March 2024

ಪುತ್ತೂರು: ಗಾಂಜಾ ಸೇವಿಸಿ ಅನುಚಿತ ವರ್ತನೆ| ಆರೋಪಿಗಳ ಸೆರೆ

ಸಮಗ್ರ ನ್ಯೂಸ್‌ : ವ್ಯಕ್ತಿಗಳಿಬ್ಬರು ಗಾಂಜಾ ಸೇವಿಸಿ ಅನುಚಿತವಾಗಿ ವರ್ತನೆ ತೋರಿದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳಿಗ್ಗೆ ದಾಳಿ ನಡೆಸಿ ಪುತ್ತೂರು ನಗರ ಪೊಲೀಸರು ಮೂವರನ್ನು ದಸ್ತಗಿರಿ ಮಾಡಿದ ಘಟನೆ ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದಲ್ಲಿರುವ, ಟೌನ್‌ಹಾಲ್‌ ಬಳಿ ಸಾರ್ವಜನಿಕ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳನ್ನು ಬಪ್ಪಳಿಗೆ ಮನೆ, ಪುತ್ತೂರು ಕಸಬಾ ಗ್ರಾಮದ ನಿವಾಸಿ ಬಿ . ಉಮ್ಮರ್‌ ಫಾರೂಕ್‌ (36) ಹಾಗೂ ಮುಕ್ಕಚೇರಿ, ಉಳ್ಳಾಲ, ಮಂಗಳೂರು ತಾಲೂಕು ನಿವಾಸಿ ಕೆ. ಮೊಹಿದ್ದಿನ್‌ (43) […]

ಪುತ್ತೂರು: ಗಾಂಜಾ ಸೇವಿಸಿ ಅನುಚಿತ ವರ್ತನೆ| ಆರೋಪಿಗಳ ಸೆರೆ Read More »

ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶ|ಲಕ್ಷಾಂತರ ರೂ. ಕಳೆದುಕೊಂಡ ಆಟೋ ಚಾಲಕ..!

ಸಮಗ್ರ ನ್ಯೂಸ್‌ : ಅಪರಿಚಿತ ವಾಟ್ಸಪ್ ಸಂದೇಶ ನಂಬಿ ಆಫ್ ಡೌನ್ ಲೋಡ್ ಮಾಡಿಕೊಂಡು ಹಣ ಹೂಡಿಕೆ ಮಾಡಿದ ಆಟೋ ರಿಕ್ಷಾ ಚಾಲಕ ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಬಂಟ್ವಾಳ ಸರಪಾಡಿ ಗ್ರಾಮದಲ್ಲಿ ನಡೆದಿದೆ. ಸರಪಾಡಿ ಗ್ರಾಮದ ನಿವಾಸಿ ಹರೀಶ್ ಕುಮಾರ್ (33) ವಂಚನೆಗೊಳಗಾದ ವ್ಯಕ್ತಿ. ಸರಪಾಡಿ ಗ್ರಾಮದ ನಿವಾಸಿ ಹರೀಶ್ ಕುಮಾರ್ (33) ಎಂಬವರು ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಅವರ ಮೊಬೈಲಿಗೆ 2023 ರ ಡಿಸೆಂಬರ್ 20 ರಂದು ಅಪರಿಚಿತ ವಾಟ್ಸಪ್ ನಿಂದ ಬಂದ

ಬಂಟ್ವಾಳ: ಸುಳ್ಳು ವಾಟ್ಸಪ್ ಸಂದೇಶ|ಲಕ್ಷಾಂತರ ರೂ. ಕಳೆದುಕೊಂಡ ಆಟೋ ಚಾಲಕ..! Read More »

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ದಾಳಿ

ಸಮಗ್ರ ನ್ಯೂಸ್ : ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನು ವಶಕ್ಕೆ ಪಡೆದ ಘಟನೆ ಉಳ್ಳಾಲ ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದಲ್ಲಿ ನಡೆದಿದೆ. ಸಿಸಿಬಿ ಪೊಲೀಸರೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ತಂಡವು ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿ ಬಳಿಕ ಸ್ಥಳೀಯ ಪೊಲೀಸರಿಗೂ

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ದಾಳಿ Read More »

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಗಂಡನನ್ನೆ ಕೊಂದ ಹೆಂಡತಿ

ಸಮಗ್ರ ನ್ಯೂಸ್: ಮದುವೆ ಆಗಿದ್ದರೂ ಮತ್ತೊಬ್ಬನ ಜೊತೆ ಸಂಬಂದ ಬೆಳೆಸಿದ ಮಹಿಳೆ ಗಂಡನನ್ನೇ ಕೊಂದು ಹಾಕಿದ್ದ ಘಟನೆ ನಡೆದಿದೆ. ಬಿಜೆಪಿಯ ಮಾಜಿ ತಾಲೂಕು ಪಂಚಾಯತಿ ಸದಸ್ಯ ರಾಜು ನಾಯ್ಕ್ ಪತ್ನಿಯಿಂದಲೇ ಕೊಲೆಯಾಗಿದ್ದಾನೆ. ಈ ಘಟನೆ ರಾಯಚೂರಿನ ಸಿಂಗನೋಡಿ ತಾಂಡಾದಲ್ಲಿ ನಡೆದಿದೆ. ಗ್ರಾಮಕ್ಕೆ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿ ಜತೆಗೆ ಸ್ನೇಹಾ ಸಲುಗೆಯನ್ನು ಬೆಳೆಸಿದ್ದಳು. ಆತನನ್ನು ಮೋಹಿಸಿದ ಸ್ನೇಹಾ ಆತನೊಟ್ಟಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕದ್ದು ಮುಚ್ಚಿ ಆತನೊಟ್ಟಿಗೆ ಸೇರುತ್ತಿದ್ದಳು. ಆದರೆ ಇದು ಪತಿ

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಗಂಡನನ್ನೆ ಕೊಂದ ಹೆಂಡತಿ Read More »

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಸ್ಥಾನದಿಂದ ಹಿಂದೆ ಸರಿದ ಎಂಎಸ್ ಧೋನಿ

ಸಮಗ್ರ ನ್ಯೂಸ್: ಚೆನ್ನೈ ಸೂಪರ್ ಕಿಂಗ್ಸ್‍ನ ನಾಯಕ ಸ್ಥಾನದಿಂದ ಅನುಭವಿ ಆಟಗಾರ ಎಂಎಸ್ ಧೋನಿ ಗುಡ್ ಬೈ ಹೇಳಿದ್ದು, ಅವರ ಬದಲಿಗೆ ತಂಡದ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ತಂಡದ ನಾಯಕತ್ವವನ್ನು ಹಸ್ತಾಂತರಿಸಲಾಗಿದೆ. 2024 ರ ಟಾಟಾ ಐಪಿಎಲ್ ಆರಂಭಕ್ಕೂ ಮುನ್ನ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ರುತುರಾಜ್ ಗಾಯಕ್ವಾಡ್‍ಗೆ ಹಸ್ತಾಂತರಿಸಿದ್ದಾರೆ. ರುತುರಾಜ್ 2019 ರಿಂದ ಚೆನ್ನೈ ಸೂಪರ್ ಕಿಂಗ್ಸ್‍ನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಈ ಅವಧಿಯಲ್ಲಿ ಐಪಿಎಲ್‍ನಲ್ಲಿ 52 ಪಂದ್ಯಗಳನ್ನು ಆಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಸ್ಥಾನದಿಂದ ಹಿಂದೆ ಸರಿದ ಎಂಎಸ್ ಧೋನಿ Read More »

ಲೋಕಸಭೆ ಚುನಾವಣೆ ಹಿನ್ನೆಲೆ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆಯನ್ನು ಮುಂದೂಡಲಾಗಿದೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿತ್ತು. ಅದರಂತೆ ಮೇ. 8ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಆದರೆ ಇದೀಗ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ಮೇ.8ಕ್ಕೆ ನಡೆಯಬೇಕಿದ್ದ ಎಲ್ಲ

ಲೋಕಸಭೆ ಚುನಾವಣೆ ಹಿನ್ನೆಲೆ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ Read More »

ತಪ್ಪು ಮಾಹಿತಿ ಹಿನ್ನಲೆ/ ಸುಪ್ರೀಂ ಮುಂದೆ ಕ್ಷಮೆಯಾಚಿಸಿದ ಪತಂಜಲಿ ಸಂಸ್ಥೆ

ಸಮಗ್ರ ನ್ಯೂಸ್: ಪತಂಜಲಿ (PATANJALI) ಸಂಸ್ಥೆ ವಿರುದ್ಧ ತಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಸ್ಥೆ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸ್ಥೆಯ ಮುಖ್ಯಸ್ಥ ಬಾಬಾ ರಾಮ್ ದೇವ್ (BABA RAM DEV) ಅವರು ಬೇಷರತ್ ಕ್ಷಮೆಯಾಚಿಸಿದ್ದಾರೆ. ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯವು ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತುಗಳಿಗೆ ತಾತ್ಕಾಲಿಕ ನಿಷೇಧವನ್ನು ವಿಧಿಸಿತ್ತು. ಅಲ್ಲದೇ ತಪ್ಪುದಾರಿಗೆಳೆಯುವ ಜಾಹೀರಾತು ನೀಡಿದ್ದಕ್ಕಾಗಿ ಅದರ ಸಂಸ್ಥಾಪಕರಾದ ರಾಮ್‍ದೇವ್ ಮತ್ತು ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ

ತಪ್ಪು ಮಾಹಿತಿ ಹಿನ್ನಲೆ/ ಸುಪ್ರೀಂ ಮುಂದೆ ಕ್ಷಮೆಯಾಚಿಸಿದ ಪತಂಜಲಿ ಸಂಸ್ಥೆ Read More »

ಚುನಾವಣಾ ಬಾಂಡ್/ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್ ಬಿ ಐ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಬಾಂಡ್ ಸಂಖ್ಯೆಗಳ ವಿವರಗಳು ಸೇರಿದಂತೆ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಸಂಪೂರ್ಣ ಮಾಹಿತಿಯನ್ನು ಮಾರ್ಚ್ 21ರೊಳಗೆ ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಎಸ್.ಬಿ.ಐ.ಗೆ ಕಟ್ಟುನಿಟ್ಟಿನ ತಾಕೀತು ಮಾಡಿತ್ತು. ಚುನಾವಣಾ ಬಾಂಡ್ ಖರೀದಿದಾರರು ಮತ್ತು ಅದನ್ನು ಸ್ವೀಕರಿಸಿದ ರಾಜಕೀಯ ಪಕ್ಷಗಳ ಸಂಬಂಧ ಬಹಿರಂಗಪಡಿಸುವ ವಿಶಿಷ್ಟ ಬಾಂಡ್ ನಂಬರ್ ಗಳ ಸಮಗ್ರ ಮಾಹಿತಿ ಕೂಡ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್

ಚುನಾವಣಾ ಬಾಂಡ್/ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್ ಬಿ ಐ Read More »

ಅರುಣಾಚಲದ ವಿಚಾರದಲ್ಲಿ ಭಾರತದ ಪರ ನಿಂತ ದೊಡ್ಡಣ್ಣ/ ಅರುಣಾಚಲವನ್ನು ಭಾರತದ ಭೂಭಾಗ ಎಂದೇ ಪರಿಗಣಿಸುತ್ತೇವೆ ಎಂದು ಅಮೆರಿಕ

ಸಮಗ್ರ ನ್ಯೂಸ್: ಅರುಣಾಚರ ಪ್ರದೇಶವು ಚೀನಾಗೆ ಸೇರಿದ್ದಲ್ಲ. ಅದನ್ನು ನಾವು ಭಾರತದ ಭೂಭಾಗ ಎಂದೇ ಪರಿಗಣಿಸುತ್ತೇವೆ. ಇಲ್ಲಿನ ಆಕ್ರಮಣ, ಅತಿಕ್ರಮಣ, ಮಿಲಿಟರಿ ಅಥವಾ ನಾಗರಿಕರ ಮೂಲಕ ಪ್ರಾದೇಶಿಕ ಹಕ್ಕುಗಳನ್ನು ಮುಂದಿಡುವ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ ಎಂದು ಅಮೆರಿಕ ಹೇಳಿದೆ. ಈ ಹೇಳಿಕೆ ಜಾಗತಿಕ ಮಟ್ಟದಲ್ಲಿ ಚೀನಾಗೆ ತೀವ್ರ ಮುಖಭಂಗ ಉಂಟುಮಾಡಿದೆ. ಈ ಪ್ರದೇಶದ ಹೆಸರನ್ನು ಬದಲಾಯಿಸುವ ಚೀನಾ ಪ್ರಯತ್ನವನ್ನು ಭಾರತ ವಿಫಲಗೊಳಿಸುತ್ತ ಬಂದಿದೆ. ಅರುಣಾಚಲ ಕುರಿತಾಗಿ ಚೀನಾ ರಕ್ಷಣಾ ಸಚಿವಾಲಯದ ವಕ್ತಾರರು ಅಸಂಬದ್ಧ ಹೇಳಿಕೆಗಳನ್ನು

ಅರುಣಾಚಲದ ವಿಚಾರದಲ್ಲಿ ಭಾರತದ ಪರ ನಿಂತ ದೊಡ್ಡಣ್ಣ/ ಅರುಣಾಚಲವನ್ನು ಭಾರತದ ಭೂಭಾಗ ಎಂದೇ ಪರಿಗಣಿಸುತ್ತೇವೆ ಎಂದು ಅಮೆರಿಕ Read More »

ಬೆಂಗಳೂರು: ಮೆಟ್ರೋ ಟ್ರಾಕ್ ಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಉತ್ತರ ಭಾರತದಿಂದ ಕಾನೂನು ಅದ್ಯಯನಕ್ಕೆ ಬಂದ ಯುವಕ ಒಬ್ಬ ಬೆಂಗಳೂರಿನಲ್ಲಿರುವ ಅತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿರುವ ಮೆಟ್ರೋ ಟ್ರ್ಯಾಕಿಗೆ ಜಿಗಿದು ಆತ್ಮಹತ್ಯೆ ಯತ್ನಿಸಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಗುರುವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಟ್ರೈನ್ ಬರುವ ಸಂದರ್ಭದಲ್ಲಿ ಯುವಕ ತಕ್ಷಣ ಟ್ರ್ಯಾಕ್ ಗೆ ಜಿಗಿದಿದ್ದಾನೆ. ಈ ವೇಳೆ ಆತನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ಮೆಟ್ರೋ ಟ್ರಾಕ್ ಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »