Ad Widget .

ನಾಳೆ ರಾಜ್ಯಕ್ಕೆ ಅಮಿತ್ ಶಾ/ ಚನ್ನಪಟ್ಟಣದಲ್ಲಿ ರೋಡ್ ಶೋ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ.
ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಈ ಭೇಟಿ ನಡೆಯಲಿದ್ದು, ಲೋಕಸಭೆ ಚುನಾವಣೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಾಗುವುದು ಮತ್ತು ನಮ್ಮಲ್ಲಿರುವ ಮಾಹಿತಿಯನ್ನು ಅಮಿತ್ ಶಾ ಅವರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

Ad Widget . Ad Widget .

ರಾಜ್ಯದ 28 ಕ್ಷೇತ್ರಗಳನ್ನು ನಮ್ಮ ಮೈತ್ರಿಕೂಟ ಗೆಲ್ಲಬೇಕು. ಯಾವುದೇ ಕ್ಷೇತ್ರದಲ್ಲಿಯೂ ಸಮಸ್ಯೆ ಆಗಬಾರದು. ಹೊಂದಾಣಿಕೆಗೆ ಧಕ್ಕೆ ಆಗಬಾರದು, ಗುರಿ ತಲುಪಲು ಯಾವ ಲೋಪ ಆಗಬಾರದು ಎಂಬ ಉದ್ದೇಶ ನಮ್ಮದು. ಅದಕ್ಕೆ ಪೂರಕವಾಗಿ ಎಲ್ಲ ರೀತಿಯಲ್ಲಿ ಚರ್ಚೆ ಮಾಡ್ತವೆ. ನಂತರ ಸಂಜೆ ಚನ್ನಪಟ್ಟಣದಲ್ಲಿ ರೋಡ್ ಶೋದಲ್ಲಿ ಇಬ್ಬರೂ ಭಾಗವಹಿಸುತ್ತೇವೆ. ಇಡಿ ರಾಜ್ಯಕ್ಕೆ ಚನ್ನಪಟ್ಟಣದಿಂದಲೇ ಒಂದು ಸ್ಪಷ್ಟ ಸಂದೇಶ ಕೊಡುತ್ತೇವೆ ಎಂದರು ಕುಮಾರಸ್ವಾಮಿ ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *