂರಿನತ್ತ ಸಾಗುತ್ತಿದ್ದ ಸಿಎನ್ ಜಿ ಸಿಲಿಂಡರ್ ಸಾಗಾಟದ ಲಾರಿ ಮತ್ತು ಕಡಬದತ್ತ ಬರುತ್ತಿದ್ದ ಟೆಂಪೋ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಟೆಂಪೋ ವಾಹನದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಕಡಬ: ಆಲಂಕಾರು‌ ಬಳಿ ಸಿಲಿಂಡರ್ ವಾಹನ – ಟೆಂಪೋ ನಡುವೆ ಅಪಘಾತ| ಇಬ್ಬರು ಗಂಭೀರ Read More »

ನಾಳೆ ಮಡಿಕೇರಿಯಲ್ಲಿ ಕಾರು ರ್‍ಯಾಲಿ

ಸಮಗ್ರ ನ್ಯೂಸ್:ಮಡಿಕೇರಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ.ಆ ನಿಟ್ಟಿನಲ್ಲಿ ಈಗಾಗಲೇ ರಂಗೋಲಿ ಸ್ಪರ್ಧೆ ಆರಂಭವಾಗಿದ್ದು, ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಪೂರ್ಣಗೊಂಡಿದೆ. ಹಲವು ಯುವಜನರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿದ್ದಾರೆ. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗಿದೆ. ಶನಿವಾರ ಸೋಮವಾರಪೇಟೆ ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ರಂಗೋಲಿ ಸ್ಪರ್ಧೆ ನಡೆದಿದೆ. ಇದೇ

ನಾಳೆ ಮಡಿಕೇರಿಯಲ್ಲಿ ಕಾರು ರ್‍ಯಾಲಿ Read More »

ವಿರಾಜಪೇಟೆ:ವ್ಯಕ್ತಿ ಮೇಲೆ ಕಾಡಾನೆ ದಾಳಿ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್:ವಿರಾಜಪೇಟೆ ಹೊರವಲಯದ ಅರಮೇರಿ ಗ್ರಾಮದಲ್ಲಿ ಇಂದು(ಮಾ.30) ಸಂಜೆ ಆರು ಗಂಟೆಯ ಸಮಯದಲ್ಲಿ ಕಾಡಾನೆಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ನಟೇಶ್ ಕಾಳಪ್ಪ (50) ಎಂಬುವವರ ಮೇಲೆ ಕಾಡನೆ ಎರಗಿದ್ದು, ಗಾಯಳುವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ವಿರಾಜಪೇಟೆ:ವ್ಯಕ್ತಿ ಮೇಲೆ ಕಾಡಾನೆ ದಾಳಿ| ಆಸ್ಪತ್ರೆಗೆ ದಾಖಲು Read More »

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರಿಗೆ ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ಮಾ. 29ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷೆ ಕಮಲ ರಾಜೇಶ್, ಸಮಾಜ ಸೇವಕಿ, ಸೂರಜ್ ಫೌಂಡೇಷನ್ ಸಂಸ್ಥಾಪಕಿ ಸುಜಾತ ಎಸ್ ಮುನಿರಾಜು,

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ Read More »

ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ಯ? ಹಾಗಾದ್ರೆ ಇಲ್ಲಿದೆ ಸುವರ್ಣಾವಕಾಶ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪೋಸ್ಟ್​-ಡಾಕ್ಟರಲ್​ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 17, 2024ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ. ಬೆಂಗಳೂರಿ​​ನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು

ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ಯ? ಹಾಗಾದ್ರೆ ಇಲ್ಲಿದೆ ಸುವರ್ಣಾವಕಾಶ! Read More »

ಕಡಬ ಬ್ಲಾಕ್ ಕಾಂಗ್ರೆಸ್ಸಿನಲ್ಲಿ ಲೋಕಸಭಾ ಚುನಾವಣಾ ಪೂರ್ವಬಾವಿ ಸಭೆ

ಸಮಗ್ರ ನ್ಯೂಸ್: ಇದೆ ಬರುವ ಏಪ್ರಿಲ್ 26ರ ನಡೆಯುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯಾಗಿ ಕಡಬ ಬ್ಲಾಕ್ ಕಾಂಗ್ರೆಸ್ಸಿನ ಪೂರ್ವಬಾವಿ ಸಭೆಯು ಮಾ. 28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಡಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಸುಳ್ಯ ವಿಧಾನಸಭಾ ಕ್ಷೇತ್ರದ ವಿಕ್ಷಕ ಜಯಪ್ರಕಾಶ್ ರೈ, ಕಡಬ ಬ್ಲಾಕ್ ಕಾಂಗ್ರೇಸ್ ವೀಕ್ಷಕ ಕಿರಣ್

ಕಡಬ ಬ್ಲಾಕ್ ಕಾಂಗ್ರೆಸ್ಸಿನಲ್ಲಿ ಲೋಕಸಭಾ ಚುನಾವಣಾ ಪೂರ್ವಬಾವಿ ಸಭೆ Read More »

ಬಿಜೆಪಿ ಪ್ರಣಾಳಿಕೆ ಸಮಿತಿ/ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯ ಸಂಚಾಲಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಸಹ ಸಂಚಾಲಕರಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇಮಕ ಮಾಡಲಾಗಿದೆ. ಇವರಲ್ಲದೆ 24 ಮಂದಿಯನ್ನು ಈ ಸಮಿತಿಗೆ ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗಿದೆ. ಅರ್ಜುನ್ ಮುಂಡಾ, ಭೂಪೇಂದ್ರ ಯಾದವ್, ಅರ್ಜುನ್‍ರಾಮ್ ಮೇಘವಾಲ್, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ಧಮೇರ್ಂದ್ರ ಪ್ರಧಾನ್, ಭೂಪೇಂದ್ರ ಪಟೇಲ್, ಹಿಮಂತ

ಬಿಜೆಪಿ ಪ್ರಣಾಳಿಕೆ ಸಮಿತಿ/ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್ Read More »

ಬೀದರ್: ಸಾಲದ ಹೊರೆಯಿಂದ ಬಾವಿಗೆ ಬಿದ್ದು ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ರೈತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ ಜಿಲ್ಲೆಯ ಔರದ್‌ ತಾಲ್ಲೂಕಿನ ಮುಸ್ತಾಪುರ ಗ್ರಾಮದಲ್ಲಿ ‌ ನಡೆದಿದೆ. ಉಮೇಶ ಹುಲ್ಲೆಪ್ಪ (45) ಆತ್ಮಹತ್ಯೆಗೆ ಶರಣಾಗಿರುವ ರೈತ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ಮೃತದೇಹ ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತ ರೈತನಿಗೆ ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ ಇದ್ದಾನೆ. ಲಾಧಾ ಪಿಕೆಪಿಎಸ್‌ನಿಂದ ₹1 ಲಕ್ಷ ಹಾಗೂ ಖಾಸಗಿ ಬ್ಯಾಂಕನಿಂದ ₹2 ಲಕ್ಷ ಸಾಲ

ಬೀದರ್: ಸಾಲದ ಹೊರೆಯಿಂದ ಬಾವಿಗೆ ಬಿದ್ದು ರೈತ ಆತ್ಮಹತ್ಯೆ Read More »