Ad Widget .

ನವದೆಹಲಿ: ಚುನಾವಣೆ ಮುಗಿಯುವರೆಗೆ ಕಾಂಗ್ರೆಸ್‌ ಪಕ್ಷದ ತೆರಿಗೆ ವಸೂಲಿ ಇಲ್ಲ| ಕೇಂದ್ರ ಭರವಸೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿಯುವರೆಗೂ ಕಾಂಗ್ರೆಸ್‌ ಪಕ್ಷ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.‌

Ad Widget . Ad Widget .

ಆದಾಯ ತೆರಿಗೆ ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್‌ ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾ. ಬಿ.ವಿ.ನಾಗರತ್ನ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತು.

Ad Widget . Ad Widget .

ಈ ವೇಳೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಚುನಾವಣೆ ನಡೆಯುತ್ತಿರುವುದರಿಂದ ಮತ್ತು ಚುನಾವಣೆಯ ನಂತರದ ವಿಚಾರಣೆಯವರೆಗೆ ಬಾಕಿ ಉಳಿಸಿರುವ ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ಜೂನ್ ಎರಡನೇ ವಾರದಲ್ಲಿ ಈ ವಿಚಾರವನ್ನು ಪಟ್ಟಿ ಮಾಡಿ ಎಂದು ಮನವಿ ಮಾಡಿದರು.

ಸರ್ಕಾರದ ಈ ಮನವಿಯನ್ನು ಕೇಳಿ ನ್ಯಾ. ನಾಗರತ್ನ ಅವರು, ನೀವು ಯಾರೊಬ್ಬರ ಬಗ್ಗೆ ಯಾವಾಗಲೂ ನಕಾರಾತ್ಮಕವಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್‌ ಪರ ಹಾಜರಾಗಿದ್ದ ವಕೀಲ ಅಭಿಷೇಕ್‌ ಮನು ಸಿಂಘ್ವಿ ಲಘುವಾಗಿ ಹೇಳಿದರು. ಇದಕ್ಕೆ ಸಿಂಘ್ವಿ, ನಾನು ಮೂಖನಾಗಿದ್ದೇನೆ. ಕೆಲವೇ ಬಾರಿ ನಾನು ಮೂಖನಾಗಿದ್ದೇನೆ ಎಂದು ಅಚ್ಚರಿ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿದೆ.

Leave a Comment

Your email address will not be published. Required fields are marked *