ನೀತಿ ಸಂಹಿತೆ| ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರನ್ನು ತಪಾಸಣೆ ಮಾಡಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲೆಡೆ ನೀತಿ ಸಂಹಿತೆ ಜಾರಿಯಲ್ಲಿದೆ. ಅಲ್ಲಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ತನಿಖೆ ನಡೆಸಲಾಗುತ್ತಿದೆ.

Ad Widget ... ..

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರನ್ನು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕಾರು ತಪಾಸಣೆ ಮಾಡಿದ್ದಾರೆ. ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್‌ನಲ್ಲಿ ನಡೆದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಸಹೋದರ ಮಗಳ ಮದುವೆಗೆ ಹೋಗಿದ್ದ ಸಿಎಂ, ಗೃಹ ಸಚಿವ ಪರಮೇಶ್ವರ್‌ ಅವರು ಹಿಂದಿರುಗಿ ಬರುವಾಗ ತಪಾಸಣೆ ನಡೆಸಿದ್ದಾರೆ. ಈ ವೇಳೆ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್‌ ಸೇರಿ ಹಲವು ನಾಯಕರು ಅಲ್ಲಿ ಭಾಗಿಯಾಗಿದ್ದರು.

Ad Widget

Leave a Comment

Your email address will not be published. Required fields are marked *