ಸಮಗ್ರ ನ್ಯೂಸ್ : ಬಾಲಕ ಮನೆಯ ಮಹಡಿ ಮೇಲಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದ ಘಟನೆ ಇಂದು ಬಂಟ್ವಾಳದಲ್ಲಿ ನಡೆದಿದೆ.
ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕನಾಗಿದ್ದಾನೆ.
ಬಾಲಕ ಆದಿಶ್ ತಮ್ಮ ಮನೆಯ ಮಹಡಿಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದನು. ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಾಗಿದೆ.