Ad Widget .

ಹದಿನೈದು ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ| ಇಂದಿನಿಂದ ನೂತನ ದರ ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ವಿದ್ಯುತ್‌ ಪರಿಷ್ಕರಣೆ ಮಾಡಿರುವ ಆದೇಶ ಸೋಮವಾರದಿಂದ (ಏ.1) ಜಾರಿಯಾಗಲಿದ್ದು, 100 ಯುನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡುವವರಿಗೆ ಪ್ರತಿ ಯುನಿಟ್‌ಗೆ 1.10 ರೂ. ಕಡಿಮೆಯಾಗಲಿದೆ. ತನ್ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್‌ ದರ ಕಡಿಮೆಯಾದಂತಾಗಲಿದೆ

Ad Widget . Ad Widget .

2024-25ನೇ ಸಾಲಿಗೆ ಅನ್ವಯವಾಗುವಂತೆ ಕೆಇಆರ್‌ಸಿ ಮಾಡಿರುವ ದರ ಪರಿಷ್ಕರಣೆ ಆದೇಶದಲ್ಲಿ ಈವರೆಗೆ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ 0-100 ವರೆಗಿನ ಯುನಿಟ್‌ ಹಾಗೂ 100ಕ್ಕಿಂತ ಹೆಚ್ಚು ಯುನಿಟ್ ಬಳಕೆಗೆ ಪ್ರತ್ಯೇಕವಾಗಿದ್ದ ಎಲ್.ಟಿ. ಗೃಹಬಳಕೆ ಶುಲ್ಕದ ಸ್ಲ್ಯಾಬ್‌ ರದ್ದುಪಡಿಸಲಾಗಿದೆ.

Ad Widget . Ad Widget .

ಎಷ್ಟೇ ಯುನಿಟ್ ಬಳಕೆ ಮಾಡಿದರೂ ಪ್ರತಿ ಯುನಿಟ್‌ಗೆ 5.90 ರು.ಗಳಂತೆ ದರ ನಿಗದಿ ಮಾಡಿದೆ. ಜತೆಗೆ ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್‌ ದರ ನಿಗದಿ ಮಾಡಿದೆ. ಇದರಿಂದ 100ಕ್ಕಿಂತ ಹೆಚ್ಚು ಯುನಿಟ್‌ ಬಳಕೆ ಮಾಡುವವರಿಗೆ 7 ರು. ಬದಲಿಗೆ ಪ್ರತಿ ಯುನಿಟ್‌ಗೆ 5.90 ರು. ಮಾತ್ರ ಶುಲ್ಕ ವಿಧಿಸಲಾಗುತ್ತದೆ. ಹೀಗಾಗಿ 15 ವರ್ಷಗಳ ಬಳಿಕ ವಿದ್ಯುತ್‌ ದರ ಕಡಿಮೆಯಾಗಿರುವ ಅನುಕೂಲವನ್ನು ಪಡೆಯಲಿದ್ದಾರೆ.

Leave a Comment

Your email address will not be published. Required fields are marked *