March 2024

ತವರು ಜಿಲ್ಲೆಯಲ್ಲೇ ಬರಿದಾದ ಜೀವನದಿ ಕಾವೇರಿ

ಸಮಗ್ರ ನ್ಯೂಸ್: ತವರು ಜಿಲ್ಲೆ ಕೊಡಗು ಜಿಲ್ಲೆಯಲ್ಲಿ ಈ ಬಾರಿ ತೀವ್ರ ಮಳೆ ಕೊರತೆ ಎದುರಾಗಿದೆ. ಪರಿಣಾಮ ಬೇಸಿಗೆಯ ಆರಂಭದಲ್ಲಿಯೇ ಜೀವನದಿ ಎಂದು ಕರೆಸಿಕೊಳ್ಳುತ್ತಿದ್ದ ಕಾವೇರಿ ತನ್ನ ಹರಿಯುವಿಕೆಯನ್ನೇ ನಿಲ್ಲಿಸಿದ್ದಾಳೆ. ಪರಿಣಾಮ ಈ ಪಟ್ಟಣ ನದಿತಟದ ಮೇಲೆ ನೆಲೆ ನಿಂತಿದ್ದರೂ ಈಗ ಕುಡಿಯುವ ನೀರಿಗೆ ಹಾಹಾಕಾರ ಎದುರಿಸುತ್ತಿದೆ. ಕೊಡಗಿನಲ್ಲಿ ಹುಟ್ಟಿ ಜಿಲ್ಲೆಯ ನೂರಾರು ಗ್ರಾಮಗಳ ಮೂಲಕ ಹರಿಯುವ ಕಾವೇರಿ ಸಮೃದ್ಧಿಯಾಗಿಸಿತ್ತು. ಆದರೆ ಈಗ ತವರು ಬಿಟ್ಟು ಮುಂದೆ ಹರಿಯದ ಪರಿಸ್ಥಿತಿ ಎದುರಾಗಿದೆ. ನದಿಯ ಬಹುತೇಕ ಕಡೆ ಸಂಪೂರ್ಣ […]

ತವರು ಜಿಲ್ಲೆಯಲ್ಲೇ ಬರಿದಾದ ಜೀವನದಿ ಕಾವೇರಿ Read More »

ಮಣಿಪಾಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಸಮಗ್ರ ನ್ಯೂಸ್:‌ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಮಣಿಪಾಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪಂಜಾಬ್‌ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಬಂಧಿತ ಆರೋಪಿ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾನ್, ಶರಣಬಸವ ಆರೋಪಿಯನ್ನು ಪಂಜಾಬ್ ರಾಜ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ

ಮಣಿಪಾಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಉಡುಪಿ: ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ 14 ಕಡೆಗಳಲ್ಲಿ ಪೊಲೀಸ್ ಚೆಕ್‌ಪೋಸ್ಟ್

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಒಟ್ಟು 14 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊಲ್ಲೂರು, ಶಿರೂರು, ಹೊಸಂಗಡಿ, ಕುಂದಾಪುರ ಕ್ಷೇತ್ರದ ಸಾಬರಕಟ್ಟೆ, ಉಡುಪಿ ಕ್ಷೇತ್ರದ ಗುಡ್ಡೆಯಂಗಡಿ, ಮಣಿಪುರ ಉದ್ಯಾವರ, ಕಾಪು ಕ್ಷೇತ್ರದ ಹೆಜಮಾಡಿ, ಫಲಿಮಾರು, ಕಾರ್ಕಳದ ಮಾಳ, ಮುಂಡೂರು, ಸಚ್ಚರಿ ಪೇಟೆ, ಸೋಮೇಶ್ವರ, ಮುಡಾರು, ಬಜಗೋಳಿ, ಸಾಣೂರು, ಹೊಸ್ಮಾರು ನಲ್ಲೂರುಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ವ್ಯಾಪಕ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಗಡಿ ಪ್ರದೇಶಗಳಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಜಿಲ್ಲೆ

ಉಡುಪಿ: ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ 14 ಕಡೆಗಳಲ್ಲಿ ಪೊಲೀಸ್ ಚೆಕ್‌ಪೋಸ್ಟ್ Read More »

ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಹಲ್ಲೆ| ಈ ಗೂಂಡಾಗಿರಿ ಸಹಿಸಲಾಗದು ಎಂದ ಪ್ರಕಾಶ ರಾಜ್

ಸಮಗ್ರ ನ್ಯೂಸ್: ಬೆಂಗಳೂರು ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಯುವಕರು ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿನ ಗೂಂಡಾಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಿ ಅಂತ ನಟ ಪ್ರಕಾಶ್ ರಾಜ್ ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ನಟ ಪ್ರಕಾಶ್ ರಾಜ್ ಎಕ್ಸ್ ಮಾಡಿದ್ದು, ಈ ಗೂಂಡಾಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಯಾವುದೇ ಧರ್ಮದ ಯಾವುದೇ ವ್ಯಕ್ತಿಯಿಂದ ಇಂತಹ ಗೂಂಡಾಗಿರಿ ಕೃತ್ಯಗಳು ನಡೆದರೂ ಅದನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಹೇಳಿದ್ದಾರೆ. ಈ ಮೂಲಕ

ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಹಲ್ಲೆ| ಈ ಗೂಂಡಾಗಿರಿ ಸಹಿಸಲಾಗದು ಎಂದ ಪ್ರಕಾಶ ರಾಜ್ Read More »

ಪೌರತ್ವ ತಿದ್ದುಪಡಿ ಕಾಯ್ದೆ/ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಡೆ ಕೋರುವಂತೆ ಸುಪ್ರೀಂ ಕೋರ್ಟ್ ಗೆ 237 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ತಡೆ ನೀಡಲು ನಿರಾಕರಿಸಿದೆ. ಜೊತೆಗೆ ವಿರೋಧ ಹಾಗೂ ತಡೆ ಕುರಿತು ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಜಸ್ಟೀಸ್ ಜೆಬಿ ಪರಿದ್ವಾಲ್, ಮನೋಜ್ ಮಿಶ್ರಾ ಸೇರಿದ ಪೀಠ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಅವಶ್ಯಕತೆ, ಇದಕ್ಕೆ ಎದುರಾಗಿರುವ ವಿರೋಧಗಳ ಕುರಿತು ಏಪ್ರಿಲ್

ಪೌರತ್ವ ತಿದ್ದುಪಡಿ ಕಾಯ್ದೆ/ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್ Read More »

ತಿಂಗಳಿಗೆ 60,000 ಸಂಬಳ ಕೊಡ್ತಾರೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ನವ ಮಂಗಳೂರು ಬಂದರು ಟ್ರಸ್ಟ್​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ:ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು. ವಯೋಮಿತಿ:ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ

ತಿಂಗಳಿಗೆ 60,000 ಸಂಬಳ ಕೊಡ್ತಾರೆ, ಈಗಲೇ ಅರ್ಜಿ ಸಲ್ಲಿಸಿ Read More »

ಕಾರವಾರದಲ್ಲಿ ಜಾಬ್ ಖಾಲಿ ಇದೆ! ತಿಂಗಳಿಗೆ 1.20 ಲಕ್ಷ ಸಂಬಳ ಕೊಡ್ತಾರೆ

ಸಮಗ್ರ ಉದ್ಯೋಗ: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಾರವಾರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಿದ್ಯಾರ್ಹತೆ: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

ಕಾರವಾರದಲ್ಲಿ ಜಾಬ್ ಖಾಲಿ ಇದೆ! ತಿಂಗಳಿಗೆ 1.20 ಲಕ್ಷ ಸಂಬಳ ಕೊಡ್ತಾರೆ Read More »

ಮಕ್ಕಳಿಗೆ ಬೆಂಕಿ ಹಚ್ಚಿ ತಾನು ಬೆಂಕಿಗೆ ಆಹುತಿಯಾದ ತಾಯಿ

ಸಮಗ್ರ ನ್ಯೂಸ್: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊನೆಗೆ ತಾನೂ ಅಗ್ನಿ ಪ್ರವೇಶ ಮಾಡಿದ್ದ ಭಯಾನಕ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲ ಸಮುದ್ರ ಗ್ರಾಮದಲ್ಲಿ ನಡೆದಿದೆ. ಮಾರಕ್ಕ ಎಂಬ 24 ವರ್ಷದ ಮಹಿಳೆಯೇ ತನ್ನ ಇಬ್ಬರು ಪುಟ್ಟ ಕಂದಮ್ಮಗಳಾದ ನಯನ (4) ಮತ್ತು ಹರ್ಷ ವರ್ಧನ್ (2)ಗೆ ಪೆಟ್ರೋಲ್‌ ಹಾಕಿ ಬೆಂಕಿ ಹಚ್ಚಿ ತಾನೂ ಸಾವನ್ನಪ್ಪಿದವರು. ಮಕ್ಕಳನ್ನು ಮನೆಯಿಂದ ಹೊರಡಿಸಿ ಗ್ರಾಮದ ಹೊರವಲಯಕ್ಕೆ ಹೋಗಿ ಅಲ್ಲಿ ಈ

ಮಕ್ಕಳಿಗೆ ಬೆಂಕಿ ಹಚ್ಚಿ ತಾನು ಬೆಂಕಿಗೆ ಆಹುತಿಯಾದ ತಾಯಿ Read More »

ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಸಾವು| ಶಿಕ್ಷಕರು ಸಸ್ಪೆಂಡ್

ಸಮಗ್ರ ನ್ಯೂಸ್: ಶಾಲೆಯ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ ವಿದ್ಯಾರ್ಥಿನಿಯ ಬಟ್ಟೆಗೆ ಬೆಂಕಿ ತಗುಲಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಮೇಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಮೃತಪಟ್ಟ ಬಾಲಕಿಯಾಗಿದ್ದಾಳೆ. ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದ ವೇಳೆ ಆಕೆ ಶಾಲೆಯ ಪಕ್ಕದಲ್ಲೇ ಇರುವ ದೇವಾಲಯದಲ್ಲಿ ದೀಪ ಹಚ್ಚಲು ಹೋಗಿದ್ದಳು. ತನ್ನ ಜತೆಗೆ ತರಗತಿಯ ಇತರ ಕೆಲವು ಮಕ್ಕಳನ್ನು ಕೂಡಾ ಆಕೆ ಕರೆದುಕೊಂಡು ಹೋಗಿದ್ದಳು.

ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಸಾವು| ಶಿಕ್ಷಕರು ಸಸ್ಪೆಂಡ್ Read More »

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ| ನಗರ್ತಪೇಟೆಯಲ್ಲಿ ಭುಗಿಲೆದ್ದ ಬಿಜೆಪಿ ಆಕ್ರೋಶ

ಸಮಗ್ರ ನ್ಯೂಸ್: ಬೆಂಗಳೂರಿನ ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಇಂದು ನಗರದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದು, ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸಾವಿರಾರು ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಕೂಡ ಭಾಗಿಯಾಗಿದ್ದರು.ಈ ವೇಳೆ ತಳ್ಳಾಟ, ನೂಕಾಟ ನಡೆದಿದ್ದು, ಕಾರ್ಯಕರ್ತರು ಮತ್ತು​ ಪೊಲೀಸರ ನಡುವೆ ವಾಗ್ವಾದ

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ| ನಗರ್ತಪೇಟೆಯಲ್ಲಿ ಭುಗಿಲೆದ್ದ ಬಿಜೆಪಿ ಆಕ್ರೋಶ Read More »