ಸಮಗ್ರ ನ್ಯೂಸ್ : ನೀರು ಕುಡಿಯಲು ಹೋದ ಮಹಿಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಗೌರಮ್ಮ ಕರಿಗಾರ (48) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಜಮೀನಿಗೆ ಹೋಗಿದ್ದ ಗೌರಮ್ಮ ಬಿಸಿಲಿನ ತಾಪಕ್ಕೆ ಬಾಯಾರಿಕೆಯಾಗಿದ್ದು, ನೀರು ಕುಡಿಯಲು ಎಂದು ಜಮೀನಿನಲ್ಲಿದ್ದ ಕೃಷಿ ಹೊಂಡಕ್ಕೆ ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಕೃಷಿ ಹೊಂಡದಿಂದ ಹೊರಬರಲು ಆಗದೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಲಕ್ಷ್ಮೇಶ್ವರ ಠಾಣೆಯಲ್ಲಿ ದಾಖಲಾಗಿದೆ.