ಸಮಗ್ರ ನ್ಯೂಸ್: ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ 21,000 ಕೋಟಿ ರೂ. ರಕ್ಷಣಾ ರಫ್ತು ಗಡಿ ದಾಟಿದೆ ಎಂದು ರಕ್ಷಣಾ ಸಚಿವ ರಾಜನಾಥ್ ತಿಳಿಸಿದ್ದಾರೆ.
2023-24ರ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು 21,083 ಕೋಟಿಗೆ ತಲುಪಿದ್ದು, ಇದು ಹಿಂದಿನ ಹಣಕಾಸು ವರ್ಷಕ್ಕಿಂತ 32.5% ಹೆಚ್ಚಿಗೆಯಾಗಿದೆ. ಈ ವಿಚಾರವನ್ನು ಭಾರತದ ಜನರಿಗೆ ತಿಳಿಸಲು ಸಂತೋಷವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮೇ, 2023 ರಲ್ಲಿ ನೈಜೀರಿಯಾದಲ್ಲಿ ಭಾರತೀಯ ಡಯಾಸ್ಪೋರಾ ಸದಸ್ಯರೊಂದಿಗೆ ಸಂವಾದದ ಸಮಯದಲ್ಲಿ, ರಕ್ಷಣಾ ಸಚಿವರು ಆತ್ಮನಿರ್ಭರ ಭಾರತ್ ಮತ್ತು ಇತ್ತೀಚಿನ ವರ್ಷಗಳಲ್ಲಿ ರಕ್ಷಣಾ ರಫ್ತು ಮಹತ್ವದ ಪ್ರಗತಿಯ ಗುರಿಯನ್ನು ಸಾಧಿಸುವ ಬಗ್ಗೆ ಚರ್ಚಿಸಿದ್ದರು. ಈ ವೇಳೆ ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ವಲ್ರ್ಡ್ ಎಂದು ಪ್ರತಿಪಾದಿಸಿದ್ದರು.