ಸಮಗ್ರ ಉದ್ಯೋಗ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡೆಪ್ಯುಟಿ ಡೈರೆಕ್ಟರ್ ಹುದ್ದೆ ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಮೇ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಹಾಕಿ.
ವಯೋಮಿತಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 27, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 67,700-2,08,700
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಪ್ರಾದೇಶಿಕ ಕಚೇರಿ
3 ನೇ ಮಹಡಿ
ಸೌತ್ ವಿಂಗ್
ಖನಿಜ ಭವನ
ನಂ.49
ರೇಸ್ ಕೋರ್ಸ್ ರಸ್ತೆ
ಬೆಂಗಳೂರು- 560001