March 2024

ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿ 13 ವರ್ಷಗಳ ನಂತರ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿ ಶರಣಪ್ಪ ಮೊಗಲಪ್ಪ ಎಂಬಾತನನ್ನು ಸೇಡಂ ತಾಲೂಕಿನ ಮುಧೋಳ(Mudhol) ಠಾಣೆಯ ಪೊಲೀಸರು 13 ವರ್ಷಗಳ ಬಳಿಕ ಬಂಧಿಸಿದ್ದಾರೆ. ಸೇಡಂ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ 2011ರ ಏ. 13ರಂದು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ 27 ಜನ ಆರೋಪಿಗಳು ಸೇರಿಕೊಂಡು ಲಕ್ಷ್ಮಪ್ಪ ಚಿನ್ನಯ್ಯ ಮತ್ತು ನರಸಪ್ಪ ಚಿನ್ನಯ್ಯ ಅವರನ್ನು ಕೊಲೆ ಮಾಡಿದ್ದರು. ಪ್ರಕರಣದಲ್ಲಿ 27 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ […]

ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿ 13 ವರ್ಷಗಳ ನಂತರ ಪೊಲೀಸ್ ವಶಕ್ಕೆ Read More »

ಕುಟ್ಟ, ಮಡಿಕೇರಿ ಮರು ನಿರ್ಮಾಣಗೊಂಡ ರಸ್ತೆ ಉದ್ಘಾಟನೆ|ಕ್ಷೇತ್ರದ ಸಂಪೂರ್ಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ;ಎ.ಎಸ್. ಪೊನ್ನಣ್ಣ

ಸಮಗ್ರ ನ್ಯೂಸ್: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನವರು ಕುಟ್ಟ, ಮಡಿಕೇರಿ ರಸ್ತೆಯ ಮರುನಿರ್ಮಾಣ ಗೊಂಡ ಕಾಮಗಾರಿಯನ್ನು ಪೊನ್ನಂಪೇಟೆ ಮುಗುಟಗೇರಿಯಲ್ಲಿ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಎ.ಎಸ್ .ಪೊನ್ನಣ್ಣ ನವರು 1 ಕೋಟಿ 75 ಲಕ್ಷ ರೂಗಳಲ್ಲಿ ಸದರಿ ಕಾಮಗಾರಿ ನಡೆದಿದ್ದು ಉತ್ತಮ ಗುಣಮಟ್ಟದ ಕಾಮಗಾರಿ ನಡೆದಿದೆ. ಈ ನಿಟ್ಟಿನಲ್ಲಿ ಕಾಮಗಾರಿಯ ಬಗ್ಗೆ ನಿಗಾವಹಿಸಿದ ಗ್ರಾಮಸ್ಥರು ಅಭಿನಂದನಾರ್ಹರು ಎಂದು ತಿಳಿಸಿದರು. ಕ್ಷೇತ್ರದ ಸಂಪೂರ್ಣ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ತಾವು

ಕುಟ್ಟ, ಮಡಿಕೇರಿ ಮರು ನಿರ್ಮಾಣಗೊಂಡ ರಸ್ತೆ ಉದ್ಘಾಟನೆ|ಕ್ಷೇತ್ರದ ಸಂಪೂರ್ಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ;ಎ.ಎಸ್. ಪೊನ್ನಣ್ಣ Read More »

ಬೆಳಗಾವಿ:ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ|ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್:ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ನಲ್ಲಿ 28 ಪ್ರಯಾಣಿಕರು ಇದ್ದರು. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ತಕ್ಷಣ ಬಸ್ ಚಾಲಕ ಬಸ್ ನ್ನು ರಸ್ತೆ ಬದಿ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಬಸ್ ನಿಂದ ಕೆಲಗಿಸಿದ್ದಾರೆ. ಕ್ಷೇಣಾರ್ಧದಲ್ಲಿ ಬೆಂಕಿಯ ಕೆನ್ನಾಳಿಗೆ ಸಂಪೂರ್ಣ ಬಸ್ ಆವರಿಸಿದ್ದು,

ಬೆಳಗಾವಿ:ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ|ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು Read More »

ಕಾರು ಟ್ರ್ಯಾಕ್ಟರ್ ಮಧ್ಯೆ ಅಪಘಾತ| ಓರ್ವ ಸ್ಥಳದಲ್ಲೇ ಸಾವು| ಮೂವರ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ಕಾರು ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಿನ್ನೆ ಸಾಯಂಕಾಲ ಶಿರುಗುಪ್ಪಿ-ಕಾಗವಾಡ ಮಾರ್ಗದ ರಸ್ತೆಯ ಮಧ್ಯೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ತಾಸಗಾಂವ ತಾಲೂಕಿನ ಉಮೇಶ್ ಕಾಳೆ (46) ಸ್ಥಳದಲ್ಲಿ ಮೃತಪಟ್ಟ ವ್ಯಕ್ತಿಯೆಂದು ತಿಳಿದುಬಂದಿದೆ. MH 13 CS 0739 ವಾಹನದ ಸಂಖ್ಯೆಯ ಕಾರ ಬೆಳಗಾವಿಯಿಂದ ಮಹಾರಾಷ್ಟ್ರ ಕಡೆ ಸಂಚರಿಸುತ್ತಿದ್ದ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ

ಕಾರು ಟ್ರ್ಯಾಕ್ಟರ್ ಮಧ್ಯೆ ಅಪಘಾತ| ಓರ್ವ ಸ್ಥಳದಲ್ಲೇ ಸಾವು| ಮೂವರ ಸ್ಥಿತಿ ಗಂಭೀರ Read More »

ಗರಿಗೆದರಿದ ಷೇರು ಮಾರುಕಟ್ಟೆ| ವಾರಾಂತ್ಯದಲ್ಲಿ ಸಖತ್ ಏರಿಕೆ ಕಂಡ ಸೆನ್ಸೆಕ್ಸ್, ನಿಪ್ಟಿ

ಸಮಗ್ರ ನ್ಯೂಸ್: ಷೇರು ಮಾರುಕಟ್ಟೆ ವಾರಾಂತ್ಯದಲ್ಲಿ ಸಖತ್ ಹವಾ ಸೃಷ್ಟಿಸುತ್ತಿದೆ. ಬಿಎಸ್​ಇ ಮತ್ತು ಎನ್​ಎಸ್​ಇಯಲ್ಲಿ ಬಹಳಷ್ಟು ಷೇರುಗಳು ಸಕಾರಾತ್ಮಕ ಸ್ಪಂದನೆ ಪಡೆದಿವೆ. ಹಲವು ಸೂಚ್ಯಂಕಗಳು ಹಸಿರು ಬಣ್ಣದಲ್ಲಿವೆ. ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕಗಳು ಭರ್ಜರಿ ಏರಿಕೆ ಪಡೆದಿವೆ. ಅದರಲ್ಲೂ ಸೆನ್ಸೆಕ್ಸ್ ಹೊಸ ಎತ್ತರಕ್ಕೆ ಏರಿದೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ (bse) ಇಂದು ಶುಕ್ರವಾರ 73,574 ಅಂಕಗಳ ಮಟ್ಟ ಮುಟ್ಟಿತ್ತು. ಇದು ಈವರೆಗೆ ಸೆನ್ಸೆಕ್ಸ್ ಏರಿದ ಗರಿಷ್ಠ ಎತ್ತರ. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ50 ಸೂಚ್ಯಂಕ

ಗರಿಗೆದರಿದ ಷೇರು ಮಾರುಕಟ್ಟೆ| ವಾರಾಂತ್ಯದಲ್ಲಿ ಸಖತ್ ಏರಿಕೆ ಕಂಡ ಸೆನ್ಸೆಕ್ಸ್, ನಿಪ್ಟಿ Read More »

ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆಟೋಚಾಲಕ| ನಿರ್ಜನ ಪ್ರದೇಶದಲ್ಲಿ ನಡೆದಿತ್ತು ಭೀಕರ ಕ್ರೌರ್ಯ

ಸಮಗ್ರ ನ್ಯೂಸ್: ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.20ರ ಮುಂಜಾನೆ ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿದ ಕಾಮುಕ. ಮುಬಾರಕ್ (28) ಎಂಬ ಆಟೋ ಚಾಲಕ ಅತ್ಯಾಚಾರವೆಸಗಿ ಕೊಂದುಹಾಕಿದ್ದು, ಶಾಂತಿನಗರದ ಜನತಾಕೋ ಆಪರೇಟಿವ್ ಕಟ್ಟಡದ ಬಳಿ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಮಹಿಳೆ ಕಟ್ಟಡದಿಂದ ಬಿದ್ದು ಮೃತಪಟ್ಟಂತೆ ಕಾಣುತ್ತಿತ್ತು. ಮರಣೋತ್ತರ ಪರೀಕ್ಷೆ ವೇಳೆ ಅತ್ಯಾಚಾರವೆಸಗಿ ಕೊಂದಿರುವುದು ದೃಢವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆಟೋ ಚಾಲಕ ಮುಬಾರಕ್ ನನ್ನು

ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆಟೋಚಾಲಕ| ನಿರ್ಜನ ಪ್ರದೇಶದಲ್ಲಿ ನಡೆದಿತ್ತು ಭೀಕರ ಕ್ರೌರ್ಯ Read More »

ಬೆಂಗಳೂರಿನಲ್ಲಿ ಉಗ್ರರ ಕರಿನೆರಳು| ಸುಧಾರಿತ ಬಾಂಬ್ ಸ್ಪೋಟ ದೃಢಪಡಿಸಿದ ಸಿಎಂ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೃಢಪಡಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಜನಪ್ರಿಯ ಉಪಾಹಾರ ಗೃಹದಲ್ಲಿ ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬ ಕೆಫೆಯಲ್ಲಿ ಚೀಲವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ದೃಢಪಡಿಸಿದ್ದಾರೆ. ಆರಂಭಿಕ ವರದಿಗಳು ಚೀಲದಲ್ಲಿದ್ದ ವಸ್ತುವು ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾಯಿತು ಎಂದು ಸೂಚಿಸಿತ್ತು. ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯ ಗೃಹ ಸಚಿವರು ಕೆಫೆಗೆ

ಬೆಂಗಳೂರಿನಲ್ಲಿ ಉಗ್ರರ ಕರಿನೆರಳು| ಸುಧಾರಿತ ಬಾಂಬ್ ಸ್ಪೋಟ ದೃಢಪಡಿಸಿದ ಸಿಎಂ Read More »

ಸುಳ್ಯ: ಮಾ. 03, ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಮಗ್ರ ನ್ಯೂಸ್: ಸೇವಾ ಭಾರತೀ Helpline ಟ್ರಸ್ಟ್ ಸುಳ್ಯ (ರಿ) ಮತ್ತು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಮಿತ್ರ ಬಳಗ ಎಲಿಮಲೆ ಹಾಗೂ ಎಜೆ ಆಸ್ಪತ್ರೆ ಮಂಗಳೂರು ಸಹಕಾರದೊಂದಿಗೆ ಮಾ. 03ರಂದು ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಬೆಳ್ಳಿಗೆ 9 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಡೆಯಲಿದೆ. ಕ್ಯಾನ್ಸರ್ ಶಾಸ್ತ್ರ – ಕರುಳು, ಮೂತ್ರಕೋಶ, ಸ್ಥನ, ಗರ್ಭಕೋಶ, ಗರ್ಭನಾಳ, ಅಂಡಾಶಯ, ಶ್ವಾಸಕೋಶ, ಬಾಯಿ, ಗಂಟಲು, ಅನ್ನನಾಳ ಮುಂತಾದ ಕ್ಯಾನ್ಸರ್

ಸುಳ್ಯ: ಮಾ. 03, ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ Read More »

ಮಾ. 2, ಐಲೇಸಾ ಜೂಮ್ ವೇದಿಕೆಯಲ್ಲಿ ತಾಂತ್ರಿಕ ಅವಕಾಶಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯಕ್ರಮ| ಇಲ್ಲಿದೆ ಜೂಮ್ ಮೀಟಿಂಗ್ ಲಿಂಕ್

ಸಮಗ್ರ ನ್ಯೂಸ್:ಕೃತಕ ಬುದ್ದಿ ಮತ್ತೆ ಮುಂದಿನ ಅನಿವಾರ್ಯತೆ AI(Artificial Intelligence) -ADOPTION INVITABLE_ ಎಂಬ ವಿಚಾರವಾಗಿ ಮಾ. 2ರಂದು ಸಂಜೆ ಐಲೇಸಾ ಜೂಮ್ ವೇದಿಕೆಯಲ್ಲಿ ತಾಂತ್ರಿಕ ಅವಕಾಶಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯಕ್ರಮ ವೇಗವಾಗಿ ಬದಲಾಗುತ್ತಿರುವ ಭಾರತದಲ್ಲಿ ಆ ವೇಗಕ್ಕೆ ಹೊಂದಿಕೊಂಡು ನಮ್ಮ ವೃತ್ತಿ ಪ್ರವೃತ್ತಿಗಳನ್ನು ಬದಲಾಯಿಸಿಕೊಳ್ಳುವುದು ಇಂದಿನ ಅತ್ಯಂತ ಅಗತ್ಯಗಳಲ್ಲಿ ಒಂದು ಡಿಜಿಟಲ್ ಕ್ರಾಂತಿಯಲ್ಲಿ ಭಾರತ ಯಾವ ಮಟ್ಟದಲ್ಲಿ ಮುಂದುವರಿದು ಇಡೀ ವಿಶ್ವಕ್ಕೆ ಬೆರಗನ್ನು ಹುಟ್ಟಿಸಿತು ಅನ್ನುವುದು ಈಗ ಇತಿಹಾಸ. ಮುಂದಿನ ದಿನಗಳು ತಾಂತ್ರಿಕತೆಯ ಜೊತೆಗೆ

ಮಾ. 2, ಐಲೇಸಾ ಜೂಮ್ ವೇದಿಕೆಯಲ್ಲಿ ತಾಂತ್ರಿಕ ಅವಕಾಶಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯಕ್ರಮ| ಇಲ್ಲಿದೆ ಜೂಮ್ ಮೀಟಿಂಗ್ ಲಿಂಕ್ Read More »

ಕರೂರ್ ವೈಶ್ಯ ಬ್ಯಾಂಕ್​​ನಲ್ಲಿ ಉದ್ಯೋಗವಕಾಶ, ಇಲ್ಲಿದೆ ನೋಡಿ ಲಿಂಕ್

ಸಮಗ್ರ ಉದ್ಯೋಗ: ಕರೂರ್ ವೈಶ್ಯ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಬ್ಯುಸಿನೆಸ್ ಡೆವಲಪ್​ಮೆಂಟ್​ ಮ್ಯಾನೇಜರ್​​, ರಿಲೇಶನ್​​ಶಿಪ್​ ಮ್ಯಾನೇಜರ್​​​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್​ 2, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಶೈಕ್ಷಣಿಕ ಅರ್ಹತೆ:ಕರೂರ್ ವೈಶ್ಯ ಬ್ಯಾಂಕ್

ಕರೂರ್ ವೈಶ್ಯ ಬ್ಯಾಂಕ್​​ನಲ್ಲಿ ಉದ್ಯೋಗವಕಾಶ, ಇಲ್ಲಿದೆ ನೋಡಿ ಲಿಂಕ್ Read More »