ಸಮಗ್ರ ಉದ್ಯೋಗ: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ಜೂನಿಯರ್ ರಿಸರ್ಚ್ ಫೆಲೋಶಿಪ್-I ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಏಪ್ರಿಲ್ 15, 2024 ರೊಳಗೆ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ.
ಶೈಕ್ಷಣಿಕ ಅರ್ಹತೆ:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 31,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್ಲೈನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಪ್ಲೈ ಮಾಡೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.