March 2024

ಅನ್ಸಾರಿ ಸಾವಿನಿಂದ ನನಗೆ ನ್ಯಾಯ ಸಿಕ್ಕಿದೆ ಎಂದ ಹತ್ಯೆಗೀಡಾದ ಬಿಜೆಪಿ ನಾಯಕನ ಪತ್ನಿ

ಸಮಗ್ರ ನ್ಯೂಸ್‌ : ಗ್ಯಾಂಗ್‍ಸ್ಟರ್, ರಾಜಕಾರಣಿ ಮುಖ್ತರ್ ಅನ್ಸಾರಿ ಸಾವಿನಿಂದ ನನಗೆ ನ್ಯಾಯ ಸಿಕ್ಕಿದೆ ಎಂದು ಆತನಿಂದ ಹತ್ಯೆಗೀಡಾದ ಬಿಜೆಪಿ ಶಾಸಕ ಕೃಷ್ಣಾನಂದ್ ರೈ ಅವರ ಪತ್ನಿ ಅಲ್ಕಾ ರೈ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ವಾರಣಾಸಿಯಲ್ಲಿ ಮಾತನಾಡಿದ ಅವರು, ನಾನು ನ್ಯಾಯಕ್ಕಾಗಿ ದೇವರನ್ನು ಪ್ರಾರ್ಥಿಸಿದ್ದೆ, ಅದನ್ನು ದೇವರು ಈಡೇರಿಸಿದ್ದಾರೆ. ಪತಿಯ ಹತ್ಯೆಯ ನಂತರ ನಾವು ಹೋಳಿಯನ್ನು ಆಚರಿಸಿರಲಿಲ್ಲ.. ನ್ಯಾಯ ಸಿಕ್ಕ ಈ ದಿನವನ್ನು ಹೋಳಿ ಎಂದು ನಾನು ಭಾವಿಸುತ್ತೇನೆ. ಆತನ ಸಾವಿನಿಂದ, ಅನಾಥರಾದ ಮಕ್ಕಳಿಗೆ ಸಂತೋಷವಾಗಿದೆ ಎಂದರು. ಮೃತ […]

ಅನ್ಸಾರಿ ಸಾವಿನಿಂದ ನನಗೆ ನ್ಯಾಯ ಸಿಕ್ಕಿದೆ ಎಂದ ಹತ್ಯೆಗೀಡಾದ ಬಿಜೆಪಿ ನಾಯಕನ ಪತ್ನಿ Read More »

ನಾಮಪತ್ರ ಸಲ್ಲಿಕೆ ಆರಂಭ/ ಮೊದಲ ದಿನವೇ 29 ನಾಮಪತ್ರಗಳು ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಪ್ರಕ್ರಿಯೆ ರಾಜ್ಯದಲ್ಲಿ ಶುರುವಾಗಿದ್ದು, ಅಧಿಸೂಚನೆ ಪ್ರಕಟಗೊಂಡ ಬಳಿಕ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮೊದಲನೇ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆಯಾಗಿವೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. 23 ಪುರುಷರು, ಇಬ್ಬರು ಮಹಿಳೆಯರು ಸೇರಿ 25 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಾಂಗ್ರೆಸ್ 2, ಬಿಜೆಪಿ 1, ಜೆಡಿಎಸ್ ಮತ್ತು ಬಿಎಸ್‍ಪಿ ತಲಾ 1, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳ 16,

ನಾಮಪತ್ರ ಸಲ್ಲಿಕೆ ಆರಂಭ/ ಮೊದಲ ದಿನವೇ 29 ನಾಮಪತ್ರಗಳು ಸಲ್ಲಿಕೆ Read More »

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಅನುದಾನ ಹೆಚ್ಚಳ/ ಕೇಂದ್ರದ ಆದೇಶ

ಸಮಗ್ರ ನ್ಯೂಸ್: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಗಳಿಗೆ ನೀಡುವ ದೈನಂದಿನ ಕೂಲಿ ಅನುದಾನವನ್ನು 4 ರಿಂದ 10 ಪ್ರತಿಶತದಷ್ಟು ಹೆಚ್ಚಿಸಿದೆ. ಕರ್ನಾಟಕಕ್ಕೆ ಶೇ.10ರಷ್ಟು ನೆರವನ್ನು ಹೆಚ್ಚಿಸಲಾಗಿದ್ದು, ಈ ಹಿಂದೆ ಇದ್ದ 316 ರೂ. ಈಗ 349 ರೂಪಾಯಿಗೆ ಏರಿಕೆಯಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ವಿವಿಧ ತೆರಿಗೆ ದರಗಳನ್ನು ನಿಗದಿಪಡಿಸಿದೆ. ಹರಿಯಾಣದಲ್ಲಿ ಗರಿಷ್ಠ 374 ನಿಗದಿಯಾಗಿದೆ. ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‍ಗಳು ಅತಿ

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಅನುದಾನ ಹೆಚ್ಚಳ/ ಕೇಂದ್ರದ ಆದೇಶ Read More »

ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಆಗಬೇಕು: ಡಿಸಿ ಡಾ. ಕೆ. ವಿದ್ಯಾಕುಮಾರಿ

ಸಮಗ್ರ ನ್ಯೂಸ್‌: ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡಿಯಬೇಕು ಮತ್ತು ಎಲ್ಲರೂ ಭಾಗವಹಿಸುವಂತಾಗಬೇಕು. ಜನರು ಊರ ಹಬ್ಬವನ್ನು ಉತ್ಸಾಹದಿಂದ ಆಚರಿಸುವಂತೆ ಮತದಾನವೂ ಆಗಬೇಕು ಎಂಬುದು ನಮ್ಮ ಉದ್ದೇಶ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು. ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ಬೈಂದೂರು ತಾಲೂಕಿನ ಶಿರೂರು ಅಳ್ವೆಗದ್ದೆ ಮೀನುಗಾರಿಕಾ ಲಂಗರು ಪ್ರದೇಶದಲ್ಲಿ ಇಂದು ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿಗೆ ಯುವಜನತೆ ಚುನಾವಣೆಯಿಂದ ವಿಮುಖರಾಗುತ್ತಿರುವುದು ಕಂಡುಬರುತ್ತಿದೆ. ಚುನಾವಣಾ ದಿನವೆಂದರೆ

ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಆಗಬೇಕು: ಡಿಸಿ ಡಾ. ಕೆ. ವಿದ್ಯಾಕುಮಾರಿ Read More »

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ/ ನಾಳೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2023-24ನೇ ಸಾಲಿನ ಮಾರ್ಚ್ 30 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಮಾರ್ಚ್ 30 ರಂದು ಬೆಳಗ್ಗೆ 11:00 ಗಂಟೆಗೆ karresults.nic.in ನಲ್ಲಿ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ವಿಶ್ವವಿದ್ಯಾಲಯದಲ್ಲಿಯೇ ನಾಳೆ ನೋಡಬಹುದು. ಫೆಬ್ರವರಿ 12 ರಿಂದ 27 ರವರೆಗೆ ಪ್ರಥಮ ಪಿಯುಸಿ ಪರೀಕ್ಷೆ ನಡೆದಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದ್ದು, ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲಾಗುವುದು. ಪೂರಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಈಗಾಗಲೇ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ/ ನಾಳೆ ಫಲಿತಾಂಶ ಪ್ರಕಟ Read More »

ಹೆಗ್ಗವಾಡಿ ಗ್ರಾಮಕ್ಕೆ ಶಾಸಕ ದರ್ಶನ್ ಧ್ರುವ ನಾರಾಯಣ್ ಭೇಟಿ

ಸಮಗ್ರ ನ್ಯೂಸ್‌ : ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಹೆಗ್ಗವಾಡಿ ಗ್ರಾಮಕ್ಕೆ ಭೇಟಿ ನೀಡಿ, ಅವರ ತಂದೆ ತಾಯಿ ಸ್ಮಾರಕಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಶಾಸಕ ದರ್ಶನ್ ಧ್ರುವ ನಾರಾಯಣ್ ರವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ತೆರಳಿ, ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾಗಿದ್ದ ದಿವಂಗತ ಆರ್ ಧ್ರುವನಾರಾಯಣ್, ತಾಯಿ ವೀಣಾ ಧ್ರುವನಾರಾಯಣ್ ರವರ ಸ್ಮಾರಕದಲ್ಲಿ ಪೂಜೆ ಸಲ್ಲಿಸಿದರು. ತಂದೆ ತಾಯಿಯನ್ನು ನೆನೆದು ಹುಟ್ಟು ಹಬ್ಬದ ದಿನವೇ ಶಾಸಕರು ಭಾವುಕರಾಗಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್

ಹೆಗ್ಗವಾಡಿ ಗ್ರಾಮಕ್ಕೆ ಶಾಸಕ ದರ್ಶನ್ ಧ್ರುವ ನಾರಾಯಣ್ ಭೇಟಿ Read More »

ಮಾತನಾಡುವ ಶಕ್ತಿ ಇಲ್ಲ, ಅಡುಗೆ ಮಾಡುದಕ್ಕೆ ಸರಿ: ಶಾಮನೂರು

ಸಮಗ್ರ ನ್ಯೂಸ್ :ಮಾತನಾಡಲು ಬಾರದ ಇವರು ಅಡುಗೆ ಮಾಡುದಕ್ಕೆ ಸರಿ. ಅವರಿಗೆ ಮಾತನಾಡುವ ಶಕ್ತಿ ಇಲ್ಲ ಎಂದು ಸಂಸದ ಸಿದ್ದೇಶ್ವರ್ ಪತ್ನಿ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಮಾತನಾಡಿದರು. ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಟೀಕಿಸುವ ಭರದಲ್ಲಿ ಶಾಮನೂರು ಈ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಬಿಜೆಪಿ ಅಭ್ಯರ್ಥಿ ದಾವಣಗೆರೆಯಿಂದ ಗೆದ್ದು ಮೋದಿಗೆ ಕಮಲದ ಹೂ ಅರ್ಪಿಸುತ್ತೇನೆ ಅಂತಾರೆ.

ಮಾತನಾಡುವ ಶಕ್ತಿ ಇಲ್ಲ, ಅಡುಗೆ ಮಾಡುದಕ್ಕೆ ಸರಿ: ಶಾಮನೂರು Read More »

ಕಾಂಗ್ರೆಸ್‌ಗೆ ಐಟಿ ಇಲಾಖೆಯಿಂದ ೧೭೦೦ ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯಿಂದ ಡಿಮ್ಯಾಂಡ್‌ ನೋಟಿಸ್‌ ಬಂದಿದ್ದು, ಚುನಾವಣೆ ಹೊತ್ತಲ್ಲಿ ದಂಡ, ಬಡ್ಡಿ ಸೇರಿದಂತೆ 1,700 ರೂಪಾಯಿ ಕಟ್ಟುವ ಅನಿವಾರ್ಯತೆ ಕಾಂಗ್ರೆಸ್‌ ಮುಂದಿದೆ. ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಅದಾದ ಒಂದು ದಿನದ ನಂತರ ಆದಾಯ ತೆರಿಗೆ ಇಲಾಖೆಯಿಂದ 1,700 ಕೋಟಿ ರೂ. ಮೊತ್ತದ ಡಿಮ್ಯಾಂಡ್‌ ನೋಟಿಸ್‌ನ್ನು ಕಾಂಗ್ರೆಸ್ ಸ್ವೀಕರಿಸಿದೆ. ಹೊಸ ಸೂಚನೆಯು 2017-18 ರಿಂದ 2020-21 ರವರೆಗಿನ ದಂಡ ಮತ್ತು ಬಡ್ಡಿಯನ್ನು ಒಳಗೊಂಡಿರುತ್ತದೆ. ಆದಾಯ

ಕಾಂಗ್ರೆಸ್‌ಗೆ ಐಟಿ ಇಲಾಖೆಯಿಂದ ೧೭೦೦ ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ Read More »

ರಾಷ್ಟದ ಸುಭದ್ರತೆ ದೃಷ್ಟಿಯಿಂದ ಬಿಜೆಪಿಗೆ ಮತಯಾಚಿಸಿ;ಸಿ.ಟಿ.ರವಿ

ಸಮಗ್ರ ನ್ಯೂಸ್‌: ರಾಷ್ಟ್ರದ ಸುಭದ್ರತೆಯ ದೃಷ್ಟಿ ಹಾಗೂ ಭ್ರಷ್ಟಮುಕ್ತ ಆಡಳಿತ ನೀಡಲು ನರೇಂದ್ರ ಮೋದಿಯಿಂದ ಮಾತ್ರ ಸಾಧ್ಯ. ಹೀಗಾಗಿ ಪ್ರತಿ ಬೂತ್‌ಗಳಲ್ಲಿ ಕಾರ್ಯಕರ್ತರು ಮತಗಳಿಕೆಗೆ ಹೆಚ್ಚು ಒತ್ತು ನೀಡಿ ಮತ್ತೊಮ್ಮೆ ಮೋದಿಯನ್ನು ಪ್ರಧಾನಿಯಾಗಿಸಲು ಸನ್ನದ್ದರಾಗಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಚಿಕ್ಕಮಗಳೂರು ನಗರ ಮಂಡಲದ ಪ್ರಥಮ ಕಾರ್ಯಕಾರಿಣಿ ಸಭೆ ಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ನಗರ ವ್ಯಾಪ್ತಿಯ ಪ್ರತಿ ವಾರ್ಡ್‌ಗಳಲ್ಲಿ ಕಾರ್ಯಕರ್ತರು ನಾಯಕತ್ವ ವಹಿಸಿಕೊಂಡು ಮತದಾರರ ಮನ ವರಿಕೆ

ರಾಷ್ಟದ ಸುಭದ್ರತೆ ದೃಷ್ಟಿಯಿಂದ ಬಿಜೆಪಿಗೆ ಮತಯಾಚಿಸಿ;ಸಿ.ಟಿ.ರವಿ Read More »

ನನ್ನ ಹುಟ್ಟುಹಬ್ಬಕ್ಕೆ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿ|ಶಾಸಕ ದರ್ಶನ್ ಧ್ರುವನಾರಾಯಣ ಕರೆ

ಸಮಗ್ರ ನ್ಯೂಸ್‌ : ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವ ನರೇಂದ್ರ ಅವರ ಇಂದು ಹುಟ್ಟುಹಬ್ಬ ಇರುವುದರಿಂದ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನನ್ನ ಜನ್ಮದಿನದಂದು ಯಾರು ಫ್ಲೆಕ್ಸ್ , ಬ್ಯಾನರ್ ಹಾಕಬೇಡಿ ಶಾಲು ಮಾಲೆ ಹೂವುಚ್ಚ ಕೇಕ್ ಗಳನ್ನು ತರಬಾರದು ಎಂದು ಮನವಿ ಮಾಡಿದ್ದಾರೆ. ಹಾಗೆ ಯಾವುದೇ ವೆಚ್ಚ ಮಾಡದೆ ಅದೇ ಹಣವನ್ನು ಬಡವರು ಮತ್ತು

ನನ್ನ ಹುಟ್ಟುಹಬ್ಬಕ್ಕೆ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿ|ಶಾಸಕ ದರ್ಶನ್ ಧ್ರುವನಾರಾಯಣ ಕರೆ Read More »