March 2024

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್ : ಕಸಬಾ ಗ್ರಾಮದ ದೇವಸ್ಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಸುಮಾರು ನಾಲ್ಕೈದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದ್ದು, ಮೃತ ದೇಹದ ಮುಖ ಗುರುತು ಹಿಡಿಯಲಾರದಷ್ಟು ಕೊಳೆತು ಹೋಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಹಾಗೂ ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ ತಂಡ ಆಗಮಿಸಿದೆ.

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ Read More »

ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ/ ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಸಂದೇಶ

ಸಮಗ್ರ ನ್ಯೂಸ್: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರಿಗೆ ಈ ಬಾರಿ ಟಿಕೆಟ್ ಕೈತಪ್ಪಿ ಹೋಗಿದ್ದು, ಈ ಬಾರಿ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದಾದ ಬಳಿಕ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ, ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ ಎಂದು ಸಂದೇಶ ರವಾನಿಸಿದ್ದಾರೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ

ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ/ ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಸಂದೇಶ Read More »

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಬಿಜೆಪಿ ಸೇರಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಮತ್ತೊಂದು ಹಿನ್ನಡೆ ಅನುಭವಿಸಿದ್ದು, ಪಂಜಾಬ್‍ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸೇರ್ಪಡೆಗೂ ಮುನ್ನ ಪಟಿಯಾಲಾ ಸಂಸದೆ ಪ್ರಣೀತ್ ಕೌರ್ ಅವರು ಕಾಂಗ್ರೆಸ್‍ನ ಮುಖ್ಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅಂದಿನಿಂದ ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಪಂಜಾಬ್‍ನ ಪಟಿಯಾಲ ಕ್ಷೇತ್ರದಿಂದ ಪ್ರಣೀತ್ ಕೌರ್ ನಾಲ್ಕು ಬಾರಿ ಕಾಂಗ್ರೆಸ್ ಸಂಸದರಾಗಿದ್ದು, ಕಳೆದ 25 ವರ್ಷಗಳಿಂದ ಪಟಿಯಾಲಾ ಲೋಕಸಭಾ

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಬಿಜೆಪಿ ಸೇರಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ Read More »

ಶಿವಮೊಗ್ಗದಲ್ಲಿ ರಾಘವೇಂದ್ರ ವಿರುದ್ಧ ಸ್ಪರ್ಧೆ/ ಬಿಜೆಪಿಗೆ ತಿರುಗಿ ಬಿದ್ರಾ ಈಶ್ವರಪ್ಪ?

ಸಮಗ್ರ ನ್ಯೂಸ್; ತಮ್ಮ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಸಿಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಇದೀಗ ತನ್ನ ಪುತ್ರನಿಗೆ ಟಿಕೆಟ್ ನೀಡದ ಕಾರಣಕ್ಕಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರ ವಿರುದ್ಧವೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ನಾನು ಲೋಕಸಭಾ ಚುನಾವಣೆಗೆ ಹಾವೇರಿಯಿಂದ ನನ್ನ ಮಗ ಕೆ.ಇ ಕಾಂತೇಶ್ ಗೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ ಕೋರಿದ್ದೆ. ಆದ್ರೆ ಅವನಿಗೂ

ಶಿವಮೊಗ್ಗದಲ್ಲಿ ರಾಘವೇಂದ್ರ ವಿರುದ್ಧ ಸ್ಪರ್ಧೆ/ ಬಿಜೆಪಿಗೆ ತಿರುಗಿ ಬಿದ್ರಾ ಈಶ್ವರಪ್ಪ? Read More »

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಕೂದಲೆಳೆಯ ಅಂತರದಲ್ಲಿ ಸವಾರ ಪಾರು

ಸಮಗ್ರ ನ್ಯೂಸ್: ನಗರದ ಕರಿಯಕಲ್ಲು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-169 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಕೂದಲೆಳೆಯ ಅಂತರದಲ್ಲಿ ಜೀವಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬಜಗೋಳಿ ಕಡೆಯಿಂದ ಕಾರೊಂದು ಅತೀ ವೇಗವಾಗಿ ಕಾರ್ಕಳ ಕಡೆಗೆ ಬರುತ್ತಿದ್ದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಘಟನೆಯ ತೀವ್ರತೆಗೆ ಸವಾರನು ಕಾರಿನ ಗಾಜಿನ ಮೇಲೆ ಹಾರಿಬಿದ್ದು ತಲೆಗೆ ಗಾಯವಾಗಿದೆ. ನಿಯಂತ್ರಣ ತಪ್ಪಿದ ಕಾರಿನ ಚಕ್ರ ರಸ್ತೆ ನಿರ್ಮಾಣಕ್ಕೆ ಹಾಕಲಾಗಿದ್ದ ಮಣ್ಣಿನ ಹೂತು ಹೋಗಿರುವುದಿಂದ

ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಕೂದಲೆಳೆಯ ಅಂತರದಲ್ಲಿ ಸವಾರ ಪಾರು Read More »

ಕನ್ನಡದಲ್ಲಿಯೇ ಪ್ರಮಾಣ ವಚನ ಮಾಡಿದ ಸುಧಾಮೂರ್ತಿ

ಸಮಗ್ರ ನ್ಯೂಸ್: ರಾಜ್ಯಸಭಾ ಸದಸ್ಯೆಯಾಗಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ, ಸಮಾಜ ಸೇವಕಿ ಸುಧಾ ಮೂರ್ತಿ ಅವರು ಇಂದು ಕನ್ನಡದಲ್ಲಿಯೇ ಪ್ರಮಾಣ ವಚನ ಮಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸುಧಾಮೂರ್ತಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಮಾಡಿದ್ದಾರೆ. ಈ ವೇಳೆ ಸುಧಾಮೂರ್ತಿ ಪತಿ ನಾರಾಯಣ ಮೂರ್ತಿ, ನಂದನ್ ನೀಲಕೇಣಿ ಹಾಗೂ ಕೇಂದ್ರ ಸಚಿವ ಪಿಯುಷ್ ಗೋಯಲ್ ಹಾಜರಿದ್ದರು.

ಕನ್ನಡದಲ್ಲಿಯೇ ಪ್ರಮಾಣ ವಚನ ಮಾಡಿದ ಸುಧಾಮೂರ್ತಿ Read More »

ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ

ಸಮಗ್ರ ನ್ಯೂಸ್: 23 ಕೋಟಿ ವೆಚ್ಚದಲ್ಲಿ ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೆಂಗಲ್ ಹನುಮಂತಯ್ಯ ಪ್ರತಿಯ ರಸ್ತೆಯ ಪಕ್ಕದಲ್ಲಿ ಸ್ಥಾಪನೆ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು. ಬೆಂಗಳೂರಿನ ಪೂರ್ವಭಾಗದ ವಿಶಾಲವಾದ ಪ್ರದೇಶದಲ್ಲಿ ಟೀ ಪಾರ್ಕ್ ಮಾಡಲಾಗುತ್ತದೆ. ಅದರಲ್ಲಿ ಆಟದ ಮೈದಾನ, ಸೈಕಲ್ ಟ್ರ್ಯಾಕ್ ನಿರ್ಮಿಸಲಾಗುತ್ತದೆ. ಇದಕ್ಕೆ 11 ಕೋಟಿ ವೆಚ್ಚ ತಗುಲಲಿದ್ದು, ಇದಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ ಎಂದರು ರೈತರ ಉತ್ಪಾದನೆ, ಲಾಭಾಂಶ ಜಾಸ್ತಿ ಆಗಬೇಕು. ಬೆಳೆ

ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ Read More »

ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ನೂತನ ಚುನಾವಣಾ ಆಯುಕ್ತರಾಗಿ ನೇಮಕ

ಸಮಗ್ರ ನ್ಯೂಸ್: ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. 212 ಅಧಿಕಾರಿಗಳ ಹೆಸರನ್ನು ಈ ಸಮಿತಿ ತಿಳಿಸಿತ್ತು. ಅದರಲ್ಲಿ ಇಬ್ಬರನ್ನು ಆಯ್ಕೆ ಮಾಡಲಾಗಿದೆ, ಒಬ್ಬರು ಕೇರಳದ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್, ಇನ್ನೊಬ್ಬರು ಪಂಜಾಬ್​​ ಸುಖಬೀರ್ ಸಿಂಗ್ ಸಂಧು ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ನೂತನ ಚುನಾವಣಾ ಆಯುಕ್ತರಾಗಿ ನೇಮಕ Read More »

ಕಾಫಿನಾಡಿಗೆ ವರುಣನ ಆಗಮನ| ರೈತರಿಗೆ ಸಂತಸ

ಸಮಗ್ರ ನ್ಯೂಸ್: ಬಿರು ಬೇಸಿಗೆಯಲ್ಲು ಕಾಫಿನಾಡಿಗೆ ವರುಣನ ಆಗಮನವಾಗಿದೆ. ಚಿಕ್ಕಮಗಳೂರಿಗೆ ವರುಣದೇವ ತಂಪೆರೆದಿದ್ದಾನೆ. ಈ ಮೂಲಕ ವರ್ಷದ ಮೊದಲ ಮಳೆ ಆರಂಭವಾಗಿದೆ. ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದಲ್ಲಿ ಭಾರೀ ಮಳೆ ಬಿದ್ದಿದ್ದು, ಸತತ ಒಂದು ಗಂಟೆಗಳ ಕಾಲ ಭಾರಿ ಪ್ರಮಾಣದ ಮಳೆ ಸುರಿದಿದೆ. ಕೊಳಗಾಮೆ, ಮೇಲಿನಹುಲುವತ್ತಿ ಭಾಗಗಳಲ್ಲಿ ಜೋರಾಗಿ ಮಳೆ ಸುರಿದಿದೆ. ಗ್ರಾಮಸ್ಥರು, ಬೆಳೆಗಾರರು ಸಂತಸಕ್ಕೀಡಾಗಿದ್ದಾರೆ. ಹಲವು ಹಳ್ಳಿಗಳಲ್ಲಿ 20-30-40 ಸೆನ್ಸ್​ನಷ್ಟು ಮಳೆಯಾಗಿದೆ. ಅಡಿಕೆ-ಕಾಫಿ-ಮೆಣಸು ಉಳಿಸಿಕೊಳ್ಳಲು ಪರದಾಡ್ತಿದ್ದ ಬೆಳೆಗಾರರಿಗೆ ಮಳೆ ನೋಡುತ್ತಿದ್ದಂತೆ ಸಂತಸವಾಗಿದೆ.

ಕಾಫಿನಾಡಿಗೆ ವರುಣನ ಆಗಮನ| ರೈತರಿಗೆ ಸಂತಸ Read More »

ಅಸಭ್ಯ ಮತ್ತು ಅಶ್ಲೀಲ ಮಾಹಿತಿಗಳಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಅಶ್ಲೀಲ ಮತ್ತು ಅಸಭ್ಯ” ವಿಷಯವನ್ನು ಪ್ರದರ್ಶಿಸುತ್ತಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧ ಮಾಡಿದೆ. ವಿವಿಧ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳ ಸಮನ್ವಯದೊಂದಿಗೆ ಸಚಿವಾಲಯವು 19 ವೆಬ್‌ಸೈಟ್‌ಗಳು, ಗೂಗಲ್ ಪ್ಲೇ ಸ್ಟೋರ್‌ನಲ್ಲಿ (Google Play Store) ಏಳು ಮತ್ತು ಆಪಲ್ ಆಪ್ ಸ್ಟೋರ್‌ನಲ್ಲಿ ಮೂರು ಸೇರಿದಂತೆ 10 ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ಭಾರತದಲ್ಲಿ ಸಾರ್ವಜನಿಕ ಪ್ರವೇಶಕ್ಕಾಗಿ ನಿರ್ಬಂಧಿಸಲಾದ ಪ್ಲಾಟ್‌ಫಾರ್ಮ್‌ಗಳಿಗೆ ಸಂಬಂಧಿಸಿದ 57 ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷ್ಕ್ರಿಯಗೊಳಿಸಿದೆ. ಡ್ರೀಮ್ಸ್ ಫಿಲ್ಮ್ಸ್ (Dreams

ಅಸಭ್ಯ ಮತ್ತು ಅಶ್ಲೀಲ ಮಾಹಿತಿಗಳಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ Read More »