March 2024

BEL ಕಂಪನಿಯಲ್ಲಿ 517 ಟ್ರೈನಿ ಎಂಜಿನಿಯರ್​ ಹುದ್ದೆಗಳು ಖಾಲಿ, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: Bharat Electronics Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 517 ಟ್ರೈನಿ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಸೆಂಟ್ರಲ್- 68ಈಸ್ಟ್- 86ವೆಸ್ಟ್- […]

BEL ಕಂಪನಿಯಲ್ಲಿ 517 ಟ್ರೈನಿ ಎಂಜಿನಿಯರ್​ ಹುದ್ದೆಗಳು ಖಾಲಿ, ಬೇಗ ಅರ್ಜಿ ಸಲ್ಲಿಸಿ Read More »

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಎಲೆಕ್ಟ್ರಾನಿಕ್ಸ್ ಮತ್ತು ರಾಡಾರ್ ಡೆವಲಪ್‌ಮೆಂಟ್ ಸ್ಥಾಪನೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 118 ಅಪ್ರೆಂಟಿಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್​ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇಂದಿನಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ Read More »

ಬೆಂಗಳೂರಿನ BEL ಕಂಪನಿಯಲ್ಲಿ ಉದ್ಯೋಗಕ್ಕೆ ಆಹ್ವಾನ! ತಿಂಗಳಿಗೆ 40,000 ಸಂಬಳ

ಸಮಗ್ರ ಉದ್ಯೋಗ: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 47 ಟ್ರೈನಿ ಎಂಜಿನಿಯರ್-I ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 7, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೊಚ್ಚಿ & ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಬೆಂಗಳೂರಿನ BEL ಕಂಪನಿಯಲ್ಲಿ ಉದ್ಯೋಗಕ್ಕೆ ಆಹ್ವಾನ! ತಿಂಗಳಿಗೆ 40,000 ಸಂಬಳ Read More »

ಬೀಫ್ ರಪ್ತಿನಲ್ಲಿ‌ 2ನೇ ಸ್ಥಾನಕ್ಕೇರಿದ ಭಾರತ

ಸಮಗ್ರ ವಾರ್ತೆ: 2023ರಲ್ಲಿ ಬೀಫ್ ರಫ್ತುದಾರರ ಪೈಕಿ ಭಾರತ ಮತ್ತೊಂದು ಪ್ರಮುಖ ರಫ್ತು ದೇಶವಾಗಿ ಹೊರ ಹೊಮ್ಮಿದ್ದು, ಕೋಣದ ಮಾಂಸವನ್ನು ರಫ್ತು ಮಾಡುತ್ತಿದೆ. ಭಾರತದ ನಂತರದ ಸ್ಥಾನದಲ್ಲಿ ಅಮೆರಿಕಾ ಮತ್ತು ಆಸ್ಟ್ರೇಲಿಯಾ ದೇಶಗಳಿವೆ. ಮೊದಲನೇ ಸ್ಥಾನವನ್ನು ಬ್ರೆಝಿಲ್ ಪಡೆದಿದೆ. ಅತೀ ಹೆಚ್ಚು ಬೀಫ್ ಉತ್ಪಾದನೆಯಲ್ಲಿ ಅಮೆರಿಕಾ ಅಗ್ರ ಕ್ರಮಾಂಕದಲ್ಲಿದ್ದು, ಅದು ಉತ್ಪಾದಿಸುವ ಬಹುತೇಕ ಬೀಫ್ ಅನ್ನು ದೇಶೀಯ ಬಳಕೆಗೇ ಮಾರಾಟ ಮಾಡುತ್ತದೆ ಎಂದು thewire ವರದಿ ಮಾಡಿದೆ. 2023ರ ಎಪ್ರಿಲ್ ವರೆಗೆ ಭಾರತವು 14.75 ಲಕ್ಷ ಟನ್

ಬೀಫ್ ರಪ್ತಿನಲ್ಲಿ‌ 2ನೇ ಸ್ಥಾನಕ್ಕೇರಿದ ಭಾರತ Read More »

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ/ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ಸಂಸ್ಥೆ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನ ಚುರುಕು ಮಾಡಿದೆ. ಬಾಂಬರ್‍ನ ಪೋಟೋವನ್ನು ಹಂಚಿಕೊಂಡಿರುವ ಎನ್‍ಐಎ, ಬಾಂಬರ್‍ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ. ಜೊತೆಗೆ ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಳಸಿ ಬಾಂಬ್ ಸ್ಫೋಟ ನಡೆಸಿದ ಶಂಕಿತನ ವಿಡಿಯೋಗಳು ಈಗಾಗಲೇ ವೈರಲ್ ಆಗಿದೆ. ಈ ವ್ಯಕ್ತಿಯ ಮಾಹಿತಿ ನೀಡಿ, ಆತನ ಬಂಧನಕ್ಕೆ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ/ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ Read More »

ಸಾರ್ವಜನಿಕ ಸ್ಥಳಗಳಲ್ಲಿರುವ ಪೋಸ್ಟರ್, ಬ್ಯಾನರ್ ತೆರವು/ ರಾಜ್ಯ ಚುನಾವಣಾ ಆಯೋಗ ಮಹತ್ವದ ಸುತ್ತೋಲೆ

ಸಮಗ್ರ ನ್ಯೂಸ್: ರಾಜ್ಯ ಚುನಾವಣಾ ಆಯೋಗವು, ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾದ ಪೋಸ್ಟರ್, ಬ್ಯಾನರ್ ತೆರವುಗೊಳಿಸುವಂತೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಇರುವಂತಹ ಅನಧಿಕೃತ ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) ರ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ

ಸಾರ್ವಜನಿಕ ಸ್ಥಳಗಳಲ್ಲಿರುವ ಪೋಸ್ಟರ್, ಬ್ಯಾನರ್ ತೆರವು/ ರಾಜ್ಯ ಚುನಾವಣಾ ಆಯೋಗ ಮಹತ್ವದ ಸುತ್ತೋಲೆ Read More »

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ವಾರ್ಷಿಕ ದಾಖಲಾತಿ ಆರಂಭ|ಮಾರ್ಚ್ 15 ರೊಳಗಿನ ದಾಖಲಾತಿಗೆ 10% ಆಫರ್

ಸಮಗ್ರ ನ್ಯೂಸ್: ಸುಳ್ಯದ ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ 2024-25 ರ ಪ್ಲೇ.ಗ್ರೂಪ್, ಪ್ರಿ.ಕೆ.ಜಿ, ಯು.ಕೆ.ಜಿ, ಎಲ್.ಕೆ.ಜಿ ಮಕ್ಕಳ ವಾರ್ಷಿಕ ದಾಖಲಾತಿ ಆರಂಭಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಮಾರ್ಚ್ 15 ರೊಳಗಿನ ದಾಖಲಾತಿಗೆ1 0% ಆಫರ್ ನೀಡಲಾಗಿದೆ. ಈ ಸ್ಕೂಲ್ ನಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಮತ್ತು ಸ್ಪೋಕನ್ ಇಂಗ್ಲೀಷ್ ತರಗತಿ ಕೊಡಲಾಗುತ್ತದೆ. ಈ ದಾಖಲಾತಿಗೆ ಸೀಮಿತ ಸಂಖ್ಯೆಯ ಆವಕಾಶವಿದ್ದು ಆಸಕ್ತರು ಕೂಡಲೇ ಕೆ ವಿ ಜಿ ಆಯುರ್ವೇದಿಕ್ ಕಾಲೇಜ್ ಮುಂಭಾಗದಲ್ಲಿ ಇರುವ

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ವಾರ್ಷಿಕ ದಾಖಲಾತಿ ಆರಂಭ|ಮಾರ್ಚ್ 15 ರೊಳಗಿನ ದಾಖಲಾತಿಗೆ 10% ಆಫರ್ Read More »

ವಾರ್ಷಿಕೋತ್ಸವದ ದಿನ ಗಿಫ್ಟ್ ನೀಡಿಲ್ಲ ಎಂದು ಪತಿಗೆ ಚೂರಿ ಇರಿದ ಪತ್ನಿ

ಸಮಗ್ರ ನ್ಯೂಸ್: ವಾರ್ಷಿಕೋತ್ಸವದ ದಿನ ತನಗೆ ಗಿಫ್ಟ್ ನೀಡಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಪತ್ನಿ ಮಲಗಿದ್ದ ಪತಿಯನ್ನು ಚಾಕುವಿನಿಂದ ಇರಿದ ಘಟನೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕೆಲಸದ ಒತ್ತಡದಲ್ಲಿದ್ದ ಗಂಡ ಇದನ್ನೆಲ್ಲ ಮರೆತಿದ್ದು ಮನೆಗೆ ಬಂದ ತಕ್ಷಣ ಹೋಗಿ ಮಲಗಿದ್ದಾನೆ. ಇದರಿಂದ ಕೋಪಗೊಂಡ ಹೆಂಡತಿ ಗಂಡನ ಮೇಲೆ ಚಾಕು ಇರಿದಿದ್ದಾಳೆ. ಎಫ್ಐಆರ್ ಪ್ರಕಾರ ಫೆ. 27ರಂದು ಬೆಂಗಳೂರಿನ ಪಾರ್ಥ ಪ್ರತಿಮ್ (37) ಅವರನ್ನು ಪತ್ನಿ ರಿಯಾ ಘೋಷ್ (35) ಎಂಬಾಕೆ ಚಾಕುವಿನಿಂದ ಇರಿದಿರುವ ಕುರಿತು ವರದಿಯಾಗಿದೆ.

ವಾರ್ಷಿಕೋತ್ಸವದ ದಿನ ಗಿಫ್ಟ್ ನೀಡಿಲ್ಲ ಎಂದು ಪತಿಗೆ ಚೂರಿ ಇರಿದ ಪತ್ನಿ Read More »

ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಸ್ಕ್ಯಾಮ್| ವೈದ್ಯರಿಂದ ಬರೋಬ್ಬರಿ 74 ಭ್ರೂಣಹತ್ಯೆ

ಸಮಗ್ರ ನ್ಯೂಸ್: ಇತ್ತೀಚೆಗೆ ಮಂಡ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಕೇಳಿ ಬಂದಿತ್ತು. ಆದರೆ ಇದೀಗ ಮತ್ತೆ ಇದೆ ಕೇಸ್ ಕೇಳಿಬಂದಿದೆ. ಭ್ರೂಣ ಹತ್ಯೆ ತಡೆಗೆ ನಿಷೇಧವಿದ್ದರು ಈಗ ನೆಲಮಂಗಲ ನಗರದ ಆಸರೆ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿರುವ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತಿದ್ದು ವೈದ್ಯರು ಬರೋಬ್ಬರಿ 74 ಭ್ರೂಣಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಡಾಕ್ಟರ್ ರವಿಕುಮಾರ್‌ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ ಎಂಬ ಆರೋಪ

ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಸ್ಕ್ಯಾಮ್| ವೈದ್ಯರಿಂದ ಬರೋಬ್ಬರಿ 74 ಭ್ರೂಣಹತ್ಯೆ Read More »

ಲೋಕಸಭಾ ಚುನಾವಣೆ/ ಪುಲ್ ಆ್ಯಕ್ಟಿವ್ ಆದ ಸುಮಲತಾ

ಸಮಗ್ರ ನ್ಯೂಸ್: ಲೋಕಸಭೆಯ ಚುನಾವಣೆ ಟಿಕೆಟ್ ಘೋಷಣೆಗೂ ಮುನ್ನವೇ ರೆಬೆಲ್ ಸ್ಟಾರ್ ಪತ್ನಿ ಸುಮಲತಾ ಅಂಬರೀಷ್ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಟಿಕೆಟ್ ಗೊಂದಲದ ನಡುವೆಯೂ ಸಂಸದೆ ಸುಮಲತಾ ಅಂಬರೀಷ್ ಕಣಕ್ಕಿಳಿದಿದ್ದಾರೆ. ಸುಮಲತಾ ಅಂಬರೀಶ್ ಕಳೆದ 20 ದಿನಗಳಲ್ಲಿ ಮಂಡ್ಯಕ್ಕೆ ಆರು ಬಾರಿ ಪ್ರವಾಸ ಕೈಗೊಂಡಿದ್ದು, ಇಂದು ಮತ್ತೆ ಮಂಡ್ಯ ಪ್ರವಾಸ ಮಾಡಲಿದ್ದಾರೆ ಎಂಬ ಮಾಹಿತಿ ಇದೆ. ಮೊನ್ನೆಯಷ್ಟೇ ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದಿದ್ದ ಅವರು ಇಂದು ಮಂಡ್ಯ, ಪಾಂಡವಪುರ, ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡಲಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ/ ಪುಲ್ ಆ್ಯಕ್ಟಿವ್ ಆದ ಸುಮಲತಾ Read More »